AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತು ಸುಣ್ಣವಾದ ವಿಜಯ್ ದೇವರಕೊಂಡ ಸಹಾಯಕ್ಕೆ ನಿಂತ ಕರಣ್​ ಜೋಹರ್; ಸ್ಟಾರ್ ನಿರ್ಮಾಪಕ ಮಾಡ್ತಿರೋದೇನು?

ವಿಜಯ್ ದೇವರಕೊಂಡ ಅವರು ರೊಮ್ಯಾಂಟಿಕ್ ಸಿನಿಮಾಗಳ ಮೂಲಕ ಸಾಕಷ್ಟು ಗಮನ ಸೆಳೆದವರು. ‘ಲೈಗರ್​’ ಮೂಲಕ ಇದೇ ಮೊದಲ ಬಾರಿಗೆ ಅವರು ಆ್ಯಕ್ಷನ್ ಸಿನಿಮಾ ಮಾಡುವ ಪ್ರಯತ್ನಕ್ಕೆ ಕಾಲಿಟ್ಟಿದ್ದರು. ಆದರೆ, ಅದು ಯಶಸ್ಸು ಕಂಡಿಲ್ಲ.

ಸೋತು ಸುಣ್ಣವಾದ ವಿಜಯ್ ದೇವರಕೊಂಡ ಸಹಾಯಕ್ಕೆ ನಿಂತ ಕರಣ್​ ಜೋಹರ್; ಸ್ಟಾರ್ ನಿರ್ಮಾಪಕ ಮಾಡ್ತಿರೋದೇನು?
ವಿಜಯ್-ಕರಣ್
TV9 Web
| Edited By: |

Updated on: Oct 26, 2022 | 10:57 AM

Share

ವಿಜಯ್ ದೇವರಕೊಂಡ (Vijay Devarakonda) ಅವರ ನಟನೆಯ ‘ಲೈಗರ್’ ಸಿನಿಮಾ ಹೇಳ ಹೆಸರಿಲ್ಲದಂತೆ ಹೋಗಿದೆ. ಈ ಚಿತ್ರದಿಂದ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿ ಬಾಲಿವುಡ್​ಗೆ ಕಾಲಿಡಬೇಕು ಎಂಬ ವಿಜಯ್ ದೇವರಕೊಂಡ ಅವರ ಕನಸು ಭಗ್ನವಾಗಿದೆ. ಈ ಚಿತ್ರದಿಂದ ವಿಜಯ್ ಅವರು ದೊಡ್ಡ ಮಟ್ಟದ ಸೋಲು ಕಂಡಿದ್ದಾರೆ. ಈ ಚಿತ್ರಕ್ಕೆ ಬಾಲಿವುಡ್​ನ ಖ್ಯಾತ ನಿರ್ಮಾಪಕ ಕರಣ್​ ಜೋಹರ್ ಕೂಡ ಬಂಡವಾಳ ಹೂಡಿದ್ದರು. ಈಗ ವಿಜಯ್ ಹಾಗೂ ಕರಣ್  (Karan Johar)ಮತ್ತೆ ಒಂದಾಗುತ್ತಿದ್ದಾರೆ. ಈ ವಿಚಾರ ಕೇಳಿ ವಿಜಯ್ ಫ್ಯಾನ್ಸ್ ಖುಷಿಯಾಗಿದ್ದಾರೆ.

ವಿಜಯ್ ದೇವರಕೊಂಡ ಅವರು ರೊಮ್ಯಾಂಟಿಕ್ ಸಿನಿಮಾಗಳ ಮೂಲಕ ಸಾಕಷ್ಟು ಗಮನ ಸೆಳೆದವರು. ‘ಲೈಗರ್​’ ಮೂಲಕ ಇದೇ ಮೊದಲ ಬಾರಿಗೆ ಅವರು ಆ್ಯಕ್ಷನ್ ಸಿನಿಮಾ ಮಾಡುವ ಪ್ರಯತ್ನಕ್ಕೆ ಕಾಲಿಟ್ಟಿದ್ದರು. ಆದರೆ, ಅದು ಯಶಸ್ಸು ಕಂಡಿಲ್ಲ. ಇದನ್ನು ಅಭಿಮಾನಿಗಳು ತಿರಸ್ಕರಿಸಿದರು. ವಿಜಯ್ ದೇವರಕೊಂಡ ಜತೆ ಕೈ ಜೋಡಿಸೋಕೆ ದೊಡ್ಡ ದೊಡ್ಡ ನಿರ್ದೇಶಕರು ನಿರಾಕರಿಸುತ್ತಿದ್ದಾರೆ ಎನ್ನಲಾಗಿತ್ತು. ಈ ಸಂದರ್ಭದಲ್ಲಿ ವಿಜಯ್ ಸಹಾಯಕ್ಕೆ ಕರಣ್ ಆಗಮಿಸಿದ್ದಾರೆ.

‘ಕಾಫಿ ವಿತ್ ಕರಣ್​’ ಶೋನಲ್ಲಿ ಈ ಮೊದಲು ಬಾಲಿವುಡ್ ಸ್ಟಾರ್​ಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದರು ಕರಣ್ ಜೋಹರ್. ಆದರೆ, ಈ ಬಾರಿ ದಕ್ಷಿಣದ ಕೆಲ ಸ್ಟಾರ್​ಗಳಿಗೂ ಅವಕಾಶ ಸಿಕ್ಕಿತ್ತು. ಈ ಸಾಲಿನಲ್ಲಿ ವಿಜಯ್ ದೇವರಕೊಂಡ ಕೂಡ ಇದ್ದಾರೆ. ಇದು ವಿಜಯ್ ಹಾಗೂ ಕರಣ್ ನಡುವಿನ ಗೆಳೆತನಕ್ಕೆ ಸಾಕ್ಷ್ಯ ನೀಡುತ್ತದೆ. ಇಬ್ಬರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ. ಹೀಗಾಗಿ, ವಿಜಯ್ ಸಿನಿಮಾಗೆ ಕರಣ್ ಬಂಡವಾಳ ಹೂಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಕರಣ್​-ವಿಜಯ್ ಮಾಡುತ್ತಿರುವ ಚಿತ್ರ ರೊಮ್ಯಾಂಟಿಕ್ ಶೈಲಿಯಲ್ಲಿ ಇರಲಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಲವ್​ ಸ್ಟೋರಿ ಹೈಲೈಟ್ ಆಗಲಿದೆ. ಈ ಚಿತ್ರಕ್ಕೆ ನಿರ್ದೇಶನ ಯಾರು ಮಾಡುತ್ತಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ. ಒಂದೊಮ್ಮೆ ಇದು ನಿಜವೇ ಆದಲ್ಲಿ ವಿಜಯ್ ಮತ್ತೆ ಬಾಲಿವುಡ್​ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: ‘ಲೈಗರ್’ ಚಿತ್ರದಿಂದ ವಿಜಯ್ ದೇವರಕೊಂಡಗೆ ಆಯ್ತು ದೊಡ್ಡ ನಷ್ಟ; ಅವರು ಅನುಭವಿಸುತ್ತಿರುವ ಕಷ್ಟಗಳೇನು?

ವಿಜಯ್ ದೇವರಕೊಂಡ ಅವರು ಸದ್ಯ ‘ಖುಷಿ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಸಮಂತಾ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸಮಂತಾಗೆ ಇತ್ತೀಚೆಗೆ ಅನಾರೋಗ್ಯ ಕಾಡಿತ್ತು ಎನ್ನಲಾಗಿದೆ. ಹೀಗಾಗಿ, ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡಿದ್ದರು. ಇದರಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಶೀಘ್ರದಲ್ಲೇ ಶೂಟಿಂಗ್ ಪೂರ್ಣಗೊಳಿಸುವ ಆಲೋಚನೆಯಲ್ಲಿ ಇಡೀ ತಂಡ ಇದೆ.

ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು