AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Devarakonda: ಮಾಸ್​ ಅವತಾರದಲ್ಲಿ ವಿಜಯ್​ ದೇವರಕೊಂಡ; ‘ಲೈಗರ್​’ ಗ್ಲಿಂಪ್ಸ್​​ ಇಷ್ಟಪಟ್ಟ ಫ್ಯಾನ್ಸ್​

ಹೊಸ ವರ್ಷಕ್ಕೂ ಮುನ್ನ, ‘ಲೈಗರ್​’ ಚಿತ್ರದಿಂದ ಚಿಕ್ಕ ವಿಡಿಯೋ ರಿಲೀಸ್​ ಆಗಿದೆ. ಈ ವಿಡಿಯೋದಲ್ಲಿ ವಿಜಯ್​ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

Vijay Devarakonda: ಮಾಸ್​ ಅವತಾರದಲ್ಲಿ ವಿಜಯ್​ ದೇವರಕೊಂಡ; ‘ಲೈಗರ್​’ ಗ್ಲಿಂಪ್ಸ್​​ ಇಷ್ಟಪಟ್ಟ ಫ್ಯಾನ್ಸ್​
ವಿಜಯ್​ ದೇವರಕೊಂಡ
ರಾಜೇಶ್ ದುಗ್ಗುಮನೆ
|

Updated on:Jan 01, 2022 | 11:49 AM

Share

ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಲೈಗರ್​’ (Liger) ಸಿನಿಮಾ ಮೇಲೆ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ವಿಜಯ್​ ಅವರು ಬಾಕ್ಸಿಂಗ್​ ಪಟು ಆಗಿ ಕಾಣಿಸಿಕೊಂಡಿದ್ದಾರೆ. ವಿಜಯ್​ ದೇವರಕೊಂಡ ಜೊತೆ ಬಾಕ್ಸಿಂಗ್​ ಲೆಜೆಂಡ್​ ಮೈಕ್​ ಟೈಸನ್ ಅವರೂ​ ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ಅವರು ಭಾರತ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಇನ್ನು, ಈ ಸಿನಿಮಾ ವಿಜಯ್​ ಅವರ ಮೊದಲ ಹಿಂದಿ ಚಿತ್ರ ಅನ್ನೋದು ವಿಶೇಷ. ಅಭಿಮಾನಿಗಳಿಗಾಗಿ ‘ಲೈಗರ್​’ ತಂಡ ಹೊಸ ವರ್ಷಕ್ಕೆ ಗ್ಲಿಂಪ್ಸ್​ ವಿಡಿಯೋ ಬಿಡುಗಡೆ ಮಾಡಿದೆ. ಈ ವಿಡಿಯೋದಲ್ಲಿ ಅವರು ಸಖತ್​ ಮಾಸ್​ ಆಗಿ ಕಾಣಿಸಿಕೊಂಡಿದ್ದಾರೆ.

ಆಗಸ್ಟ್​ 25ಕ್ಕೆ ‘ಲೈಗರ್​’ ಸಿನಿಮಾ ತೆರೆಗೆ ಬರುತ್ತಿದೆ. ಇದಕ್ಕೆ ಇನ್ನೂ 8 ತಿಂಗಳು ಬಾಕಿ ಇದೆ. ಅದಕ್ಕೂ ಮೊದಲೇ ಸಿನಿಮಾ ಎಲ್ಲ ಕಡೆಗಳಲ್ಲೂ ಮನೆ ಮಾತಾಗಬೇಕು ಎನ್ನುವ ಉದ್ದೇಶವನ್ನು ಚಿತ್ರತಂಡ ಹೊಂದಿದೆ. ಒಂದು ಕಡೆ ಶೂಟಿಂಗ್​​​ ನಡೆಯುತ್ತಿದ್ದರೆ, ಮತ್ತೊಂದು ಕಡೆಯಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದೆ. ಹೊಸ ವರ್ಷಕ್ಕೂ ಮುನ್ನ, ‘ಲೈಗರ್​’ ಚಿತ್ರದಿಂದ ಚಿಕ್ಕ ವಿಡಿಯೋ ರಿಲೀಸ್​ ಆಗಿದೆ. ಈ ವಿಡಿಯೋದಲ್ಲಿ ವಿಜಯ್​ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಈ ವಿಡಿಯೋ ಬಿಡುಗಡೆ ಆದ ಕೇವಲ 7 ಗಂಟೆಗೆ ಬರೋಬ್ಬರಿ 91 ಲಕ್ಷ ವೀಕ್ಷಣೆ ಕಂಡಿದೆ.

ಗುರುವಾರ (ಡಿಸೆಂಬರ್​ 30) ಬೆಳಗ್ಗೆ 10:30ಕ್ಕೆ ಚಿತ್ರತಂಡದಿಂದ ಸಿನಿಮಾ ಸ್ಟಿಲ್​ಗಳು​ ಲಾಂಚ್​ ಆಗಿದೆ. ಮಧ್ಯಾಹ್ನ ನಾಲ್ಕು ಗಂಟೆಗೆ ವಿಶೇಷ ಇನ್​ಸ್ಟಾ ಫಿಲ್ಟರ್​ ರಿಲೀಸ್​ ಮಾಡಲಾಗಿದೆ. ಈ ಸಿನಿಮಾವನ್ನು ಪುರಿ ಜಗನ್ನಾಥ್​, ಕರಣ್​ ಜೋಹರ್​, ಚಾರ್ಮಿ ಕೌರ್​, ಅಪೂರ್ವ ಮೆಹ್ತಾ, ಹೀರೂ ಯಶ್​ ಜೋಹರ್​ ಸೇರಿಕೊಂಡು ನಿರ್ಮಿಸುತ್ತಿದ್ದಾರೆ. ಅನನ್ಯಾ ಪಾಂಡೆ ಚಿತ್ರದ ನಾಯಕಿ. ಈ ಸಿನಿಮಾದ ಬಜೆಟ್​ 125 ಕೋಟಿ ರೂಪಾಯಿಗೂ ಅಧಿಕವಾಗಿದೆ. ಕನ್ನಡದಲ್ಲೂ ಈ ಸಿನಿಮಾ ತೆರೆಗೆ ಬರುತ್ತಿದೆ.

ಈ ಸಿನಿಮಾದಲ್ಲಿ ಮೈಕಟ್​ ಟೈಸನ್​ ನಟಿಸುತ್ತಿರುವ ವಿಚಾರ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಬಾಕ್ಸಿಂಗ್​ ಜಗತ್ತಿನಲ್ಲಿ ಅಮೆರಿಕದ ಮೈಕ್​ ಟೈಸನ್​ ಅವರದ್ದು ದೊಡ್ಡ ಹೆಸರು. ಎದುರಾಳಿಗಳಿಗೆ ನಡುಕ ಹುಟ್ಟಿಸುವ ಅವರ ಬಾಕ್ಸಿಂಗ್​ ಪರಾಕ್ರಮಕ್ಕೆ ಸರಿಸಾಟಿ ಆಗಬಲ್ಲ ಮತ್ತೊಬ್ಬ ವ್ಯಕ್ತಿಯೇ ಇಲ್ಲ. ಇದೇ ಮೊದಲ ಬಾರಿಗೆ ಅವರು ಭಾರತೀಯ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಮೈಕ್​ ಟೈಸನ್​ ಮುಖಾಮುಖಿ ಆಗುವ ದೃಶ್ಯಗಳನ್ನು ನೋಡಲು ಫ್ಯಾನ್ಸ್​ ಎಗ್ಸೈಟ್​ ಆಗಿದ್ದಾರೆ.

ಇದನ್ನೂ ಓದಿ:  ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ ದಕ್ಷಿಣದ ಹೀರೋಗಳು; ಯಶಸ್ಸಿನ ನಿರೀಕ್ಷೆಯಲ್ಲಿ ವಿಜಯ್​ ದೇವರಕೊಂಡ

ವಿಜಯ್​ ದೇವರಕೊಂಡ ನಟನೆಯ ‘ಲೈಗರ್​’ ಚಿತ್ರದಿಂದ ಅಭಿಮಾನಿಗಳಿಗೆ ಹೊಸ ವರ್ಷಕ್ಕೆ ಬಿಗ್​ ಗಿಫ್ಟ್​

Published On - 6:21 pm, Fri, 31 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್