ಗಂಡ-ಹೆಂಡತಿಯ ಫಸ್ಟ್​ ನೈಟ್​ ಸಿಡಿ ನಾಪತ್ತೆ; ಡಿಫರೆಂಟ್​ ಕಥೆಯ ಹೊಸ ಸಿನಿಮಾ ಇದು

ಮೊದಲ ರಾತ್ರಿಯಲ್ಲಿ ತಮ್ಮ ಖಾಸಗಿ ವಿಡಿಯೋ ಮಾಡಿಕೊಂಡು ಪೇಚಿಗೆ ಸಿಲುಕಿದ ಗಂಡ-ಹೆಂಡತಿಯ ಕಥೆ ಈ ಸಿನಿಮಾದಲ್ಲಿದೆ. ಮನೆಗೆ ಬಂದ ಕಳ್ಳರು ಸಿಡಿ ಪ್ಲೇಯರ್​ ಕದಿಯುತ್ತಾರೆ. ಅದರ ಜೊತೆ ಸಿಡಿ ಕೂಡ ಕಳ್ಳತನ ಆಗುತ್ತದೆ. ಆ ಸಿಡಿ ಹುಡುಕಲು ಗಂಡ-ಹೆಂಡತಿ ಏನೆಲ್ಲ ಸರ್ಕಸ್​ ಮಾಡುತ್ತಾರೆ ಎಂಬ ಕಥೆಯನ್ನು ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

ಗಂಡ-ಹೆಂಡತಿಯ ಫಸ್ಟ್​ ನೈಟ್​ ಸಿಡಿ ನಾಪತ್ತೆ; ಡಿಫರೆಂಟ್​ ಕಥೆಯ ಹೊಸ ಸಿನಿಮಾ ಇದು
ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ
Follow us
ಮದನ್​ ಕುಮಾರ್​
|

Updated on: Sep 12, 2024 | 8:50 PM

ನಟ ರಾಜ್​ಕುಮಾರ್​ ರಾವ್​ ಅವರು 2024ರಲ್ಲಿ ಭರ್ಜರಿ ಗೆಲುವು ಕಂಡಿದ್ದಾರೆ. ಅವರು ನಟಿಸಿರುವ ‘ಸ್ತ್ರೀ 2’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ಅವರ ಇನ್ನೊಂದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದರ ಶೀರ್ಷಿಕೆ ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’. ಈ ಸಿನಿಮಾದಲ್ಲಿ ರಾಜ್​ಕುಮಾರ್​ ರಾವ್​ ಜೊತೆ ತೃಪ್ತಿ ದಿಮ್ರಿ ಅವರು ನಾಯಕಿಯಾಗಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾದಲ್ಲಿ ಒಂದು ಡಿಫರೆಂಟ್​ ಕಥೆ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ.

1997ರ ಸಮಯದಲ್ಲಿ ನಡೆಯುವ ಒಂದು ಕಹಾನಿಯನ್ನು ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಈ ಸಿನಿಮಾದಲ್ಲಿ ರಾಜ್​ಕುಮಾರ್​ ರಾವ್​ ಮತ್ತು ತೃಪ್ತಿ ದಿಮ್ರಿ ಅವರು ಹೊಸದಾಗಿ ಮದುವೆಯಾದ ಗಂಡ-ಹೆಂಡತಿಯ ಪಾತ್ರ ಮಾಡಿದ್ದಾರೆ. ಮಲ್ಲಿಕಾ ಶೆರಾವತ್​ ಅವರು ಕೂಡ ಈ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ ಎಂಬುದು ವಿಶೇಷ. ರಾಜ್​ ಶಾಂಡಿಲ್ಯ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಕ್ಟೋಬರ್​ 11ರಂದು ಸಿನಿಮಾ ಬಿಡುಗಡೆ ಆಗಲಿದೆ.

ಮೊದಲ ರಾತ್ರಿಯ ಸವಿ ನೆನಪು ಯಾವಾಗಲೂ ಇರಬೇಕು ಎಂಬ ಕಾರಣಕ್ಕೆ ಗಂಡ-ಹೆಂಡತಿ (ವಿಕ್ಕಿ ಮತ್ತು ವಿದ್ಯಾ) ವಿಡಿಯೋ ಮಾಡಿಕೊಳ್ಳುತ್ತಾರೆ. ಅದನ್ನು ಸಿಡಿ ಪ್ಲೇಯರ್​ನಲ್ಲಿ ನೋಡಿ ಖುಷಿಪಡುತ್ತಾರೆ. ಆದರೆ ಒಂದು ದಿನ ಅವರ ಮನೆಯ ಸಿಡಿ ಪ್ಲೇಯರ್​ ಕಳ್ಳತನ ಆಗುತ್ತದೆ. ಅದರ ಜೊತೆ ಅವರಿಬ್ಬರ ಖಾಸಗಿ ವಿಡಿಯೋ ಕೂಡ ಕಳೆದು ಹೋಗುತ್ತದೆ. ಆ ಸಿಡಿ ಪಡೆಯಲು ವಿಕ್ಕಿ ಮತ್ತು ವಿದ್ಯಾ ಎಷ್ಟೆಲ್ಲ ಕಷ್ಟಪಡುತ್ತಾರೆ ಎಂಬುದು ಈ ಸಿನಿಮಾದ ಕಥಾ ಸಾರಾಂಶ.

ಇದನ್ನೂ ಓದಿ: ಪ್ರಿಯಕರನ ಜೊತೆ ಡೇಟಿಂಗ್​ ಮಾಡುತ್ತಿರುವ ‘ತೋಬಾ ತೋಬಾ’ ಸುಂದರಿ ತೃಪ್ತಿ ದಿಮ್ರಿ

‘ಅನಿಮಲ್​’ ಸಿನಿಮಾದ ಯಶಸ್ಸಿನ ನಂತರ ತೃಪ್ತಿ ದಿಮ್ರಿ ಅವರು ಸೂಪರ್​ ಸ್ಟಾರ್​ ಆಗಿದ್ದಾರೆ. ಅವರಿಗೆ ಹೊಸ ಹೊಸ ಆಫರ್​ಗಳು ಹರಿದು ಬರುತ್ತಿವೆ. ‘ವಿಕ್ಕಿ ವಿದ್ಯಾ ಕಾ ವೋ ವಾಲಾ ವಿಡಿಯೋ’ ಸಿನಿಮಾ ಮೂಲಕವೂ ಅವರು ಮತ್ತೊಂದು ಗೆಲುವು ಕಾಣುವ ಸಾಧ್ಯತೆ ದಟ್ಟವಾಗಿದೆ. ಕಾಮಿಡಿ ಇಷ್ಟಪಡುವ ಪ್ರೇಕ್ಷಕರನ್ನು ಈ ಸಿನಿಮಾ ಸೆಳೆದುಕೊಳ್ಳುವ ಲಕ್ಷಣ ಕಾಣಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ