AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ವಯಸ್ಸಲ್ಲಿ ಗೋಲಿ ಆಡೋಕೂ ಬರ್ತಾ ಇರಲಿಲ್ಲ’; ಸೂರ್ಯವಂಶಿ ಬಗ್ಗೆ ಅಮಿತಾಭ್ ಮೆಚ್ಚುಗೆ

15 ವರ್ಷದ ವೈಭವ್ ಸೂರ್ಯವಂಶಿ IPL 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸಿದ್ದಾರೆ. ಅವರ ದಾಖಲೆಯ ಪ್ರದರ್ಶನಕ್ಕೆ ಇಡೀ ದೇಶವೇ ಬೆರಗಾಗಿದೆ. ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಮತ್ತು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ವೈಭವ್ ಆಟವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ನನಗೆ 15ರಲ್ಲಿದ್ದಾಗ ಗೋಲಿ ಆಡಲೂ ಬರ್ತಿರಲಿಲ್ಲ, ಇವನು ಇಷ್ಟು ಅದ್ಭುತವಾಗಿ ಆಡುತ್ತಿದ್ದಾನೆ’ ಎಂದು ಅಮಿತಾಭ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

‘ಆ ವಯಸ್ಸಲ್ಲಿ ಗೋಲಿ ಆಡೋಕೂ ಬರ್ತಾ ಇರಲಿಲ್ಲ’; ಸೂರ್ಯವಂಶಿ ಬಗ್ಗೆ ಅಮಿತಾಭ್ ಮೆಚ್ಚುಗೆ
ಅಮಿತಾಭ್-ವೈಭವ್
ರಾಜೇಶ್ ದುಗ್ಗುಮನೆ
|

Updated on:May 30, 2026 | 2:31 PM

Share

15 ವರ್ಷದ ಯುವ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅವರ ಅಬ್ಬರದ ಆಟಕ್ಕೆ ಇಡೀ ದೇಶವೇ ಫಿದಾ ಆಗಿದೆ. ಐಪಿಎಲ್​​ನಲ್ಲಿ ಆರ್​​ಆರ್ ಪರ ಆಡಿದ ಅವರು, ದಾಖಲೆಯ ಮೇಲೆ ದಾಖಲೆ ಬರೆದಿದ್ದಾರೆ. ಬಾಲಿವುಡ್‌ನ ನಟ ಅಮಿತಾಭ್ ಬಚ್ಚನ್ ಅವರು (Amitabh Bachchan) ವೈಭವ್ ಆಟವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಇದು ವೈಭವ್ ಅವರ ಖುಷಿಯನ್ನು ಹೆಚ್ಚಿಸಿದೆ.

ಅಮಿತಾಭ್ ಬಚ್ಚನ್ ಅವರು ಬಾಲಿವುಡ್ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಅವರಿಂದ ಆಶೀರ್ವಾದ ಸಿಕ್ಕರೆ ಸಾಕು ಎಂದು ಅನೇಕರು ಬಯಸುತ್ತಾ ಇರುತ್ತಾರೆ. ಈಗ ವೈಭವ್​​ಗೆ ಹೊಗಳಿಕೆ ಹಾಗೂ ಆಶೀರ್ವಾದ ಎರಡೂ ಒಂದರಲ್ಲೇ ಸಿಕ್ಕಿದೆ. ‘ನನಗೆ 15 ವರ್ಷವಿದ್ದಾಗ ಗೋಲಿ ಆಡಲು ಸಹ ಸರಿಯಾಗಿ ಬರುತ್ತಿರಲಿಲ್ಲ. ಆದರೆ ಈ ಹುಡುಗ ಈ ವಯಸ್ಸಿಗೆ ಇಷ್ಟು ಅದ್ಭುತವಾಗಿ ಆಡುತ್ತಿದ್ದಾನೆ’ ಎಂದು ಬಿಗ್ ಬಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅನಾರೋಗ್ಯದ ವದಂತಿಗೆ ತೆರೆ ಎಳೆದ ಅಮಿತಾಭ್ ಬಚ್ಚನ್; ಎಂದಿನಂತೆ ಫ್ಯಾನ್ಸ್ ದರ್ಶನ

ಅಮಿತಾಭ್ ಮಾತ್ರವಲ್ಲದೆ ಟೀಂ ಇಂಡಿಯಾದ ಮಾಜಿ ಆಟಗಾರ, ಕ್ರಿಕೆಟ್ ಲೋಕದ ದೇವರು ಸಚಿನ್ ತೆಂಡೂಲ್ಕರ್ ಕೂಡ ಇತ್ತೀಚೆಗೆ ಟ್ವಿಟರ್ ಖಾತೆಯಲ್ಲಿ ವೈಭವ್ ಬ್ಯಾಟಿಂಗ್ ಶೈಲಿಯನ್ನು ಕೊಂಡಾಡಿದ್ದಾರೆ. ಐಪಿಎಲ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ 15 ವರ್ಷದ ಎಡಗೈ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಈ ವರ್ಷದ ಅಂಕಿ-ಅಂಶ ಅಚ್ಚರಿ ತರಿಸುವಂತಿದೆ.

  • ಒಟ್ಟು ಪಂದ್ಯಗಳು: 16
  • ಒಟ್ಟು ರನ್‌ಗಳು: 776
  • ಬ್ಯಾಟಿಂಗ್ ಸರಾಸರಿ: 48.50
  • ಸ್ಟ್ರೈಕ್ ರೇಟ್: 237.31
  • ಅರ್ಧಶತಕಗಳು: 5
  • ಶತಕಗಳು: 1
  • ಒಟ್ಟು ಸಿಕ್ಸರ್‌ಗಳು: 72 (ಒಂದೇ ಐಪಿಎಲ್ ಸೀಸನ್‌ನಲ್ಲಿ ಬ್ಯಾಟರ್ ಒಬ್ಬರು ಬಾರಿಸಿದ ಗರಿಷ್ಠ ಸಿಕ್ಸರ್ ದಾಖಲೆ)
  • ಗರಿಷ್ಠ ಸ್ಕೋರ್: 103

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:20 pm, Sat, 30 May 26

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್