AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಪೋಸ್ಟ್​​ಪೋನ್ ಆಗಿದ್ದಕ್ಕೆ ‘ಧುರಂಧರ್ 2’ಗೆ ಆಗೋ ಲಾಭ ಎಷ್ಟು?

'ಟಾಕ್ಸಿಕ್' vs 'ಧುರಂಧರ್ 2' ನಡುವಿನ ಪೈಪೋಟಿ ಈಗ ಮುಕ್ತವಾಗಿದೆ. ಯುದ್ಧ ಭೀತಿಯ ಕಾರಣದಿಂದ 'ಟಾಕ್ಸಿಕ್' ರಿಲೀಸ್ ಮುಂದಕ್ಕೆ ಹೋಗಿದೆ. ಇದರಿಂದ 'ಧುರಂಧರ್ 2'ಗೆ ಹೆಚ್ಚು ಚಿತ್ರಮಂದಿರಗಳು ಲಭ್ಯವಾಗಿವೆ, ಭರ್ಜರಿ ಕಲೆಕ್ಷನ್ ನಿರೀಕ್ಷಿಸಲಾಗಿದೆ. ಆದರೆ, 'ಧುರಂಧರ್ 2' ಚಿತ್ರದ 4 ಗಂಟೆಗಳ ಅವಧಿ ಪ್ರೇಕ್ಷಕರನ್ನು ಸೆಳೆಯುತ್ತದೆಯೇ ಎಂಬ ಪ್ರಶ್ನೆ ಮೂಡಿದೆ.

‘ಟಾಕ್ಸಿಕ್’ ಪೋಸ್ಟ್​​ಪೋನ್ ಆಗಿದ್ದಕ್ಕೆ ‘ಧುರಂಧರ್ 2’ಗೆ ಆಗೋ ಲಾಭ ಎಷ್ಟು?
ಯಶ್-ರಣವೀರ್
ರಾಜೇಶ್ ದುಗ್ಗುಮನೆ
|

Updated on:Mar 04, 2026 | 2:25 PM

Share

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸಾಕಷ್ಟು ನಡೆಯಿತು. ಆದರೆ, ಸದ್ಯಕ್ಕೆ ‘ಟಾಕ್ಸಿಕ್’ ತಂಡ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿಕೊಂಡಿದೆ. ಇದು ಯಶ್ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ವಿಶ್ವ ಮಟ್ಟದಲ್ಲಿ ಮೂಡಿರುವ ಯುದ್ಧ ಭೀತಿಯ ಕಾರಣದಿಂದ ‘ಟಾಕ್ಸಿಕ್’ ರಿಲೀಸ್ ವಿಳಂಬ ಆಗುತ್ತಿದೆ ಎಂದು ತಂಡ ಹೇಳಿದೆ. ಈ ಬೆಳವಣಿಗೆಯಿಂದ ‘ಧುರಂಧರ್ 2’ ಹಾದಿ ಸುಗಮನ ಆಗಿದೆ. ಹೆಚ್ಚಿನ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುವ ಅವಕಾಶ ಇದೆ.

‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಎರಡೂ ಸಿನಿಮಾಗಳು ಬಿಗ್ ಬಜೆಟ್ ಚಿತ್ರಗಳು. ಎರಡೂ ಸಿನಿಮಾಗಳಿಗೆ ಹೆಚ್ಚಿನ ಚಿತ್ರಮಂದಿರಗಳು ಬೇಕು. ಎರಡೂ ಚಿತ್ರಗಳ ಬಜೆಟ್ ದೊಡ್ಡದಿರುವುದರಿಂದ ಹೆಚ್ಚಿನ ಕಲೆಕ್ಷನ್ ಮಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಎಲ್ಲಾ ಕಾರಣದಿಂದ ಯಾವುದಾದರೂ ಒಂದು ಚಿತ್ರ ಮುಂದಕ್ಕೆ ಹೋಗಲೇಬೇಕು ಎಂಬ ಪರಿಸ್ಥಿತಿ ನಿರ್ಮಾಣ ಆಗಿತ್ತು. ಎರಡೂ ತಂಡಗಳು ಹಠ ಹಿಡಿದು ಕುಳಿತಿದ್ದವು. ಆದರೆ, ಯುದ್ಧ ಭೀತಿ ಕಾರಣದಿಂದ ‘ಟಾಕ್ಸಿಕ್’ ಸದ್ಯದ ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಂಡಿದೆ.

‘ಧುರಂಧರ್ 2’ ಸಿನಿಮಾ ಹಿಂದಿ ಮಾತ್ರವಲ್ಲದೆ, ಕನ್ನಡ, ತಮಿಳು, ತೆಲುಗು ಮೊದಲಾದ ಭಾಷೆಗಳಲ್ಲಿ ತೆರೆಗೆ ಬರುತ್ತಿವೆ. ಈಗ ‘ಟಾಕ್ಸಿಕ್’ ರಿಲೀಸ್ ವಿಳಂಬದಿಂದ ದಕ್ಷಿಣ ಭಾರತದಲ್ಲೂ ಚಿತ್ರಕ್ಕೆ ಹೆಚ್ಚಿನ ಥಿಯೇಟರ್ ಸಿಗಲಿದೆ. ಇವುಗಳಿಂದ ಸಿನಿಮಾ ಅಬ್ಬರದ ಕಲೆಕ್ಷನ್ ಮಾಡಬಹುದು. ಅರಬ್ ರಾಷ್ಟ್ರಗಳಲ್ಲಿ ಈ ಚಿತ್ರದ ಮೇಲೆ ಬ್ಯಾನ್ ಇರುವುದರಿಂದ ಯುದ್ಧ ಭೀತಿ ಈ ಸಿನಿಮಾ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ. ಮೊದಲ ವಾರದಲ್ಲೇ ‘ಧುರಂಧರ್ 2’ಗೆ ಹೆಚ್ಚುವರಿಯಾಗಿ 100 ಕೋಟಿ ರೂಪಾಯಿ ಹರಿದು ಬರೋ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಧುರಂಧರ್ 2’ ಸಿನಿಮಾದ ಅವಧಿ ಬರೋಬ್ಬರಿ 4 ಗಂಟೆ? ರಿಸ್ಕ್ ತೆಗೆದುಕೊಂಡ ಚಿತ್ರತಂಡ

‘ಧುರಂಧರ್ 2’ ಸಿನಿಮಾದ ಅವಧಿ 4 ಗಂಟೆ ಇದೆ ಎನ್ನಲಾಗಿದೆ. ಇಷ್ಟು ದೀರ್ಘ ಅವಧಿ ಇಟ್ಟುಕೊಂಡು ಪ್ರೇಕ್ಷಕರನ್ನು ಥಿಯೇಟರ್​​ಗೆ ಕರೆತರೋದು ಒಂದು ದೊಡ್ಡ ಸವಾಲು. ಅದನ್ನು ಸಿನಿಮಾ ಹೇಗೆ ಎದುರಿಸುತ್ತದೆ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:46 am, Wed, 4 March 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!