AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nana Patekar Passes Away: ನಾನಾ ಪಾಟೇಕರ್ ನಿಧನ: ಹೃದಯಾಘಾತಕ್ಕೆ ಹಿರಿಯ ನಟ ಬಲಿ

ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. 75 ವರ್ಷದ ನಟ ಪ್ರಜ್ಞಾಹೀನರಾಗಿದ್ದಾಗ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸಿಲ್ಲ. ‘ಕ್ರಾಂತಿವೀರ’, ‘ಪರಿಂದಾ’ ಮತ್ತು ‘ವೆಲ್ ಕಮ್’ ಚಿತ್ರಗಳ ಮೂಲಕ ಕನ್ನಡಿಗರನ್ನೂ ಒಳಗೊಂಡಂತೆ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದಿದ್ದ ಅವರ ಅಗಲಿಕೆಗೆ ಚಲನಚಿತ್ರ ರಂಗ ಕಂಬನಿ ಮಿಡಿದಿದೆ.

Nana Patekar Passes Away: ನಾನಾ ಪಾಟೇಕರ್ ನಿಧನ: ಹೃದಯಾಘಾತಕ್ಕೆ ಹಿರಿಯ ನಟ ಬಲಿ
ನಾನಾ ಪಾಟೇಕರ್
ರಾಜೇಶ್ ಹೆಗಡೆ ದುಗ್ಗುಮನೆ
|

Updated on:Oct 08, 2026 | 7:49 AM

Share

ಮುಖ್ಯಾಂಶಗಳು

  • ಗೋವಾದ ಮನೆ ಯಲ್ಲಿ ಕುಸಿದುಬಿದ್ದ ನಟ ನಾನಾ ಪಾಟೇಕರ್
  • ಬೆಳಿಗ್ಗೆಯೇ ಸಂಭವಿಸಿದ ದುರಂತ
  • ಸತತ 45 ನಿಮಿಷಗಳ ಕಾಲ ಸಿಪಿಆರ್ ನೀಡಿದರೂ ಫಲಿಸದ ವೈದ್ಯರ ಚಿಕಿತ್ಸೆ 

ಭಾರತೀಯ ಚಿತ್ರರಂಗಕ್ಕೆ ಅಕ್ಟೋಬರ್ 8ರಂದು ಒಂದು ಆಘಾತಕಾರಿ ಸುದ್ದಿ ಬಂದಪ್ಪಳಿಸಿದೆ. ಹಿರಿಯ ನಟ ನಾನಾ ಪಾಟೇಕರ್ ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ ಆಗಿತ್ತು. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಈ ಸುದ್ದಿಯನ್ನು ಅನೇಕರಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾನಾ ಪಾಟೇಕರ್ ಅವರು ಬೆಳಿಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಫಲಕಾರಿಯಾಗಲಿಲ್ಲ. ವೈದ್ಯರು ಅವರು ಮೃತಪಟ್ಟಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇಡೀ ದೇಶದ ಚಿತ್ರರಂಗಕ್ಕೆ ಈ ಸುದ್ದಿ ತೀವ್ರ ಆಘಾತ ತಂದಿದೆ.

ಬೆಳಿಗ್ಗೆ 5:20ರ ಸುಮಾರಿಗೆ ಅವರ ಸಾವು ಸಂಭವಿಸಿದೆ ಎಂದು ಹೆಳಲಾಗುತ್ತಾ ಇದೆ. ಪ್ರಾಥಮಿಕ ಮಾಹಿತಿಯಂತೆ ತೀವ್ರ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ತಂದ ತಕ್ಷಣ ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ನೀಡಲಾಯಿತು. ವೈದ್ಯರ ಸತತ ಪ್ರಯತ್ನದ ಹೊರತಾಗಿಯೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ. ಶೇಖರ್ ಸಾಳ್ಕರ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳು ಹೊರಬರಲಿವೆ. ಸಾವಿನ ಹಿನ್ನೆಲೆಯ ಕುರಿತು ಕುಟುಂಬಸ್ಥರು ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.

ನಾನಾ ಪಾಟೇಕರ್ ಅವರು ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ದಿಗ್ಗಜ ನಟರಾಗಿದ್ದರು. ತಮ್ಮ ವಿಶಿಷ್ಟ ನಟನೆ ಮತ್ತು ಗಂಭೀರ ಸಂಭಾಷಣೆ ಶೈಲಿಯಿಂದ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಇದನ್ನೂ ಓದಿ: ‘ನನ್ನ ಜೀವನ, ನನ್ನದೇ ಆದ ರೀತಿಯಲ್ಲಿ ಬದುಕಲು ಬಿಡಿ’; ನಟನೆಯಿಂದ ನಿವೃತ್ತಿ ಘೋಷಿಸಿದ ನಾನಾ ಪಾಟೇಕರ್

‘ಪರಿಂದಾ’, ‘ಕ್ರಾಂತಿವೀರ’ ಹಾಗೂ ‘ಅಬ್ ತಕ್ ಛಪ್ಪನ್’ ನಂತಹ ಸಿನಿಮಾಗಳು ಅವರಿಗೆ ದೊಡ್ಡ ಹೆಸರು ತಂದುಕೊಟ್ಟವು. ‘ವೆಲ್ ಕಮ್’ ನಂತಹ ಹಾಸ್ಯ ಚಿತ್ರಗಳ ಮೂಲಕವೂ ಜನಪ್ರಿಯತೆ ಗಳಿಸಿದ್ದರು. ಕನ್ನಡದಲ್ಲಿ ಅವರು ನಟಿಸಿದ ಏಕೈಕ ಸಿನಿಮಾ ಎಂದರೆ ಅದು ‘ಯಕ್ಷ’.   ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ. ಅವರು ಇತ್ತೀಚೆಗೆ ಚಿತ್ರರಂಗದಿಂದ ದೂರವೇ ಉಳಿದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:46 am, Thu, 8 October 26

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ