AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಇಬ್ಬರಿಗೆ ಜಾಮೀನು ಮಂಜೂರು; ಆರ್ಯನ್​ಗೂ ಬೇಲ್ ಸಿಗುವ ನಿರೀಕ್ಷೆ

Aryan Khan Case: ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್​​ನಲ್ಲಿ ಮುಂದುವರೆಯಲಿದೆ. ಇದೇ ಪ್ರಕರಣದಲ್ಲಿ ಎನ್​ಡಿಪಿಎಸ್ ಕೋರ್ಟ್ ಇಬ್ಬರಿಗೆ ಜಾಮೀನು ನೀಡಿದ್ದು, ಆರ್ಯನ್ ಪರ ವಾದಕ್ಕೆ ಸಹಕಾರಿಯಾಗಲಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

Aryan Khan: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಇಬ್ಬರಿಗೆ ಜಾಮೀನು ಮಂಜೂರು; ಆರ್ಯನ್​ಗೂ ಬೇಲ್ ಸಿಗುವ ನಿರೀಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Updated By: shivaprasad.hs|

Updated on: Oct 27, 2021 | 11:36 AM

Share

ಮುಂಬೈ: ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan Khan) ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇಂದು (ಅಕ್ಟೋಬರ್ 27) ಮುಂದುವರೆಸಲಿದೆ. ಮಧ್ಯಾಹ್ನ 2.30ಕ್ಕೆ  ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳಿಗೆ ನಿನ್ನೆ ಸೆಷನ್ಸ್ ಕೋರ್ಟ್​​ನಿಂದ ಜಾಮೀನು ಮಂಜೂರಾಗಿದೆ. ಹೀಗಾಗಿ ಅದೇ ಮಾನದಂಡದಲ್ಲಿ ಆರ್ಯನ್ ಖಾನ್​ಗೂ ಜಾಮೀನು ನೀಡಲು ವಕೀಲರು ಕೋರ್ಟ್​ಗೆ ಮನವಿ ಮಾಡುವ ಸಾಧ್ಯತೆ ಇದೆ.

ನಿನ್ನೆ ನಡೆದ ವಿಚಾರಣೆಯಲ್ಲಿ ಆರ್ಯನ್ ಪರ ವಾದ ಮಾಡಿರುವ ವಕೀಲರಾದ ಮುಕುಲ್ ರೋಹಟಗಿ, ಆರ್ಯನ್ ಖಾನ್ ನಿಂದ ಡ್ರಗ್ಸ್ ವಶಪಡಿಸಿಕೊಂಡಿಲ್ಲ. ಆರ್ಯನ್ ಖಾನ್​ಗೆ ಡ್ರಗ್ಸ್ ಸೇವನೆ ಬಗ್ಗೆ ವೈದ್ಯಕೀಯ ಪರೀಕ್ಷೆಯನ್ನೇ ನಡೆಸಿಲ್ಲ. ಬೇರೆಯವರ ಬಳಿ ಡ್ರಗ್ಸ್ ಇದ್ದರೆ ಅದಕ್ಕೆ ಆರ್ಯನ್ ಖಾನ್ ಹೊಣೆಯಲ್ಲ. ಆರ್ಯನ್ ಖಾನ್, ವಾಟ್ಸಾಪ್ ಚಾಟ್​ಗೂ ಈ ಕೇಸ್​ಗೂ ಸಂಬಂಧ ‌ಇಲ್ಲ. ಆರ್ಯನ್ ಖಾನ್ ಬಂಧನವೇ ಆಕ್ರಮ ಎಂದು ವಾದ ಮಂಡಿಸಿದ್ದರು. ಇಂದು ಎನ್​ಸಿಬಿ ಪರ ಎಎಸ್​ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಲಿದ್ದಾರೆ. ವಾದ ಪ್ರತಿವಾದ ಇಂದು ಮುಕ್ತಾಯವಾಗುವ ನಿರೀಕ್ಷೆ ಇದ್ದು, ಬಳಿಕ ಜಾಮೀನು ಅರ್ಜಿಯ ಬಗ್ಗೆ ಬಾಂಬೆ ಹೈಕೋರ್ಟ್ ಆದೇಶ ನೀಡಲಿದೆ.

ಈ ಮೊದಲು ಎರಡು ಬಾರಿ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿತ್ತು. ಅಕ್ಟೋಬರ್ 2ರಂದು ಕ್ರೋಸ್ ಶಿಪ್ ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು. ಸದ್ಯ ಆರ್ಯನ್ ಖಾನ್ ಆರ್ಥರ್ ರೋಡ್ ಜೈಲಿನಲ್ಲಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 30ರವರೆಗೆ ವಿಸ್ತರಿಸಲಾಗಿದೆ.

ಎನ್​ಸಿಬಿ ಅಧಿಕಾರಿಗಳಿಂದ ಸಮೀರ್ ವಾಂಖೆಡೆ ವಿಚಾರಣೆ: ಸಮೀರ್ ವಾಂಖೆಡೆ ವಿರುದ್ಧ ಲಂಚ ವಸೂಲಿ ಆರೋಪ ಪ್ರಕರಣಕ್ಕೆ ಸಂಬಂದಪಟ್ಟಂತೆ ಇಂದು ಎನ್​ಸಿಬಿ ಅಧಿಕಾರಿಗಳಿಂದ ಸಮೀರ್ ವಾಂಖೆಡೆ ವಿಚಾರಣೆ ನಡೆಯಲಿದೆ. ಡೆಪ್ಯುಟಿ ಡೈರೆಕ್ಟರ್ ಜನರಲ್‌ ಜ್ಞಾನೇಂದ್ರ ಸಿಂಗ್ ನೇತೃತ್ವದಲ್ಲಿ ಐವರು ಎನ್​ಸಿಬಿ ಅಧಿಕಾರಿಗಳಿಂದ ವಿಚಾರಣೆ ನಡೆಯಲಿದೆ. ಕೆ.ಪಿ‌ ಗೋಸಾವಿ ಹಾಗೂ ಪ್ರಭಾಕರ್ ಸೈಲ್‌ ಅವರನ್ನೂ ಕೂಡ ಎನ್​ಸಿಬಿ ತಂಡ  ವಿಚಾರಣೆ ನಡೆಸಲಿದೆ.

ಇದನ್ನೂ ಓದಿ:

Trishulam: ಹೈದರಾಬಾದ್ ಫಿಲ್ಮ್ ಫೆಡರೇಷನ್‌ನಿಂದ ಹಣಕ್ಕೆ ಬೇಡಿಕೆ; ರವಿಚಂದ್ರನ್, ಉಪೇಂದ್ರ ನಟನೆಯ ‘ತ್ರಿಶೂಲಂ’ ಶೂಟಿಂಗ್​ಗೆ ಅಡ್ಡಿ

Aryan Khan: ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್; ಮುಂದಿನ ವಿಚಾರಣೆ ಯಾವಾಗ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ