Varun Dhawan: ವರುಣ್ ಧವನ್ ಹಾಗೂ ನತಾಶಾ ದಲಾಲ್ ದಂಪತಿಗೆ ಹೆಣ್ಣು ಮಗು

ವರುಣ್ ಧವನ್ ಹಾಗೂ ಡೇವಿಡ್ ಮುಂಬೈನ ಖಾಸಗಿ ಆಸ್ಪತ್ರೆಗೆ ನಡೆದು ಹೊರಟಿದ್ದರು. ಈ ವೇಳೆ ಅಲ್ಲಿದ್ದ ಪಾಪರಾಜಿಗಳು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ‘ವರುಣ್​ಗೆ ಹೆಣ್ಣು ಮಗು ಜನಿಸಿದ್ದು ನಿಜವೇ’ ಎಂದು ಕೇಳಲಾಗಿದೆ. ಇದಕ್ಕೆ ಡೇವಿಡ್ ಅವರು ಹೌದು ಎಂದಿದ್ದಾರೆ. ಇದರ ಜೊತೆಗೆ ವಿಶ್ ಮಾಡಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ.  

Varun Dhawan: ವರುಣ್ ಧವನ್ ಹಾಗೂ ನತಾಶಾ ದಲಾಲ್ ದಂಪತಿಗೆ ಹೆಣ್ಣು ಮಗು
ವರುಣ್​-ನತಾಶಾ
Follow us
ರಾಜೇಶ್ ದುಗ್ಗುಮನೆ
|

Updated on: Jun 04, 2024 | 6:58 AM

ಬಾಲಿವುಡ್​ನ ಸೆಲೆಬ್ರಿಟಿ ಜೋಡಿ ವರುಣ್ ಧವನ್ ಹಾಗೂ ನತಾಶಾ ದಲಾಲ್ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ. ಈ ವಿಚಾರವನ್ನು ವರುಣ್ ತಂದೆ ಡೇವಿಡ್ ಧವನ್ (David Dhawan) ಅವರು ಖಚಿತಪಡಿಸಿದ್ದಾರೆ. ಸದ್ಯ ವರುಣ್ ಹಾಗೂ ಪತ್ನಿ ನತಾಶಾಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಈ ದಂಪತಿ ಮಗುವಿನ ಮುಖ ರಿವೀಲ್ ಮಾಡಲಿ ಎಂದು ಬಯಸುತ್ತಿದ್ದಾರೆ.

ವರುಣ್ ಧವನ್ ಹಾಗೂ ಡೇವಿಡ್ ಮುಂಬೈನ ಖಾಸಗಿ ಆಸ್ಪತ್ರೆಗೆ ನಡೆದು ಹೊರಟಿದ್ದರು. ಈ ವೇಳೆ ಅಲ್ಲಿದ್ದ ಪಾಪರಾಜಿಗಳು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ‘ವರುಣ್​ಗೆ ಹೆಣ್ಣು ಮಗು ಜನಿಸಿದ್ದು ನಿಜವೇ’ ಎಂದು ಕೇಳಲಾಗಿದೆ. ಇದಕ್ಕೆ ಡೇವಿಡ್ ಅವರು ಹೌದು ಎಂದಿದ್ದಾರೆ. ಇದರ ಜೊತೆಗೆ ವಿಶ್ ಮಾಡಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ.

ನತಾಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಈ ಮೊದಲು ವರದಿ ಆಗಿತ್ತು. ‘ನತಾಶಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವಾರ ಮಗು ಜನಿಸಬಹುದು. ವರುಣ್ ಧವನ್ ಅವರು ಸದ್ಯ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಅವರ ಬಳಿಯೇ ಇರಲು ನಿರ್ಧರಿಸಿದ್ದಾರೆ’ ಎಂದು ವರದಿ ಆಗಿತ್ತು. ಈಗ ನತಾಶಾ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ. ಇದರಿಂದ ಅಪ್ಪ ಆದ ಖುಷಿಯಲ್ಲಿ ವರುಣ್ ಇದ್ದಾರೆ.

ವರುಣ್ ಧವನ್ ಅವರು ಹೀರೋ ಆಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ನತಾಶಾ ದಲಾಲ್ ಅವರು ಫ್ಯಾಷನ್ ಡಿಸೈನರ್ ಆಗಿದ್ದಾರೆ. ಈ ಜೋಡಿ ಕೊರೊನಾ ಸಮಯದಲ್ಲಿ ಮದುವೆ ಆಗಿದ್ದರು. ಇವರು ವಿವಾಹ ಆಗಿದ್ದು 2021ರ ಜನವರಿ 24ರಂದು. ಅಲಿಭಾಗ್​ನಲ್ಲಿ ಆಪ್ತರು ಹಾಗೂ ಕುಟುಂಬದವರ ಜೊತೆ ಮದುವೆ ಆಗಿದ್ದರು.

ಇದನ್ನೂ ಓದಿ: ಐಪಿಎಲ್ ಭದ್ರತಾ ಸಿಬ್ಬಂದಿ ವಿರುದ್ಧ ನಟ ವರುಣ್ ಧವನ್ ಆಕ್ರೋಶ

ವರುಣ್ ಧವನ್ ಅವರು ‘ಬೇಬಿ ಜಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎ. ಕಲೀಶ್ವರನ್ ಅವರು ಇದನ್ನು ನಿರ್ದೇಶಿಸುತ್ತಿದ್ದ, ಮುರದ್ ಖೇತಾನಿ ಇದನ್ನು ನಿರ್ಮಿಸುತ್ತಿದ್ದಾರೆ. ಪ್ರಿಯಾ ಅಟ್ಲೀ ಹಾಗೂ ಜ್ಯೋತಿ ದೇಶಪಾಂಡೆ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ