ರಾಮಾಯಣ ಸಿನಿಮಾಗೆ ಶೂಟಿಂಗ್ ಆರಂಭಿಸಿದ ರಾಕಿಂಗ್ ಸ್ಟಾರ್​ ಯಶ್

ಅಕ್ಸಾ ಬೀಚ್​ನಲ್ಲಿ ‘ರಾಮಾಯಣ’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ‘ರಾಕಿಂಗ್ ಸ್ಟಾರ್​’ ಯಶ್ ಅವರು ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಕೆಲಸಗಳ ಜೊತೆಗೆ ‘ರಾಮಾಯಣ’ ಸಿನಿಮಾಗೂ ಡೇಟ್ಸ್ ನೀಡಿದ್ದಾರೆ.

ರಾಮಾಯಣ ಸಿನಿಮಾಗೆ ಶೂಟಿಂಗ್ ಆರಂಭಿಸಿದ ರಾಕಿಂಗ್ ಸ್ಟಾರ್​ ಯಶ್
Yash

Updated on: Feb 22, 2025 | 4:24 PM

ನಟ ಯಶ್ ಅವರಿಗೆ ಇರುವ ಡಿಮ್ಯಾಂಡ್ ಅಷ್ಟಿಷ್ಟಲ್ಲ. ಕನ್ನಡ ಚಿತ್ರರಂಗ ಮಾತ್ರವಲ್ಲದೇ ಬಾಲಿವುಡ್​ನಲ್ಲಿ ಕೂಡ ಅವರಿಗೆ ಸಖತ್ ಬೇಡಿಕೆ ಇದೆ. ‘ರಾಮಾಯಣ’ ಸಿನಿಮಾದಲ್ಲಿ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಬಗ್ಗೆ ಈಗ ಮಾಹಿತಿ ಸಿಕ್ಕಿದೆ. ಯಶ್ ಅವರು ಯಾವಾಗ ಈ ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ ಎಂದು ಕೇಳುತ್ತಿದ್ದವರಿಗೆ ಇದು ಎಗ್ಸೈಟಿಂಗ್ ನ್ಯೂಸ್. ಈಗಾಗಲೇ ಯಶ್ ಅವರು ‘ರಾಮಾಯಣ’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಮುಂಬೈನಲ್ಲಿ ಅದ್ದೂರಿಯಾಗಿ ಚಿತ್ರೀಕರಣ ನಡೆಯುತ್ತಿದೆ.

ಯಶ್ ಅವರು ಇಷ್ಟು ದಿನ ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಅದರ ನಡುವೆ ಬಿಡುವು ಮಾಡಿಕೊಂಡು ಮುಂಬೈಗೆ ತೆರಳಿದ್ದಾರೆ. ಅಲ್ಲಿ ಫೆಬ್ರವರಿ 21ರಿಂದಲೇ ‘ರಾಮಾಯಣ’ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿ ಆಗಿದ್ದಾರೆ. 2 ದಿನಗಳ ಕಾಲ ಕಾಸ್ಟ್ಯೂಮ್ ಟೆಸ್ಟ್ ಮಾಡಲಾಗಿದೆ. ಬಳಿಕ ಯುದ್ಧದ ದೃಶ್ಯಗಳ ಚಿತ್ರೀಕರಣ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ.

ಬಾಲಿವುಡ್​ನ ‘ರಾಮಾಯಣ’ ಸಿನಿಮಾಗೆ ನಿತೇಶ್ ತಿವಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಣಬೀರ್ ಕಪೂರ್ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ನಟಿ ಸಾಯಿ ಪಲ್ಲವಿ ಅವರಿಗೆ ಸೀತೆಯ ಪಾತ್ರ ನೀಡಲಾಗಿದೆ. ಬಹುತಾರಾಗಣದ ಈ ಸಿನಿಮಾದ ಮೇಲೆ ಬಹಳ ನಿರೀಕ್ಷೆ ಇದೆ. ವರದಿಗಳ ಪ್ರಕಾರ ರಣಬೀರ್ ಕಪೂರ್ ಅವರು ಈಗಾಗಲೇ ತಮ್ಮ ಪಾತ್ರಕ್ಕೆ ಶೇಕಡ 90ರಷ್ಟು ಚಿತ್ರೀಕರಣವನ್ನು ಮುಗಿಸಿದ್ದಾರೆ.

ಈ ಸಿನಿಮಾದ ನಿರ್ಮಾಣದಲ್ಲೂ ಯಶ್ ಅವರು ಪಾಲುದಾರಿಕೆ ಹೊಂದಿದ್ದಾರೆ. ಹಾಗಾಗಿ ಅವರಿಗೆ ಈ ಪ್ರಾಜೆಕ್ಟ್ ತುಂಬ ಮಹತ್ವದ್ದಾಗಿದೆ. ಮುಂಬೈನ ಅಕ್ಸಾ ಬೀಚ್​ನಲ್ಲಿ ಯುದ್ಧದ ದೃಶ್ಯಗಳ ಶೂಟಿಂಗ್ ಮಾಡಲಾಗುತ್ತಿದ್ದು, ಅದರಲ್ಲಿ ಯಶ್ ಪಾಲ್ಗೊಂಡಿದ್ದಾರೆ. ಯುದ್ಧದ ದೃಶ್ಯ ಆಗಿದ್ದರೂ ಕೂಡ ಇದರಲ್ಲಿ ರಣಬೀರ್ ಕಪೂರ್​ ಅವರು ಭಾಗಿಯಾಗಿಲ್ಲ ಎನ್ನಲಾಗಿದೆ. ಮುಂದಿನ ದೃಶ್ಯಗಳನ್ನು ಸ್ಟುಡಿಯೋದಲ್ಲಿ ಚಿತ್ರೀಕರಿಸಲಾಗುವುದು ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಕೆಟ್ಟ ಸಿನಿಮಾ ಹೇಗೆ ಗೆದ್ದಿತೊ‘: ಯಶ್ ಅಭಿಮಾನಿಗಳ ಕೆಣಕಿದ ವರ್ಮಾ

ಭಾರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಮೊದಲು ಶೂಟಿಂಗ್ ವೇಳೆ ರಣಬೀರ್​ ಕಪೂರ್​ ಹಾಗೂ ಸಾಯಿ ಪಲ್ಲವಿ ಅವರ ಫೋಟೋಗಳು ಲೀಕ್ ಆಗಿದ್ದವು. ಆ ಬಳಿಕ ಚಿತ್ರತಂಡ ಹೆಚ್ಚಿನ ಎಚ್ಚರಿಕೆ ವಹಿಸುತ್ತಿದೆ. ರಾವಣನಾಗಿ ಯಶ್ ಅವರ ಫಸ್ಟ್​ ಲುಕ್ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us