Tipu Sultan: ಟಿಪ್ಪು ಸುಲ್ತಾನ್​ ಕುರಿತು ಪ್ಯಾನ್​ ಇಂಡಿಯಾ ಸಿನಿಮಾ; ಮೋಷನ್​ ಪೋಸ್ಟರ್​ನಲ್ಲೇ ಹಲವು ಆರೋಪ

Tipu Movie Motion Poster: ಕನ್ನಡ, ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗಿನಲ್ಲಿ ‘ಟಿಪ್ಪು’ ಸಿನಿಮಾ ಬಿಡುಗಡೆ ಆಗಲಿದೆ. ಈ ಎಲ್ಲ ಭಾಷೆಗಳಲ್ಲೂ ಈಗ ಪೋಸ್ಟರ್ ರಿಲೀಸ್​ ಮಾಡಲಾಗಿದೆ.

Tipu Sultan: ಟಿಪ್ಪು ಸುಲ್ತಾನ್​ ಕುರಿತು ಪ್ಯಾನ್​ ಇಂಡಿಯಾ ಸಿನಿಮಾ; ಮೋಷನ್​ ಪೋಸ್ಟರ್​ನಲ್ಲೇ ಹಲವು ಆರೋಪ
ಟಿಪ್ಪು ಸಿನಿಮಾ ಪೋಸ್ಟರ್​
Follow us
ಮದನ್​ ಕುಮಾರ್​
|

Updated on: May 04, 2023 | 3:34 PM

ಮೈಸೂರಿನಲ್ಲಿ ಆಳ್ವಿಕೆ ನಡೆಸಿದ್ದ ಟಿಪ್ಪು ಸುಲ್ತಾನ್ (Tipu Sultan)​ ಬಗ್ಗೆ ಹಲವಾರು ಚರ್ಚೆ ನಡೆದಿದೆ. ಕೆಲವರು ಟಿಪ್ಪು ಪರವಾಗಿ ಮಾತನಾಡಿದರೆ, ಇನ್ನು ಕೆಲವರು ತೀವ್ರ ವಿರೋಧ ವ್ಯಕ್ತಪಡಿಸುತ್ತಾರೆ. ಅಚ್ಚರಿ ಎಂದರೆ ಟಿಪ್ಪು ಸುಲ್ತಾನ್​ ಕುರಿತಂತೆ ಈಗೊಂದು ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೂಡಿಬರುತ್ತಿದೆ. ಈ ಸಿನಿಮಾಗೆ ‘ಟಿಪ್ಪು’ (Tipu Movie) ಎಂದು ಶೀರ್ಷಿಕೆ ಇಡಲಾಗಿದೆ. ಇಂದು (ಮೇ 4) ಟಿಪ್ಪು ಸುಲ್ತಾನ್​ ಡೆತ್​ ಆ್ಯನಿವರ್ಸರಿ. ಆ ಪ್ರಯುಕ್ತ ಮೋಷನ್​ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಬಾಲಿವುಡ್​ ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ (Taran Adarsh) ಅವರು ಈ ಸಿನಿಮಾದ ಪೋಸ್ಟರ್​ ಶೇರ್​ ಮಾಡಿಕೊಂಡಿದ್ದಾರೆ. ಮೋಷನ್​ ಪೋಸ್ಟರ್​ನಲ್ಲಿ ಹಲವು ಅಂಶಗಳು ಹೈಲೈಟ್​ ಆಗಿವೆ. ಟಿಪ್ಪು ವಿರುದ್ಧ ಅನೇಕ ಗಂಭೀರ ಆರೋಪಗಳನ್ನು ಮಾಡಲಾಗಿದೆ. ಒಟ್ಟಿನಲ್ಲಿ ಈ ಸಿನಿಮಾದಿಂದ ಮತ್ತೆ ಚರ್ಚೆಯ ಕಾವು ಜೋರಾಗುವುದು ಖಚಿತ.

ಪವನ್​ ಶರ್ಮಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸಂದೀಪ್​ ಸಿಂಗ್​ ಮತ್ತು ರಷ್ಮಿ ಶರ್ಮಾ ಅವರು ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ನಿರ್ಮಾಣದಲ್ಲಿ ಇರೋಸ್​ ಇಂಟರ್​ನ್ಯಾಷನಲ್​ ಸಂಸ್ಥೆ ಕೂಡ ಪಾಲುದಾರಿಕೆ ಹೊಂದಿದೆ. ಟಿಪ್ಪು ಸುಲ್ತಾನ್​ ಮುಖಕ್ಕೆ ಮಸಿ ಬಳಿದಿರುವ ರೀತಿಯಲ್ಲಿ ಪೋಸ್ಟರ್​ ವಿನ್ಯಾಸಗೊಂಡಿದೆ.

ಟಿಪ್ಪು ನಿಜ ಕನಸುಗಳು ನಾಟಕ ನಿರ್ಮಾಣಕ್ಕೆ ಸಿದ್ದರಾಮಯ್ಯ ಪ್ರೇರಣೆ: ಅಡ್ಡಂಡ ಕಾರ್ಯಪ್ಪ

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ನಿರ್ಮಾಣ ಆಗಲಿರುವ ‘ಟಿಪ್ಪು’ ಸಿನಿಮಾ ಕನ್ನಡ, ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಈ ಎಲ್ಲ ಭಾಷೆಗಳಲ್ಲೂ ಈಗ ಪೋಸ್ಟರ್ ಬಿಡುಗಡೆ ಆಗಿದೆ. ಪಠ್ಯ ಪುಸ್ತಕಗಳಲ್ಲಿ ಟಿಪ್ಪು ಸುಲ್ತಾನನ ಸಾಧನೆಗಳ ಬಗ್ಗೆ ಬರೆಯಲಾಗಿತ್ತು. ಆದರೆ ಅದಕ್ಕೆ ವಿರುದ್ಧವಾದ ಅಂಶಗಳು ಈ ಮೋಷನ್​ ಪೋಸ್ಟರ್​ನಲ್ಲಿವೆ.

ಟಿಪ್ಪು ನಿಜ ಕನಸುಗಳು: ಈ ನಾಟಕ ಪ್ರದರ್ಶನದಿಂದ ಬಿಜೆಪಿಗೆ ಲಾಭವೂ ಇಲ್ಲ, ಕಾಂಗ್ರೆಸ್​ಗೆ ನಷ್ಟವೂ ಇಲ್ಲ: ಅಡ್ಡಂಡ ಕಾರ್ಯಪ್ಪ

‘ಮತಾಂಧ ಸುಲ್ತಾನನ ಕಥೆ’ ಎಂದು ಪೋಸ್ಟರ್​ನಲ್ಲಿ ಬರೆಯಲಾಗಿದೆ. ‘8 ಸಾವಿರ ದೇವಸ್ಥಾನ ಮತ್ತು 27 ಚರ್ಚ್​ಗಳನ್ನು ನಾಶ ಮಾಡಲಾಯಿತು. 40 ಲಕ್ಷ ಹಿಂದೂಗಳ ಮತಾಂತರ ಮಾಡಲಾಯಿತು ಮತ್ತು ಗೋಮಾಂಸ ತಿನ್ನುವಂತೆ ಒತ್ತಾಯಿಸಲಾಯಿತು. ಒಂದು ಲಕ್ಷಕ್ಕೂ ಅಧಿಕ ಹಿಂದೂಗಳನ್ನು ಜೈಲಿಗೆ ಕಳಿಸಲಾಯಿತು’ ಎಂಬಿತ್ಯಾದಿ ಆರೋಪಗಳನ್ನು ಪೋಷನ್​ ಪೋಸ್ಟರ್​ನಲ್ಲಿ ತೋರಿಸಲಾಗಿದೆ. ಸಿನಿಮಾ ಹೇಗೆ ಮೂಡಿಬರಬಹುದು ಎಂಬ ಕೌತುಕ ನಿರ್ಮಾಣ ಆಗಿದೆ.

‘ಟಿಪ್ಪು’ ಚಿತ್ರದ ಮೋಷನ್​ ಪೋಸ್ಟರ್​ ಬಗ್ಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಸಿನಿಮಾಗಳಿಂದ ಕೇವಲ ದ್ವೇಷ ಹೆಚ್ಚಾಗುತ್ತದೆ. ಬಾಲಿವುಡ್​ನವರು ಧರ್ಮದ ಬಗ್ಗೆ ಸಿನಿಮಾ ಮಾಡಿ ದುಡ್ಡು ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದು ಪ್ರೊಪೊಗಾಂಡ ಸಿನಿಮಾ ಎಂದು ನೆಟ್ಟಿಗರು ಟೀಕಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ