ಹಣಕ್ಕಾಗಿ ವಿದ್ಯಾ ಬಾಲನ್​ ಹೆಸರಲ್ಲಿ ದೊಡ್ಡ ಮೋಸ; ಎಚ್ಚೆತ್ತುಕೊಂಡ ನಟಿ

‘ಭೂಲ್​ ಭುಲಯ್ಯ 3’ ಸಿನಿಮಾದಲ್ಲಿ ನಟಿಸಲು ಸಜ್ಜಾಗಿರುವ ವಿದ್ಯಾ ಬಾಲನ್​ ಅವರ ಹೆಸರನ್ನು ಕೆಲವರು ದುರ್ಬಳಕೆ ಮಾಡಿಕೊಂಡಿದ್ದಾರೆ. ನಟಿಯ ಹೆಸರಿನಲ್ಲಿ ಜನರನ್ನು ವಂಚಿಸಿರುವುದು ಗೊತ್ತಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ವಿದ್ಯಾ ಬಾಲನ್​ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ಹೆಸರಿನಲ್ಲಿ ಹಲವು ನಕಲಿ ಸೋಶಿಯಲ್​ ಮೀಡಿಯಾ ಖಾತೆ ತೆರೆದು ವಂಚಿಸಲಾಗುತ್ತಿದೆ.

ಹಣಕ್ಕಾಗಿ ವಿದ್ಯಾ ಬಾಲನ್​ ಹೆಸರಲ್ಲಿ ದೊಡ್ಡ ಮೋಸ; ಎಚ್ಚೆತ್ತುಕೊಂಡ ನಟಿ
ವಿದ್ಯಾ ಬಾಲನ್​
Follow us
ಮದನ್​ ಕುಮಾರ್​
|

Updated on:Feb 21, 2024 | 12:36 PM

ಬಾಲಿವುಡ್​ನ ಖ್ಯಾತ ನಟಿ ವಿದ್ಯಾ ಬಾಲನ್ (Vidya Balan) ಅವರು ಪೊಲೀಸ್​ ಠಾಣೆ ಮಟ್ಟಿಲೇರಿದ್ದಾರೆ. ಅವರ ಹೆಸರಿನಲ್ಲಿ ದೊಡ್ಡ ಮೋಸ ನಡೆದಿದೆ. ಅನೇಕ ದಿನಗಳಿಂದ ನಡೆಯುತ್ತಿದ್ದ ವಂಚನೆಯ ಬಗ್ಗೆ ನಟಿಗೆ ತಡವಾಗಿ ಗೊತ್ತಾಗಿದೆ. ಹಾಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕೆಲವು ಕಿಡಿಗೇಡಿಗಳು ವಿದ್ಯಾ ಬಾಲನ್​ ಹೆಸರಿನಲ್ಲಿ ನಕಲಿ ಸೋಶಿಯಲ್​ ಮೀಡಿಯಾ ಖಾತೆಗಳನ್ನು (Vidya Balan Fake Account) ತರೆದು ಹಣ ವಸೂಲಿ ಮಾಡುವ ದಂಧೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯ ಈಗ ಬೆಳಕಿಗೆ ಬಂದಿದ್ದು, ವಿದ್ಯಾ ಬಾಲನ್​ ಅವರು ಕಾನೂನಿನ ಮೊರೆ ಹೋಗಿದ್ದಾರೆ.

ಚಿತ್ರರಂಗ ಎಂಬುದು ಮಾಯಾ ಲೋಕ. ಇಲ್ಲಿ ಕೆಲಸ ಮಾಡಬೇಕು, ಅವಕಾಶ ಪಡೆದುಕೊಳ್ಳಬೇಕು ಎಂಬ ಆಸೆ ಬಹುತೇಕರಿಗೆ ಇರುತ್ತದೆ. ಈ ಆಸೆಯನ್ನೇ ಟಾರ್ಗೆಟ್​ ಮಾಡಿಕೊಂಡು ಕೆಲವರ ವಂಚನೆ ನಡೆಸುತ್ತಾರೆ. ಅದಕ್ಕೆ ದೊಡ್ಡ ದೊಡ್ಡ ಸೆಲೆಬ್ರಿಟಿಗಳ ಹೆಸರು ಬಳಸುತ್ತಾರೆ. ಈ ಹಿಂದೆ ಸಲ್ಮಾನ್​ ಖಾನ್​ ಅವರ ಹೆಸರು ದುರ್ಬಳಕೆ ಆಗಿತ್ತು. ಈಗ ವಿದ್ಯಾ ಬಾಲನ್​ ಅವರ ಹೆಸರು ಬಳಸಿಕೊಂಡು ಜನರಿಗೆ ವಂಚನೆ ಮಾಡಿದ್ದು ತಿಳಿದುಬಂದಿದೆ. ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

ವಿದ್ಯಾ ಬಾಲನ್​ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಆ್ಯಕ್ಟೀವ್​ ಆಗಿದ್ದಾರೆ. ಅವರ ಹೆಸರಿನಲ್ಲಿ ನಕಲಿ ಇನ್​ಸ್ಟಾಗ್ರಾಮ್​ ಖಾತೆ ತೆರೆದ ಕಿಡಿಗೇಡಿಗಳು ಜನರಿಂದ ಹಣ ವಸೂಲಿ ಮಾಡುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದ ವಿದ್ಯಾ ಬಾಲನ್​ ಅವರ ಹೆಸರಿಗೆ ಕಳಂಕ ಬರುತ್ತಿದೆ. ಈ ರೀತಿಯ ಕೃತ್ಯ ನಡೆದಿದೆ ಎಂಬುದು ತಮ್ಮ ಗಮನಕ್ಕೆ ಬಂದ ಕೂಡಲೇ ಅವರು ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಭೂಲ್ ಭುಲಯ್ಯ 3’ಗೆ ವಿದ್ಯಾ ಬಾಲನ್ ಎಂಟ್ರಿ; ಮಂಜುಲಿಕಾನ ಸ್ವಾಗತಿಸಿದ ಕಾರ್ತಿಕ್ ಆರ್ಯನ್

ಜನರನ್ನು ವಂಚಿಸುವ ಉದ್ದೇಶದಿಂದ ಕಿಡಿಗೇಡಿಗಳು ವಿದ್ಯಾ ಬಾಲನ್​ ಅವರ ಹೆಸರಿನಲ್ಲಿ ಈ-ಮೇಲ್​ ಖಾತೆಯನ್ನೂ ತೆರೆದಿದ್ದಾರೆ. ಆ ಮೂಲಕ ಅನೇಕರಿಗೆ ಸಂದೇಶ ಕಳಿಸಿದ್ದಾರೆ. ಚಿತ್ರರಂಗದಲ್ಲಿ ಇರುವ ಸೆಲೆಬ್ರಿಟಿಗಳನ್ನೂ ವಂಚಿಸಲು ಪ್ರಯತ್ನಿಸಲಾಗಿದೆ. ವಿದ್ಯಾ ಬಾಲನ್​ ಹೆಸರಿನಲ್ಲಿ ಮೋಸ ನಡೆಯುತ್ತಿದೆ ಎಂಬುದು ಇತ್ತೀಚೆಗೆ ಕಾಸ್ಟ್ಯೂಮ್​ ಡಿಸೈನರ್​ ಒಬ್ಬರಿಗೆ ತಿಳಿದು ಬಂದಿದೆ. ಅದನ್ನು ಅವರು ನಟಿಗೆ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ವಿದ್ಯಾ ಬಾಲನ್​ ಅವರು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ನ್ಯೂಸ್​ ಪೇಪರ್​ ಅಡ್ಡ ಹಿಡಿದು ಮೈ ಮುಚ್ಚಿಕೊಂಡ ವಿದ್ಯಾ ಬಾಲನ್​; ಡರ್ಟಿ ಪಿಕ್ಚರ್​ ಎಂದ ನೆಟ್ಟಿಗರು

ಸಿನಿಮಾ ವಿಚಾರಕ್ಕೆ ಬರುವುದಾದರೆ, ವಿದ್ಯಾ ಬಾಲನ್​ ಅವರು ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ. ತಮಗೆ ಸೂಕ್ತವಾದ ಸಿನಿಮಾಗಳನ್ನು ಮಾತ್ರ ಅವರು ಒಪ್ಪಿಕೊಳ್ಳುತ್ತಿದ್ದಾರೆ. ‘ಭೂಲ್​ ಭುಲಯ್ಯ 3’ ಸಿನಿಮಾಗೆ ಅವರು ಸಹಿ ಮಾಡಿದ್ದಾರೆ. 2007ರಲ್ಲಿ ಬಂದ ಸೂಪರ್​ ಹಿಟ್​ ‘ಭೂಲ್​ ಭುಲಯ್ಯ’ ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದ ಅವರು ಅದರ ಸೀಕ್ವೆಲ್​ನಲ್ಲಿ ಮಿಸ್​ ಆಗಿದ್ದರು. ಈಗ ‘ಭೂಲ್​ ಭುಲಯ್ಯ 3’ ಸಿನಿಮಾದ ಪಾತ್ರವರ್ಗಕ್ಕೆ ಸೇರ್ಪಡೆ ಆಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:35 pm, Wed, 21 February 24

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ