AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಜೊತೆ ತೆರೆ ಹಂಚಿಕೊಳ್ಳಲು 25 ಕೆಜಿ ಹೆಚ್ಚಿಸಿಕೊಳ್ಳಲಿದ್ದಾರೆ ಈ ಸ್ಟಾರ್ ಹೀರೋ

Rashmika Mandanna: ವಿಕ್ಕಿ ಕೌಶಲ್ ಒಂದೇ ರೀತಿಯ ಪಾತ್ರಗಳಿಗೆ ಕಟ್ಟು ಬಿದ್ದವರಲ್ಲ. ಪೋಷಕ ಪಾತ್ರವಾಗಲೀ, ಹೀರೋ ಆಗಿ ಮಿಂಚೋದಾಗಿರಲಿ, ವಿಕ್ಕಿ ಕೌಶಲ್ ನಟಿಸಿ ಪಾತ್ರಗಳಿಗೆ ನ್ಯಾಯ ಒದಗಿಸುತ್ತಾರೆ. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಶಿವಾಜಿ ಮಗ ಛತ್ರಪತಿ ಸಾಂಬಾಜಿ ಮಹರಾಜ್ ಪಾತ್ರ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಜೊತೆ ತೆರೆ ಹಂಚಿಕೊಳ್ಳಲು 25 ಕೆಜಿ ಹೆಚ್ಚಿಸಿಕೊಳ್ಳಲಿದ್ದಾರೆ ಈ ಸ್ಟಾರ್ ಹೀರೋ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Mar 02, 2024 | 6:30 AM

Share

ವಿಕ್ಕಿ ಕೌಶಲ್ (Vicky Kaushal) ಅವರು ಚಿತ್ರರಂಗಕ್ಕೆ ಬಂದು ಹಲವು ವರ್ಷಗಳು ಕಳೆದಿವೆ. ಈ ಅವಧಿಯಲ್ಲಿ ಅವರು ಹಲವು ರೀತಿಯ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ಡಂಕಿ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಈ ಸಿನಿಮಾದಲ್ಲಿ ಅವರದ್ದು ಅತಿಥಿ ಪಾತ್ರ ಆಗಿತ್ತು. ಈಗ ಅವರು 25 ಕೆಜಿ ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ರಶ್ಮಿಕಾ ಮಂದಣ್ಣ ಹಾಗೂ ಅವರು ಒಟ್ಟಾಗಿ ನಟಿಸುತ್ತಿರುವ ಮುಂದಿನ ಸಿನಿಮಾ.

ವಿಕ್ಕಿ ಕೌಶಲ್ ಒಂದೇ ರೀತಿಯ ಪಾತ್ರಗಳಿಗೆ ಕಟ್ಟು ಬಿದ್ದವರಲ್ಲ. ಪೋಷಕ ಪಾತ್ರವಾಗಲೀ, ಹೀರೋ ಆಗಿ ಮಿಂಚೋದಾಗಿರಲಿ, ವಿಕ್ಕಿ ಕೌಶಲ್ ನಟಿಸಿ ಪಾತ್ರಗಳಿಗೆ ನ್ಯಾಯ ಒದಗಿಸುತ್ತಾರೆ. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಶಿವಾಜಿ ಮಗ ಛತ್ರಪತಿ ಸಾಂಬಾಜಿ ಮಹರಾಜ್ ಪಾತ್ರ ಮಾಡುತ್ತಿದ್ದಾರೆ. ಈ ಪಾತ್ರಕ್ಕಾಗಿ ಅವರು ಇನ್ನೂ ದಪ್ಪ ಆಗಬೇಕಿದೆ. ಈ ಕಾರಣಕ್ಕೆ 25 ಕೆಜಿ ತೂಕ ಹೆಚ್ಚಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

5-10 ಕೆಜಿ ದೇಹದ ತೂಕ ಹೆಚ್ಚಿಸಿಕೊಳ್ಳುವುದು ದೊಡ್ಡ ವಿಚಾರ ಅಲ್ಲ. ಆದರೆ, ಒಮ್ಮೆಲೆ 25 ಕೆಜಿ ಹೆಚ್ಚಿಸಿಕೊಳ್ಳಬೇಕು ಎಂದರೆ ಅದು ಸುಲಭದ ವಿಚಾರ ಅಲ್ಲವೇ ಅಲ್ಲ. ಒಂದೊಮ್ಮೆ ವಿಕ್ಕಿ ಕೌಶಲ್ ಅವರು 25 ಕೆಜಿ ತೂಕ ಹೆಚ್ಚಿಸಿಕೊಂಡಿದ್ದು ಹೌದಾದಲ್ಲಿ ಅವರು ಮತ್ತಷ್ಟು ದಪ್ಪವಾಗಿ ಕಾಣಲಿದ್ದಾರೆ. ಅವರನ್ನು ಹಿಂದೆಂದೂ ನೋಡಿರದ ರೀತಿಯಲ್ಲಿ ನೋಡಬಹುದಾಗಿದೆ.

ವಿಕ್ಕಿ ಕೌಶಲ್ ಅವರು ದೇಹದ ತೂಕ ಹೆಚ್ಚಿಸಿಕೊಳ್ಳಲು ಬೇರೆ ಡಯಟ್ ಫಾಲೋ ಮಾಡಲಿದ್ದಾರೆ. ಅವರು ಜಿಮ್​ನಲ್ಲಿ ಹೆಚ್ಚಿನ ಸಮಯ ಕಳೆಯಬೇಕಿದೆ. ಈಗಾಗಲೇ ಇದಕ್ಕೆ ಅವರು ಸಿದ್ಧತೆ ಮಾಡಿಕೊಂಡಿದ್ದಾರೆ. ಒಮ್ಮೆ ದೇಹದ ತೂಕ ಹೆಚ್ಚಿಸಿಕೊಂಡರೆ ಅವರಿಗೆ ಬೇರೆ ಸಿನಿಮಾಗಳನ್ನು ಮಾಡೋಕೆ ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ: ‘ರಶ್ಮಿಕಾ ಮಂದಣ್ಣ ಗಂಡ ವಿಜಯ್​ ದೇವರಕೊಂಡ ರೀತಿ ಇರಬೇಕು’: ನಿಜ ಎಂದ ನಟಿ

ರಶ್ಮಿಕಾ ಮಂದಣ್ಣ ಅವರಿಗೂ ಸಿನಿಮಾದಲ್ಲಿ ಪ್ರಮುಖ ಪಾತ್ರವಿದೆ. ಅವರು ಛತ್ರಪತಿ ಸಾಂಬಾಜಿ ಮಹರಾಜ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಅವರ ಪಾತ್ರ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಮೂಡಿದೆ. ಸದ್ಯ ಸಿನಿಮಾದ ಪ್ರಾಥಮಿಕ ಹಂತದ ಕೆಲಸಗಳು ನಡೆಯುತ್ತಿವೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ