AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ವೀಕ್ಷಿಸಿ ಯಶ್ ತಾಕತ್ತು ಮೆಚ್ಚಿಕೊಂಡ ‘ಧುರಂಧರ್’ ನಿರ್ದೇಶಕ ಆದಿತ್ಯ ಧರ್ 

ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಗಳಿಕೆ ಕಾಣುತ್ತಿದೆ. ಇದೀಗ 'ಧುರಂಧರ್' ನಿರ್ದೇಶಕ ಆದಿತ್ಯ ಧರ್ ಇನ್‌ಸ್ಟಾಗ್ರಾಮ್‌ನಲ್ಲಿ 'ಟಾಕ್ಸಿಕ್' ಪೋಸ್ಟರ್ ಹಂಚಿಕೊಂಡು ಯಶ್‌ಗೆ ಬೆಂಬಲ ಸೂಚಿಸಿದ್ದು, ಇಬ್ಬರ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಬರಲಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

‘ಟಾಕ್ಸಿಕ್’ ವೀಕ್ಷಿಸಿ ಯಶ್ ತಾಕತ್ತು ಮೆಚ್ಚಿಕೊಂಡ ‘ಧುರಂಧರ್’ ನಿರ್ದೇಶಕ ಆದಿತ್ಯ ಧರ್ 
ಆದಿತ್ಯ ಧರ್-ಯಶ್
ರಾಜೇಶ್ ದುಗ್ಗುಮನೆ
|

Updated on: Sep 02, 2026 | 7:33 AM

Share

ಮುಖ್ಯಾಂಶಗಳು

  • 'ಟಾಕ್ಸಿಕ್' ನೋಡಿ ರಾಕಿ ಬಾಯ್ ಯಶ್‌ಗೆ ಜೈ ಎಂದ 'ಧುರಂಧರ್' ನಿರ್ದೇಶಕ
  • ಖ್ಯಾತ ಬಾಲಿವುಡ್ ನಿರ್ದೇಶಕನ ಬೆಂಬಲಕ್ಕೆ ಯಶ್ ಅಭಿಮಾನಿಗಳು ಫುಲ್ ಫಿದಾ!
  • ಮಿಶ್ರ ಪ್ರತಿಕ್ರಿಯೆ ನಡುವೆಯೂ 300 ಕೋಟಿ ಕ್ಲಬ್ ಸೇರಿದ 'ಟಾಕ್ಸಿಕ್

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್ ಆಗಿ ಎಲ್ಲೆಡೆ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಕೆಲವರು ಈ ಚಿತ್ರವನ್ನು ತೆಗಳಿದರೆ ಇನ್ನೂ ಕೆಲವರು ಸಿನಿಮಾ ಹಾಡಿ ಹೊಗಳಿದ್ದಾರೆ. ಈಗ ಈ ಸಾಲಿಗೆ ಆದಿತ್ಯ ಧಾರ್ ಕೂಡ ಸೇರ್ಪಡೆ ಆಗಿದ್ದಾರೆ. ಅವರು ‘ಟಾಕ್ಸಿಕ್’ ಚಿತ್ರವನ್ನು ವೀಕ್ಷಿಸಿದ್ದು ಯಶ್ ಅವರನ್ನು ಹಾಡಿ ಹೊಗಳಿದ್ದಾರೆ. ಈ ಸಂದರ್ಭದ ಪೋಸ್ಟ್ ವೈರಲ್ ಆಗಿದೆ. ಎಲ್ಲರೂ ಯಶ್ ಹಾಗೂ ಆದಿತ್ಯ ಧರ್ ಅವರು ಸಿನಿಮಾ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.

‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಹಾಗೂ ‘ಧುರಂಧರ್’ ಸಿನಿಮಾಗಳ ನಿರ್ದೇಶಕ ಆದಿತ್ಯ ಧರ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ‘ಟಾಕ್ಸಿಕ್’ ಸಿನಿಮಾದ ಯಶ್ ಅವರ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೋಸ್ಟರ್ ಜೊತೆಗೆ ಯಶ್ ಎಂದು ಬರೆದು ಕೆಂಪು ಹಾರ್ಟ್ ಮತ್ತು ತಾಕತ್ತು ತೋರಿಸೋ ಎಮೋಜಿ ಹಾಕಿದ್ದಾರೆ. ಈ ಮೂಲಕ ಯಶ್ ಶಕ್ತಿಗೆ ಆದಿತ್ಯ ಧರ್ ಕಡೆಯಿಂದ ಮೆಚ್ಚುಗೆ ಸಿಕ್ಕಂತೆ ಆಗಿದೆ.

ಆದಿತ್ಯ ಧರ್ ಅವರ ಈ ಇನ್‌ಸ್ಟಾಗ್ರಾಮ್ ಸ್ಟೋರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್ ಆಗಿದ್ದು, ಯಶ್ ಅಭಿಮಾನಿಗಳ ಮನ ಗೆದ್ದಿದೆ. ಸಿನಿಮಾ ಹಿನ್ನಡೆ ಅನುಭವಿಸುತ್ತಿರುವಾಗ ಬಾಲಿವುಡ್‌ನಿಂದ ಮೊದಲ ವ್ಯಕ್ತಿಯಾಗಿ ಆದಿತ್ಯ ಧರ್ ಬೆಂಬಲಕ್ಕೆ ನಿಂತಿರುವುದನ್ನು ಅಭಿಮಾನಿಗಳು ಶ್ಲಾಘಿಸುತ್ತಿದ್ದಾರೆ. ‘ಖ್ಯಾತ ನಿರ್ದೇಶಕರು ಸಿನಿಮಾದ ಹಿಂದಿನ ದೂರದೃಷ್ಟಿ ಮತ್ತು ಶ್ರಮವನ್ನು ಗುರುತಿಸಿದಾಗ ಅದುವೇ ನಿಜವಾದ ಔರಾ’ ಎಂದು ಅಭಿಮಾನಿಯೊಬ್ಬರು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಗೆ 0.5 ರೇಟಿಂಗ್ ನೀಡಿದ ಮಹೇಶ್ ಬಾಬು ಪುತ್ರ ಗೌತಮ್

ಇನ್ನು ಕೆಲ ಅಭಿಮಾನಿಗಳು ಈ ಪೋಸ್ಟ್ ನೋಡಿದ ನಂತರ ಯಶ್ ಹಾಗೂ ಆದಿತ್ಯ ಧರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾವೇನಾದರೂ ಬರಲಿದೆಯೇ ಎಂಬ ಕುತೂಹಲ ವ್ಯಕ್ತಪಡಿಸಿದ್ದಾರೆ. ಇಬ್ಬರೂ ಒಟ್ಟಿಗೆ ಕೆಲಸ ಮಾಡಬೇಕು ಎಂದು ಅನೇಕರು ಕೋರಿದ್ದಾರೆ. ಸದ್ಯ ‘ಟಾಕ್ಸಿಕ್’ ಚಿತ್ರವು ಟೀಕೆಗಳ ನಡುವೆಯೂ ಭಾರತದ ಬಾಕ್ಸ್ ಆಫೀಸ್‌ನಲ್ಲಿ ಇಲ್ಲಿಯವರೆಗೆ ಒಟ್ಟು 300 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ