AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಡ್ಡಿ-ಬನಿಯಾನ್​ನಲ್ಲಿ ದೇವಸ್ಥಾನಕ್ಕೆ ಬಂದ ವರುಣ್ ಧವನ್; ಭಾರಿ ಆಕ್ರೋಶ, ಟ್ರೋಲ್

ನಟ ವರುಣ್ ಧವನ್ ದೇವಸ್ಥಾನಕ್ಕೆ ಬನಿಯಾನ್, ಹಾಫ್ ಶಾರ್ಟ್ಸ್ ಧರಿಸಿ ಭೇಟಿ ನೀಡಿದ್ದ ವಿಡಿಯೋ ವೈರಲ್ ಆಗಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. ನೆಟ್ಟಿಗರು ಅವರ ಉಡುಪಿನ ಶೈಲಿಯನ್ನು ತೀವ್ರವಾಗಿ ಖಂಡಿಸಿದ್ದು, ಧಾರ್ಮಿಕ ಸ್ಥಳಗಳ ಘನತೆ ಮತ್ತು ವಸ್ತ್ರಸಂಹಿತೆ ಬಗ್ಗೆ ಚರ್ಚೆ ಶುರುವಾಗಿದೆ. ಈ ಬೆಳವಣಿಗೆ ಅವರ ಮುಂಬರುವ ಸಿನಿಮಾ ಪ್ರಚಾರದ ಮೇಲೆ ಪರಿಣಾಮ ಬೀರಬಹುದು.

ಚಡ್ಡಿ-ಬನಿಯಾನ್​ನಲ್ಲಿ ದೇವಸ್ಥಾನಕ್ಕೆ ಬಂದ ವರುಣ್ ಧವನ್; ಭಾರಿ ಆಕ್ರೋಶ, ಟ್ರೋಲ್
ವರುಣ್ ಧವನ್
ರಾಜೇಶ್ ದುಗ್ಗುಮನೆ
|

Updated on:Jun 03, 2026 | 8:43 AM

Share

ಬಾಲಿವುಡ್ ನಟ ವರುಣ್ ಧವನ್ ಸದ್ಯ ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೂನ್ 5ರಂದು ತೆರೆಗೆ ಬರುತ್ತಿದೆ. ಈ ನಡುವೆ ಅವರು ದೇವಸ್ಥಾನವೊಂದಕ್ಕೆ ಭೇಟಿ ನೀಡಿದ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. ದೇವಸ್ಥಾನಕ್ಕೆ ಅವರು ಧರಿಸಿ ಬಂದಿದ್ದ ಉಡುಪಿನ ಶೈಲಿ ಈಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ವರುಣ್ ಧವನ್ ಅವರು ಬನಿಯಾನ್ ಮತ್ತು ಹಾಫ್ ಶಾರ್ಟ್ಸ್ ಧರಿಸಿ ದೇವಸ್ಥಾನಕ್ಕೆ ದರ್ಶನ ಪಡೆಯಲು ಬಂದಿದ್ದರು. ಇದನ್ನು ನೋಡಿದ ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ‘ವರುಣ್ ಧವನ್ ಅವರಿಗೆ ದೇವಸ್ಥಾನ ಮತ್ತು ಜಿಮ್ ನಡುವಿನ ವ್ಯತ್ಯಾಸ ಗೊತ್ತಿಲ್ಲವೇ? ವರ್ಕೌಟ್ ಮಾಡುವ ಬಟ್ಟೆ ಧರಿಸಿ ಪವಿತ್ರ ಸ್ಥಳಕ್ಕೆ ಬರುವುದು ಎಷ್ಟು ಸರಿ?’ ಎಂದು ಹಲವರು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಚರ್ಚೆ:

ಈ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದ್ದು, ಧಾರ್ಮಿಕ ಸ್ಥಳಗಳ ಘನತೆ ಮತ್ತು ವಸ್ತ್ರಸಂಹಿತೆಯ ಬಗ್ಗೆ ಪರ-ವಿರೋಧದ ಕಮೆಂಟ್‌ಗಳು ಬರುತ್ತಿವೆ. ‘ಯಾವುದಾದರೂ ಮುಸ್ಲಿಂ ನಟರು ಮಸೀದಿಗೆ ಹೋಗುವಾಗ ಇಂತಹ ಉಡುಪು ಧರಿಸಿ ಹೋಗುವುದನ್ನು ಯಾರಾದರೂ ನೋಡಿದ್ದೀರಾ? ಕೇವಲ ಹಿಂದೂ ದೇವಸ್ಥಾನಗಳಿಗೆ ಬರುವಾಗಲೇ ಇಂತಹ ಬೇಜವಾಬ್ದಾರಿತನ ಏಕೆ’ ಎಂದು ನೇರವಾಗಿಯೇ ಪ್ರಶ್ನೆ ಮಾಡಿದ್ದಾರೆ. ಧಾರ್ಮಿಕ ಆಚರಣೆಗಳ ಜಾಗಕ್ಕೆ ಬರುವಾಗ ಕನಿಷ್ಠ ಗೌರವ ಇರಬೇಕು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ವರುಣ್ ಧವನ್, ಮೃಣಾಲ್ ಜೊತೆಗಿನ ಶೂಟಿಂಗ್ ವಿಡಿಯೋ ಹಂಚಿಕೊಂಡ ಪೂಜಾ

ಸದ್ಯ ವರುಣ್ ಧವನ್ ಸಿನಿಮಾ ಪ್ರಚಾರದ ನಡುವೆ ಈ ವಿವಾದಕ್ಕೆ ಸಿಲುಕಿದ್ದು, ಈ ಟ್ರೋಲ್‌ಗಳ ಬಗ್ಗೆ ಅವರಾಗಲಿ ಅಥವಾ ಅವರ ತಂಡವಾಗಲಿ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಈ ಬೆಳವಣಿಗೆ ಅವರ ಸಿನಿಮಾ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:36 am, Wed, 3 June 26

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್