AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಲಿವುಡ್​ಗೆ ಅಪರಿಚಿತನಾಗಿದ್ದ ಯಶ್ 500 ಕೋಟಿ ರೂ. ಬಿಸ್ನೆಸ್ ಮಾಡುವಾಗ ಪಠಾಣ್​ ಯಶಸ್ಸು ಯಾವ ಲೆಕ್ಕ?’ ಆರ್​ಜಿವಿ

‘ಕೆಜಿಎಫ್​ 2’ ಚಿತ್ರ ಬಾಲಿವುಡ್​ನಲ್ಲಿ 430 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಬಾಲಿವುಡ್ ಮಂದಿಗೆ ಯಶ್ ಪರಿಚಯಗೊಂಡಿದ್ದೇ ‘ಕೆಜಿಎಫ್​’ ಸರಣಿಯಿಂದ. ಈ ಸಿನಿಮಾ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು.

‘ಬಾಲಿವುಡ್​ಗೆ ಅಪರಿಚಿತನಾಗಿದ್ದ ಯಶ್ 500 ಕೋಟಿ ರೂ. ಬಿಸ್ನೆಸ್ ಮಾಡುವಾಗ ಪಠಾಣ್​ ಯಶಸ್ಸು ಯಾವ ಲೆಕ್ಕ?’ ಆರ್​ಜಿವಿ
ಶಾರುಖ್ ಖಾನ್​-ಯಶ್
ರಾಜೇಶ್ ದುಗ್ಗುಮನೆ
|

Updated on: Feb 02, 2023 | 7:12 AM

Share

ಶಾರುಖ್ ಖಾನ್ ನಟನೆಯ ‘ಪಠಾಣ್​’ (Pathaan Movie) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿದೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ ಏಳು ದಿನಕ್ಕೆ 300 ಕೋಟಿ ರೂಪಾಯಿ ಬಿಸ್ನೆಸ್ ಮಾಡಿ ಬೀಗಿದೆ. ಈ ಯಶಸ್ಸಿನ ಬಗ್ಗೆ ಒಬ್ಬೊಬ್ಬರು ಒಂದೊದು ರೀತಿ ಹೇಳುತ್ತಿದ್ದಾರೆ. ಕೆಲವರು ಶಾರುಖ್ (Shah Rukh Khan) ಅವರನ್ನು ಹೊಗಳಿದರೆ ಇನ್ನೂ ಕೆಲವರು ಕ್ಷುಲ್ಲಕ ಕಾರಣ ಇಟ್ಟುಕೊಂಡು ಚಿತ್ರವನ್ನು ತೆಗಳುವ ಕೆಲಸ ಮಾಡುತ್ತಿದ್ದಾರೆ. ಈಗ ರಾಮ್ ಗೋಪಾಲ್ ವರ್ಮಾ ಅವರು ‘ಪಠಾಣ್​’ ಸಿನಿಮಾ ಯಶಸ್ಸಿನ ಕುರಿತು ಟೀಕೆ ಮಾಡಿದ್ದಾರೆ. ಯಶ್ ನಟನೆಯ ‘ಕೆಜಿಎಫ್​ 2’ ಚಿತ್ರವನ್ನು ‘ಪಠಾಣ್​’ಗೆ ಹೋಲಿಕೆ ಮಾಡಿ ಅವರು ತೀರ್ಪು ನೀಡಿದ್ದಾರೆ.

‘ಕೆಜಿಎಫ್​ 2’ ಚಿತ್ರ ಬಾಲಿವುಡ್​ನಲ್ಲಿ 430 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಬಾಲಿವುಡ್ ಮಂದಿಗೆ ಯಶ್ ಪರಿಚಯಗೊಂಡಿದ್ದೇ ‘ಕೆಜಿಎಫ್​’ ಸರಣಿಯಿಂದ. ಈ ಸಿನಿಮಾ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ಈ ವಿಚಾರ ಇಟ್ಟುಕೊಂಡು ಆರ್​ಜಿವಿ ಮಾತನಾಡಿದ್ದಾರೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಇರುವ ಶಾರುಖ್ ಖಾನ್ ಅವರು ಇಷ್ಟು ಬಿಸ್ನೆಸ್ ಮಾಡೋದು ಅವರಿಗೆ ದೊಡ್ಡದು ಎನಿಸಿಲ್ಲ.

‘ಬಾಲಿವುಡ್​​​ನಲ್ಲಿ ಯಾರಿಗೂ ಗೊತ್ತಿಲ್ಲದ ವ್ಯಕ್ತಿ ಯಶ್ ಅವರು 500 ಕೋಟಿ ರೂಪಾಯಿ ಬಿಸ್ನೆಸ್ (ಕೆಜಿಎಫ್ 2) ಮಾಡುವಾಗ ಶಾರುಖ್ ಖಾನ್ ಅವರು 500 ಕೋಟಿ ಕಮಾಯಿ ಮಾಡುವುದರಲ್ಲಿ ವಿಶೇಷ ಏನಿದೆ?’ ಎಂದು ರಾಮ್​ ಗೋಪಾಲ್ ವರ್ಮಾ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಇದನ್ನೂ ಓದಿ: ದಿನ ಕಳೆದಂತೆ ತಗ್ಗುತ್ತಿದೆ ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಕಲೆಕ್ಷನ್​; ಇಲ್ಲಿದೆ ಕಾರಣ

‘ಸ್ಟಾರ್​ಡಂ ಅನ್ನೋದು ಮೊದಲಿನ ರೀತಿ ಇಲ್ಲ. ಸಿನಿಮಾ ಯಾವ ರೀತಿ ಇದೆ ಅನ್ನೋದು ಮಾತ್ರ ಮುಖ್ಯವಾಗುತ್ತದೆ. ಯಶ್​ಗಿಂತ ಶಾರುಖ್​ ಖಾನ್ ಅವರದ್ದು ದೊಡ್ಡ ಹೆಸರು. ಆದರೆ, ಯಶ್ ಕೂಡ ಬಿಸ್ನೆಸ್ ಮಾಡುತ್ತಾರೆ. ಕಾಂತಾರ, ಪುಷ್ಪದಂತಹ ಸಿನಿಮಾ ಕೂಡ ದೊಡ್ಡ ಗೆಲುವು ಕಾಣುತ್ತದೆ. ಹೀಗಾಗಿ ಸ್ಟಾರ್​​ಡಂ ಅನ್ನೋದು ಮೊದಲಿನ ರೀತಿಯೇ ಇದೆ ಎಂದು ನನಗೆ ಅನಿಸುತ್ತಿಲ್ಲ’ ಎಂದಿದ್ದಾರೆ ರಾಮ್​ಗೋಪಾಲ್ ವರ್ಮಾ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ