ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಭಾರೀ ನಿರೀಕ್ಷೆಗಳಿವೆ. ಜೂನ್ 8ರಂದು ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಜನ್ಮದಿನದಂದು ಪ್ರಮುಖ ಅಪ್‌ಡೇಟ್ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ. 'ಕೆಜಿಎಫ್' ನಂತರ ಯಶ್ ಅವರ ಈ ಜಾಗತಿಕ ಯೋಜನೆ ಕುತೂಹಲ ಮೂಡಿಸಿದ್ದು, ಅಂದೇ ಹೊಸ ಪೋಸ್ಟರ್ ಅಥವಾ ಖಚಿತ ದಿನಾಂಕ ಘೋಷಣೆ ಮಾಡುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡುವ ಸಾಧ್ಯತೆಯಿದೆ.

ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು?
ಯಶ್

Updated on: Jun 03, 2026 | 1:21 PM

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಅಪ್‌ಡೇಟ್‌ಗಾಗಿ ಇಡೀ ಭಾರತೀಯ ಚಿತ್ರರಂಗ ಕಾದು ಕುಳಿತಿದೆ. ‘ಕೆಜಿಎಫ್’ ಸರಣಿಯ ಅದ್ದೂರಿ ಸಕ್ಸಸ್ ನಂತರ ಯಶ್ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ದೊಡ್ಡ ಯೋಜನೆಯೊಂದಿಗೆ ‘ಟಾಕ್ಸಿಕ್’ ಚಿತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಈಗ ಎಲ್ಲರ ಗಮನ ಜೂನ್ 8ರ ಮೇಲಿದೆ.

ಸದ್ಯ ‘ಟಾಕ್ಸಿಕ್’ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿದೆ. ಮತ್ತೊಂದೆಡೆ ಸಿನಿಮಾದ ರಿಲೀಸ್ ದಿನಾಂಕ ಪದೇ ಪದೇ ಮುಂದಕ್ಕೆ ಹೋಗುತ್ತಿದೆ. ಸಿನಿಮಾದ ಅಧಿಕೃತ ಬಿಡುಗಡೆ ದಿನಾಂಕದ ಬಗ್ಗೆ ಚಿತ್ರತಂಡ ಇನ್ನು ಯಾವುದೇ ಸ್ಪಷ್ಟ ಘೋಷಣೆ ಮಾಡಿಲ್ಲ. ಆದರೆ, ಈಗ ಕೇಳಿಬರುತ್ತಿರುವ ಮಾಹಿತಿ ಪ್ರಕಾರ, ಜೂನ್ 8ರಂದು ‘ಟಾಕ್ಸಿಕ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗುವ ದಟ್ಟ ಸಾಧ್ಯತೆಗಳಿವೆ ಎನ್ನಲಾಗಿದೆ.

ಜೂನ್ 8ರಂದು ‘ಟಾಕ್ಸಿಕ್’ ಚಿತ್ರದ ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಜನ್ಮದಿನ. ಈ ವಿಶೇಷ ಸಂದರ್ಭವನ್ನು ಮತ್ತಷ್ಟು ಅದ್ದೂರಿಯಾಗಿಸಲು ಚಿತ್ರತಂಡ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ. ಅಂದೇ ಸಿನಿಮಾದ ಹೊಸ ಪೋಸ್ಟರ್ ಅಥವಾ ಖಚಿತ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಅನೌನ್ಸ್ ಮಾಡುವ ಮೂಲಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ಗಿಫ್ಟ್ ನೀಡಲು ಮೇಕರ್ಸ್ ಸಜ್ಜಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ‘ಟಾಕ್ಸಿಕ್ ಸೆಟ್​​ನಲ್ಲಿ ಹಾಯ್, ಹೆಲೋ ಹೇಳೋಕೆ ಅವಕಾಶವೇ ಇರಲಿಲ್ಲ’; ಕಿಯಾರಾ

ಮೊದಲ ಪ್ಲ್ಯಾನ್ ಪ್ರಕಾರ ಸಿನಿಮಾ ಈ ಹಿಂದೆಯೇ ಬರಬೇಕಿತ್ತಾದರೂ, ವಿಶ್ವ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಬೇಕಿರುವುದರಿಂದ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಯಶ್ ಅವರ ಮಾಸ್ ಲುಕ್ ಮತ್ತು ಗೀತು ಮೋಹನ್‌ದಾಸ್ ಅವರ ವಿಭಿನ್ನ ಮೇಕಿಂಗ್ ಶೈಲಿ ಎರಡು ಒಟ್ಟಿಗೆ ಸೇರಿರುವುದರಿಂದ ಈ ಚಿತ್ರದ ಮೇಲಿನ ನಿರೀಕ್ಷೆಗಳು ಆಕಾಶ ಮುಟ್ಟಿವೆ. ಸಿನಿಮಾ ಅನೌನ್ಸ್ ಆದ ದಿನದಿಂದಲೂ ಅಭಿಮಾನಿಗಳು ಈ ಚಿತ್ರದ ರಿಲೀಸ್ ದಿನಕ್ಕಾಗಿ ಕಾಯುತ್ತಿದ್ದಾರೆ. ಈಗ ಜೂನ್ 8ರಂದು ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಹುಟ್ಟುಹಬ್ಬದ ದಿನ ಬಿಗ್ ಅಪ್​​ಡೇಟ್ ಸಿಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:20 pm, Wed, 3 June 26

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us