AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​ನಲ್ಲಿ ಇನ್ನೂ ಹೆಚ್ಚಾಗಲಿದೆ ‘ಛಾವ’ ಗಳಿಕೆ; 2ನೇ ವೀಕೆಂಡ್​ ಮೇಲೆ ನಿರೀಕ್ಷೆ

ಒಂದು ವಾರ ಯಶಸ್ವಿಯಾಗಿ ಪ್ರದರ್ಶನ ಕಂಡಿರುವ ‘ಛಾವ’ ಸಿನಿಮಾಗೆ ಭಾರತದಲ್ಲಿ 225.28 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ವಿದೇಶದ ಗಳಿಕೆಯನ್ನೂ ಕೂಡಿಸಿದರೆ 310 ಕೋಟಿ ರೂಪಾಯಿಗೂ ಅಧಿಕ ಆಗಲಿದೆ. ಈ ಸಿನಿಮಾದಿಂದಾಗಿ ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ.

ಬಾಕ್ಸ್ ಆಫೀಸ್​ನಲ್ಲಿ ಇನ್ನೂ ಹೆಚ್ಚಾಗಲಿದೆ ‘ಛಾವ’ ಗಳಿಕೆ; 2ನೇ ವೀಕೆಂಡ್​ ಮೇಲೆ ನಿರೀಕ್ಷೆ
Vicky Kaushal
ಮದನ್​ ಕುಮಾರ್​
|

Updated on: Feb 21, 2025 | 10:16 PM

Share

ಐತಿಹಾಸಿಕ ಕಥೆ ಇರುವ ‘ಛಾವ’ ಸಿನಿಮಾಗೆ ಉತ್ತಮವಾಗಿ ಕಲೆಕ್ಷನ್ ಆಗಿದೆ. ಭಾರತದ ಬಾಕ್ಸ್ ಆಫೀಸ್​ನಲ್ಲಿ 7 ದಿನಕ್ಕೆ ಒಟ್ಟು 225.28 ಕೋಟಿ ರೂಪಾಯಿ ಗಳಿಕೆ ಆಗಿದೆ. ಇದರಿಂದ ಚಿತ್ರತಂಡ ಫುಲ್ ಖುಷ್ ಆಗಿದೆ. ನಟ ವಿಕ್ಕಿ ಕೌಶಲ್ ಅವರು ಈ ಸಿನಿಮಾದಿಂದ ದೊಡ್ಡ ಸಕ್ಸಸ್ ಪಡೆದಿದ್ದಾರೆ. ಹಲವು ಸಿನಿಮಾಗಳ ದಾಖಲೆಯನ್ನು ಈ ಚಿತ್ರ ಅಳಿಸಿ ಹಾಕುತ್ತಿದೆ. ನಟಿ ರಶ್ಮಿಕಾ ಮಂದಣ್ಣ ಕೂಡ ‘ಛಾವ’ ಚಿತ್ರದಿಂದ ಡಿಮ್ಯಾಂಡ್​ ಹೆಚ್ಚಿಸಿಕೊಂಡಿದ್ದಾರೆ. 2ನೇ ವೀಕೆಂಡ್​ನಲ್ಲಿ ಈ ಸಿನಿಮಾದ ಕಲೆಕ್ಷನ್ ಇನ್ನಷ್ಟು ಜಾಸ್ತಿ ಆಗುವ ಸೂಚನೆ ಸಿಕ್ಕಿದೆ.

‘ಛಾವ’ ನೋಡಿದ ಅನೇಕರು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿ ಪ್ರತಿದಿನವೂ ಈ ಚಿತ್ರಕ್ಕೆ ಬಹುಕೋಟಿ ರೂಪಾಯಿ ಕಲೆಕ್ಷನ್ ಆಗುತ್ತಿದೆ. ವೀಕೆಂಡ್​ ಮಾತ್ರವಲ್ಲದೇ ಇನ್ನುಳಿದ ದಿನಗಳಲ್ಲಿ ಕೂಡ ಈ ಸಿನಿಮಾ ಅತ್ಯುತ್ತಮವಾಗಿ ಪ್ರದರ್ಶನ ಕಂಡಿದೆ. ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಆಗಿರುವುದರಿಂದ ಖಂಡಿತವಾಗಿಯೂ ಎರಡನೇ ವಾರಾಂತ್ಯದಲ್ಲಿ ಕಲೆಕ್ಷನ್​ ಹೆಚ್ಚಲಿದೆ.

7 ದಿನಗಳ ಕಲೆಕ್ಷನ್ ವಿವರ: ‘ಛಾವ’ ಸಿನಿಮಾ ರಿಲೀಸ್ ಆಗಿದ್ದು ಫೆ.14ರಂದು. ಆ ದಿನ ವ್ಯಾಲೆಂಟೈನ್ಸ್​ ಡೇ ಆದ್ದರಿಂದ ಹೆಚ್ಚಿನ ಪ್ರೇಕ್ಷಕರು ಸಿನಿಮಾ ನೋಡಲು ಬಂದರು. ಅಂದು 33.10 ಕೋಟಿ ರೂಪಾಯಿ ಸಂಗ್ರಹ ಆಯಿತು. ಎರಡನೇ ದಿನ 39.30 ಕೋಟಿ ರೂಪಾಯಿ ಗಳಿಸಿತು. ಮೂರನೇ ದಿನ ಬರೋಬ್ಬರಿ 49.03 ಕೋಟಿ ರೂಪಾಯಿ ಕಲೆಕ್ಷನ್ ಆಗಿದ್ದು, ಸಿನಿಮಾಗೆ ದೊಡ್ಡ ಮೈಲೇಜ್ ಸಿಕ್ಕಿತು. ನಾಲ್ಕನೇ ದಿನ 24.10 ಕೋಟಿ ರೂಪಾಯಿ, ಐದನೇ ದಿನ 25.75 ಕೋಟಿ ರೂಪಾಯಿ, ಆರನೇ ದಿನ 32.40 ಕೋಟಿ ರೂಪಾಯಿ ಹಾಗೂ ಏಳನೇ ದಿನ 21.60 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.

ಇದನ್ನೂ ಓದಿ: ಛಾವ ಸಿನಿಮಾಗೆ ರಶ್ಮಿಕಾ ಮಂದಣ್ಣ ಪಡೆದ ಸಂಭಾವನೆ ಎಷ್ಟು ಕೋಟಿ?

ಇನ್ನು, ವಿದೇಶದಲ್ಲಿಯೂ ‘ಛಾವ’ ಸಿನಿಮಾ ಪ್ರದರ್ಶನ ಕಾಣುತ್ತಿದ್ದು, ಅಲ್ಲಿನ ಗಳಿಕೆಯನ್ನೂ ಸೇರಿಸಿದರೆ 7 ದಿನಕ್ಕೆ 310 ಕೋಟಿ ರೂಪಾಯಿ ಮೀರಲಿದೆ. ವಿಕ್ಕಿ ಕೌಶಲ್ ಅವರು ಈ ಸಿನಿಮಾದಲ್ಲಿ ಛತ್ರಪತಿ ಶಂಭಾಜಿ ಮಹಾರಾಜ್ ಪಾತ್ರವನ್ನು ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ಲಕ್ಷ್ಮಣ್ ಉಟೇಕರ್ ಅವರು ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಜನಸಾಮಾನ್ಯರು ಪಾತ್ರವಲ್ಲದೇ ಪ್ರಧಾನಿ ನರೇಂದ್ರ ಮೋದಿ ಕೂಡ ಈ ಸಿನಿಮಾದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್