ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರಿಟ್ಟ ಕತ್ರಿನಾ ಕೈಫ್, ವಿಕ್ಕಿ ಕೌಶಲ್
ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರು ಮಗುವಿಗೆ ನಾಮಕರಣ ಮಾಡಿ ಫೋಟೋ ಹಂಚಿಕೊಂಡಿದ್ದಾರೆ. ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರು ಇಟ್ಟಿದ್ದಾರೆ. ಮಗುವಿನ ಮುಖವನ್ನು ಇನ್ನೂ ತೋರಿಸಿಲ್ಲ. ಮಗುವಿನ ಕೈ ಫೋಟೋ ವೈರಲ್ ಆಗಿದೆ. ಫ್ಯಾನ್ಸ್ ಜೊತೆ ಸೆಲೆಬ್ರಿಟಿಗಳು ಕೂಡ ಕಮೆಂಟ್ ಮಾಡಿದ್ದಾರೆ.

ಬಾಲಿವುಡ್ನ ಸ್ಟಾರ್ ದಂಪತಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ (Vicky Kaushal) ಅವರು ಅಭಿಮಾನಿಗಳಿಗೆ ಒಂದು ಸ್ಪೆಷಲ್ ನ್ಯೂಸ್ ನೀಡಿದ್ದಾರೆ. ತಮ್ಮ ಪುತ್ರನಿಗೆ ಅವರೀಗ ನಾಮಕರಣ ಮಾಡಿದ್ದಾರೆ. 2025ರ ನವೆಂಬರ್ 7ರಂದು ಕತ್ರಿನಾ ಕೈಫ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಈಗ ವಿಹಾನ್ ಕೌಶಲ್ (Vihaan Kaushal) ಎಂದು ಹೆಸರು ಇಡಲಾಗಿದೆ. ಒಂದು ವಿಶೇಷವಾದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ (Katrina Kaif) ಅವರು ಈ ವಿಷಯ ತಿಳಿಸಿದ್ದಾರೆ. ಅಭಿಮಾನಿಗಳು, ಆಪ್ತರು ಈ ದಂಪತಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.
ಪುಟ್ಟ ಮಗುವಿನ ಕೈಯನ್ನು ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರು ತಮ್ಮ ಅಂಗೈಯಲ್ಲಿ ಇರಿಸಿಕೊಂಡಿದ್ದಾರೆ. ಈ ಫೋಟೋದ ಜೊತೆ ‘ನಮ್ಮ ಬೆಳಕಿನ ಕಿರಣ. ವಿಹಾನ್ ಕೌಶಲ್’ ಎಂದು ಕ್ಯಾಪ್ಷನ್ ನೀಡುವ ಮೂಲಕ ಮಗುವಿನ ಹೆಸರು ಏನು ಎಂಬುದನ್ನು ಈ ದಂಪತಿ ತಿಳಿಸಿದ್ದಾರೆ. ಫ್ಯಾನ್ಸ್ ಪೇಜ್ಗಳಲ್ಲಿ ಈ ಫೋಟೋ ವೈರಲ್ ಆಗುತ್ತಿದೆ.
‘ಪ್ರಾರ್ಥನೆಗಳು ಫಲಿಸಿವೆ. ಬದುಕು ಸುಂದರವಾಗಿದೆ. ನಮ್ಮ ಬದುಕು ಬದಲಾಗಿದೆ. ಪದಗಳನ್ನು ಮೀರಿದ ಕೃತಜ್ಞತೆಗಳು’ ಎಂದು ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರು ಖುಷಿ ಹಂಚಿಕೊಂಡಿದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಈ ಪೋಸ್ಟ್ಗೆ ಕಮೆಂಟ್ ಮಾಡಿದ್ದಾರೆ. ಪರಿಣೀತಿ ಚೋಪ್ರಾ, ಭೂಮಿ ಪೆಡ್ನೇಕರ್, ಸಿದ್ಧಾಂತ್ ಚತುರ್ವೇದಿ, ರಿಚಾ ಚಡ್ಡಾ ಮುಂತಾದವರು ಕಮೆಂಟ್ ಮಾಡಿದ್ದಾರೆ.
View this post on Instagram
ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು ಪರಸ್ಪರ ಪ್ರೀತಿಸಿ ಮದುವೆ ಆದರು. 2021ರಲ್ಲಿ ಅವರ ವಿವಾಹ ನೆರವೇರಿತ್ತು. ಇಬ್ಬರ ನಡುವೆ ವಯಸ್ಸಿನ ಅಂತರ ಇದೆ. ವಿಕ್ಕಿ ಕೌಶಲ್ ಅವರಿಗಿಂತ ಕತ್ರಿನಾ ಕೈಫ್ 5 ವರ್ಷ ದೊಡ್ಡವರು. ಈಗ ವಿಕ್ಕಿ ಕೌಶಲ್ ಅವರಿಗೆ 37 ವರ್ಷ ವಯಸ್ಸು. ಕತ್ರಿನಾ ಕೈಫ್ ಅವರಿಗೆ 42 ವರ್ಷ ವಯಸ್ಸು. ಮದುವೆ ಬಳಿಕ ಚಿತ್ರರಂಗದಲ್ಲಿ ಕತ್ರಿನಾ ಅವರು ಹೆಚ್ಚು ಆ್ಯಕ್ಟೀವ್ ಆಗಿಲ್ಲ.
ಇದನ್ನೂ ಓದಿ: ಕತ್ರಿನಾ ಕೈಫ್ ರೀತಿ ಕಾಣುವ ನಟಿ ಝರೀನ್ ಖಾನ್ಗೆ 9 ವರ್ಷ ಕಿರಿಯವನ ಮೇಲೆ ಲವ್
ಚಿತ್ರರಂಗದಲ್ಲಿ ವಿಕ್ಕಿ ಕೌಶಲ್ ಅವರಿಗೆ ಸಖತ್ ಬೇಡಿಕೆ ಇದೆ. ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’, ‘ಛಾವ’ ಮುಂತಾದ ಸಿನಿಮಾಗಳ ಮೂಲಕ ಅವರು ಸೂಪರ್ ಸ್ಟಾರ್ ಪಟ್ಟ ಪಡೆದುಕೊಂಡಿದ್ದಾರೆ. ಪ್ರಸ್ತುತ ‘ಲವ್ ಆ್ಯಂಡ್ ವಾರ್’ ಸಿನಿಮಾದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ‘ಛಾವ’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:25 pm, Wed, 7 January 26




