ಪ್ರೇಮಿಗಳ ದಿನದ ಹೊಸ್ತಿಲಲ್ಲೇ ರಾಖಿ ಸಾವಂತ್ ದಾಂಪತ್ಯ ಅಂತ್ಯ; ಕಾಂಟ್ರವರ್ಸಿ ನಟಿಯ ಗಟ್ಟಿ ನಿರ್ಧಾರ

ಗಂಡನ ಜೊತೆಗಿನ ಸಂಬಂಧವನ್ನು ಸಂಪೂರ್ಣವಾಗಿ ಕಡಿದುಕೊಳ್ಳಲು ರಾಖಿ ಸಾವಂತ್​ ನಿರ್ಧರಿಸಿದ್ದಾರೆ. ಆ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

ಪ್ರೇಮಿಗಳ ದಿನದ ಹೊಸ್ತಿಲಲ್ಲೇ ರಾಖಿ ಸಾವಂತ್ ದಾಂಪತ್ಯ ಅಂತ್ಯ; ಕಾಂಟ್ರವರ್ಸಿ ನಟಿಯ ಗಟ್ಟಿ ನಿರ್ಧಾರ
ರಿತೇಶ್​, ರಾಖಿ ಸಾವಂತ್
Follow us
ಮದನ್​ ಕುಮಾರ್​
|

Updated on:Feb 14, 2022 | 12:56 PM

ನಟಿ ರಾಖಿ ಸಾವಂತ (Rakhi Sawant) ಅವರು ಮಾಡಿಕೊಂಡ ವಿವಾದಗಳು ಒಂದೆರಡಲ್ಲ.‌ ವಿಚಿತ್ರ ನಡೆ-ನುಡಿಯ ಕಾರಣದಿಂದ ಅವರು ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ‌. ಬಿಗ್ ಬಾಸ್ ಕಾರ್ಯಕ್ರಮಕ್ಕೆ ತೆರಳಿದ ಮೇಲೆ ಅವರ ಜನಪ್ರಿಯತೆ ಹೆಚ್ಚಾಯಿತು. ವೈಯಕ್ತಿಕ ಜೀವನದಲ್ಲಿ ಅವರು ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ. ಅನೇಕ ದಿನಗಳ ಕಾಲ ರಾಖಿ ಸಾವಂತ್​ ಅವರ ಮದುವೆ ಒಂದು ನಿಗೂಢವಾಗಿಯೇ ಉಳಿದುಕೊಂಡಿತ್ತು. ಅವರು ಯಾರನ್ನು ಮದುವೆ ಆಗಿದ್ದಾರೆ ಎಂಬುದೇ ಬಹಿರಂಗ ಆಗಿರಲಿಲ್ಲ.‌ ನಂತರ ಬಿಗ್ ಬಾಸ್ (Bigg Boss 15) ಕಾರ್ಯಕ್ರಮದಲ್ಲಿ ಅವರು ಆ ವಿಚಾರವನ್ನು ಜಗಜ್ಜಾಹೀರು ಮಾಡಿದ್ದರು. ಇನ್ನೇನು ರಾಖಿ ಸಾವಂತ ಅವರು ದಾಂಪತ್ಯ ಜೀವನದಲ್ಲಿ ಸೆಟಲ್ ಆದರು ಎಂದುಕೊಳ್ಳುವಾಗಲೇ ಬ್ಯಾಡ್ ನ್ಯೂಸ್ ಕೇಳಿಬಂದಿದೆ. ದಾಂಪತ್ಯ ಜೀವನಕ್ಕೆ ರಾಖಿ ಸಾವಂತ ಅವರು ಅಂತ್ಯ ಹಾಡಿದ್ದಾರೆ. ಪತಿ ರಿತೇಶ್ ಅವರಿಂದ ತಾವು ಬೇರ್ಪಟ್ಟಿರುವ ವಿಷಯವನ್ನು ಸೋಶಿಯಲ್ ಮೀಡಿಯಾ ಮೂಲಕ ಅವರು ತಿಳಿಸಿದ್ದಾರೆ.‌ ವ್ಯಾಲೆಂಟೈನ್ ಡೇ (Valentine’s Day) ಆಚರಣೆಗೂ ಒಂದು ದಿನ ಮುನ್ನ ಅಂದರೆ, ಫೆ.13ರಂದು ರಾಖಿ ಸಾವಂತ ಅವರು ಗಂಡನಿಂದ ಬೇರೆ ಆಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕೇವಲ ಬಿಗ್ ಬಾಸ್‌ನಲ್ಲಿ ಟಿಆರ್‌ಪಿ ಗಿಟ್ಟಿಸುವ ಸಲುವಾಗಿ ರಾಖಿ ಸಾವಂತ ಅವರು ಮದುವೆ ಆಗಿದ್ರಾ? ಈಗ ಈ ಪ್ರಶ್ನೆ ಮೂಡಿದೆ‌.‌ ‘ಬಿಗ್ ಬಾಸ್ 15’ರಲ್ಲಿ ವೈಲ್ಡ್​ ಕಾರ್ಡ್ ಎಂಟ್ರಿ ಮೂಲಕ ರಾಖಿ ಸಾವಂತ್ ಮತ್ತು ಅವರ ಪತಿ ರಿತೇಶ್ ಭಾಗವಹಿಸಿದ್ದರು. ಆದರೆ ಆ ಶೋ ಅಂತ್ಯವಾದ ಬಳಿಕ ಅವರಿಬ್ಬರು ನಾನೊಂದು ತೀರ ನೀನೊಂದು ತೀರ ಎಂಬಂತಾದರು. ಸದ್ಯಕ್ಕೆ ನಾವು ಜಸ್ಟ್ ಫ್ರೆಂಡ್ಸ್ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು. ಈಗ ಸಂಪೂರ್ಣವಾಗಿ ಗಂಡನ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳಲು ರಾಖಿ ಸಾವಂತ್​ ನಿರ್ಧರಿಸಿದ್ದಾರೆ. ಆ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

‘ವ್ಯಾಲೆಂಟೈನ್ಸ್​ ಡೇ ದಿನಕ್ಕೂ ಮುನ್ನವೇ ಈ ರೀತಿ ಆಗಿದ್ದರ ಬಗ್ಗೆ ನನಗೆ ತೀವ್ರ ಬೇಸರವಿದೆ. ಆದರೆ ಇಂಥ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಿತ್ತು. ನಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸಿದೆವು. ಆದರೆ ನಾವು ದೂರವಾಗುವುದೇ ಉತ್ತಮ ಎನಿಸಿತು. ನನ್ನ ಆರೋಗ್ಯ ಮತ್ತು ವೃತ್ತಿಜೀವನದ ಬಗ್ಗೆ ನಾನು ಗಮನ ಹರಿಸಬೇಕು. ರಿತೇಶ್​ಗೆ ಒಳ್ಳೆಯದಾಗಲಿ ಅಂತ ಹಾರೈಸುತ್ತೇನೆ’ ಎಂದು ರಾಖಿ ಸಾವಂತ್​ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಹಿಂದಿ ಬಿಗ್​ ಬಾಸ್​ 14ನೇ ಸೀಸನ್​ನಲ್ಲಿ ರಾಖಿ ಸಾವಂತ್​ ಸ್ಪರ್ಧಿಸಿದ್ದರು. ಆಗ ಮೊದಲ ಬಾರಿಗೆ ಗಂಡನ ಬಗ್ಗೆ ಪ್ರಸ್ತಾಪ ಮಾಡಿದ್ದರು. ಜಗತ್ತಿನ ಮುಂದೆ ಬರುವಂತೆ ರಿತೇಶ್​ ಬಳಿ ಮನವಿ ಮಾಡಿಕೊಂಡರೂ ಕೂಡ ಅವರು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಅಂತಿಮವಾಗಿ ಬಿಗ್​ ಬಾಸ್​ 15ನೇ ಸೀಸನ್​ನಲ್ಲಿ ಅವರಿಬ್ಬರು ಜೋಡಿಯಾಗಿ ಕಾಣಿಸಿಕೊಂಡಿದ್ದರು. ಅದಾಗಿ ಕೆಲವೇ ದಿನಗಳು ಕಳೆಯುವುದರೊಳಗೆ ಇಬ್ಬರ ಮದುವೆ ಮುರಿದು ಬಿದ್ದಿದೆ.

ಇದನ್ನೂ ಓದಿ:

ರಾಖಿ ಸಾವಂತ್​ಗೆ ಪಾಠ ಕಲಿಸಿ, ಪ್ರಾಮಿಸ್​ ಮಾಡಿದ್ದ ಸಲ್ಲು; ಎಲ್ಲವನ್ನೂ ಬಾಯ್ಬಿಟ್ಟ ನಟಿ

ಯಾರ ಕಣ್ಣಿಗೂ ಕಾಣಿಸಿಕೊಳ್ಳದ ಹುಡುಗನನ್ನು ರಾಖಿ ಸಾವಂತ್​ ಮದುವೆ ಆಗಿದ್ದೇಕೆ? ಇದರ ಹಿಂದಿದೆ ಡಾನ್​ ಕೈವಾಡ

Published On - 8:01 am, Mon, 14 February 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ