AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಶಾರುಖ್ ಖಾನ್​​ಗೆ ರಾಷ್ಟ್ರ ಪ್ರಶಸ್ತಿ; ಹಿರಿಯ ನಟಿ ಊರ್ವಶಿ ಅಸಮಾಧಾನ

71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳು ಘೋಷಣೆ ಆದಾಗಿನಿಂದ ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ‘ಜವಾನ್’ ಚಿತ್ರದ ನಟನೆಗಾಗಿ ಶಾರುಖ್ ಖಾನ್ ಅವರಿಗೆ ಬೆಸ್ಟ್ ಆ್ಯಕ್ಟರ್ ಪ್ರಶಸ್ತಿ ನೀಡಿದ್ದು ಹಲವರಿಗೆ ಸರಿ ಎನಿಸಿಲ್ಲ. ನಟಿ ಊರ್ವಶಿ ಕೂಡ ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಆಯ್ಕೆಗೆ ಮಾನದಂಡ ಏನು ಎಂದು ಅವರು ಪ್ರಶ್ನೆ ಎತ್ತಿದ್ದಾರೆ.

ನಟ ಶಾರುಖ್ ಖಾನ್​​ಗೆ ರಾಷ್ಟ್ರ ಪ್ರಶಸ್ತಿ; ಹಿರಿಯ ನಟಿ ಊರ್ವಶಿ ಅಸಮಾಧಾನ
Shah Rukh Khan, Urvashi
ಮದನ್​ ಕುಮಾರ್​
|

Updated on: Aug 04, 2025 | 7:02 PM

Share

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಅವರು ಇದೇ ಮೊದಲ ಬಾರಿಗೆ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2023ರಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ಇತ್ತೀಚೆಗೆ ರಾಷ್ಟ್ರ ಪ್ರಶಸ್ತಿ ಘೋಷಣೆ ಆಯಿತು. ‘ಜವಾನ್’ ಸಿನಿಮಾದ ಅಭಿನಯದಕ್ಕಾಗಿ ಶಾರುಖ್ ಖಾನ್ ಅವರು ‘ಬೆಸ್ಟ್ ಆ್ಯಕ್ಟರ್ ನ್ಯಾಷನಲ್ ಅವಾರ್ಡ್’ (Best Actor National Award) ಪಡೆದಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಆದರೆ ಶಾರುಖ್ ಖಾನ್ ಅವರಿಗೆ ‘ಅತ್ಯುತ್ತಮ ನಟ’ ರಾಷ್ಟ್ರ ಪ್ರಶಸ್ತಿ ನೀಡಿದ್ದನ್ನು ಕೆಲವರು ಪ್ರಶ್ನಿಸಿದ್ದಾರೆ. ಹಿರಿಯ ನಟಿ ಊರ್ವಶಿ (Urvashi) ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಲಯಾಳಂ ಭಾಷೆಯ ‘ಪೂಕಾಲಂ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ವಿಜಯ ರಾಘವನ್ ಅವರಿಗೆ ‘ಅತ್ಯುತ್ತಮ ಪೋಷಕ ನಟ’ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅಲ್ಲದೇ, ಮಲಯಾಳಂನ ‘ಉಳ್ಳೋಳುಕ್ಕು’ ಸಿನಿಮಾದ ನಟನೆಗಾಗಿ ಊರ್ವಶಿ ಅವರು ‘ಅತ್ಯುತ್ತಮ ಪೋಷಕ ನಟಿ’ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜ್ಯೂರಿ ತಂಡದವರು ಶಾರುಖ್ ಖಾನ್ ಅವರನ್ನು ಅತ್ಯುತ್ತಮ ನಟನನ್ನಾಗಿ ಆಯ್ಕೆ ಮಾಡಿದ್ದಕ್ಕೆ ಮಾನದಂಡ ಏನು ಎಂದು ಊರ್ವಶಿ ಅವರು ಪ್ರಶ್ನಿಸಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಊರ್ವಶಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ವಿಜಯ ರಾಘವನ್ ಎಂಥ ಶ್ರೇಷ್ಠ ನಟ. ಶಾರುಖ್ ಖಾನ್ ಮತ್ತು ವಿಜಯ ರಾಘವನ್ ನಡುವೆ ಜೂರಿಗಳು ಏನನ್ನು ಪರಿಗಣಿಸಿದರು? ಒಬ್ಬರು ಪೋಷಕ ನಟನಾದರೆ, ಇನ್ನೊಬ್ಬರು ಅತ್ಯುತ್ತಮ ನಟ ಆಗಿದ್ದು ಹೇಗೆ? ಇದಕ್ಕೆ ಮಾನದಂಡಗಳೇನು’ ಎಂದು ಊರ್ವಶಿ ಕೇಳಿದ್ದಾರೆ.

‘ನಾವು ಈ ರೀತಿಯ ಪ್ರಶ್ನೆಗಳನ್ನು ಕೇಳಬೇಕು. ನಾವು ಕೂಡ ತೆರಿಗೆ ಕಟ್ಟುತ್ತೇವೆ. ವಿಜಯ ರಾಘವನ್ ಅವರಿಗೆ ಚಿತ್ರರಂಗದಲ್ಲಿ ದಶಕಗಳ ಅನುಭವ ಇದೆ. ಅವರು ಮಾಡಿದ ಸಿನಿಮಾ ಬಿಗ್ ಬಜೆಟ್​​ನದ್ದಲ್ಲ. ಬೇರೆ ಭಾಷೆಯವರು ಮಾಡುವ ರೀತಿ 250 ದಿನ ಚಿತ್ರೀಕರಣ ಮಾಡುವಂಥದ್ದೂ ಅಲ್ಲ’ ಎಂದಿದ್ದಾರೆ ಊರ್ವಶಿ. ‘ಪೂಕಾಲಂ’ ಸಿನಿಮಾಕ್ಕಾಗಿ ವಿಜಯ ರಾಘವನ್ ಹಾಕಿದ ಶ್ರಮಕ್ಕೆ ಇನ್ನಷ್ಟು ಮನ್ನಣೆ ಸಿಗಬೇಕಿತ್ತು ಎಂಬುದು ಊರ್ವಶಿ ಅವರ ಅಭಿಪ್ರಾಯ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಇನ್ನಷ್ಟು ರಾಷ್ಟ್ರ ಪ್ರಶಸ್ತಿ ಸಿಗಬೇಕು: ವಿವಾದದ ನಡುವೆ ನಿರ್ದೇಶಕನ ಹೇಳಿಕೆ

71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪಟ್ಟಿಯಲ್ಲಿ ನಟಿ ರಾಣಿ ಮುಖರ್ಜಿ ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಸಿಕ್ಕಿದೆ. ‘ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿವಾದಿತ ‘ದಿ ಕೇರಳ ಸ್ಟೋರಿ’ ಸಿನಿಮಾದ ನಿರ್ದೇಶನಕ್ಕಾಗಿ ಸುದೀಪ್ತೋ ಸೇನ್ ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಿದ್ದನ್ನು ಕೂಡ ಹಲವರು ಖಂಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ