AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಮುಂಬೈಗೆ ಭೇಟಿ ನೀಡಿದ ವಿಜಯ್ ದೇವರಕೊಂಡ; ಎಲ್ಲಾ ರಶ್ಮಿಕಾಗೋಸ್ಕರ ಎಂದ ಫ್ಯಾನ್ಸ್

ಮುಂಬೈ ವಿಮಾನ ನಿಲ್ದಾಣದಿಂದ ಹೊರ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಅವರು ತುಂಬಾನೇ ತರಾತುರಿಯಲ್ಲಿದ್ದರು. ಕ್ಯಾಮೆರಾಗೆ ಪೋಸ್ ನೀಡದೆ ಹೊರ ಹೋಗಿದ್ದಾರೆ.

ಏಕಾಏಕಿ ಮುಂಬೈಗೆ ಭೇಟಿ ನೀಡಿದ ವಿಜಯ್ ದೇವರಕೊಂಡ; ಎಲ್ಲಾ ರಶ್ಮಿಕಾಗೋಸ್ಕರ ಎಂದ ಫ್ಯಾನ್ಸ್
ರಶ್ಮಿಕಾ-ವಿಜಯ್
TV9 Web
| Edited By: |

Updated on: Jan 13, 2023 | 7:14 AM

Share

ವಿಜಯ್ ದೇವರಕೊಂಡ (Vijay Devarakonda) ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ಶುರುಹಚ್ಚಿಕೊಂಡಿದ್ದಾರೆ. ಅನೇಕ ಕಡೆಗಳಲ್ಲಿ ಈ ಜೋಡಿ ಒಟ್ಟಾಗಿ ತೆರಳುತ್ತಿದೆ. ಇತ್ತೀಚೆಗೆ ವಿಜಯ್ ಹಾಗೂ ರಶ್ಮಿಕಾ ಒಟ್ಟಾಗಿ ಮಾಲ್ಡೀವ್ಸ್​​ ಪ್ರವಾಸ ಮಾಡಿದ್ದರು ಎನ್ನಲಾಗಿದೆ. ಕೆಲ ದಿನಗಳ ಹಿಂದೆ ರಶ್ಮಿಕಾ ಮಂದಣ್ಣ (Rashmika Mandanna) ಲೈವ್ ಬಂದಿದ್ದರು. ರಶ್ಮಿಕಾ ಮಾತನಾಡುವಾಗ ಹಿನ್ನೆಲೆಯಲ್ಲಿ ವಿಜಯ್ ದೇವರಕೊಂಡ ಅವರ ಧ್ವನಿ ಕೇಳಿತ್ತು. ಈಗ ವಿಜಯ್ ದೇವರಕೊಂಡ ಅವರು ಏಕಾಏಕಿ ಮುಂಬೈಗೆ ಭೇಟಿ ನೀಡಿದ್ದಾರೆ. ಎಲ್ಲಾ ರಶ್ಮಿಕಾ ಮಂದಣ್ಣ ಅವರಿಗಾಗಿ ಎಂದು ಫ್ಯಾನ್ಸ್ ಮಾತನಾಡಿಕೊಳ್ಳುತ್ತಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮೊದಲ ಭಾರಿಗೆ ಭೇಟಿ ಆಗಿದ್ದು ‘ಗೀತ ಗೋವಿಂದಂ’ ಸೆಟ್​​ನಲ್ಲಿ. ಇಬ್ಬರ ಮಧ್ಯೆ ಗೆಳೆತನ ಬೆಳೆದು, ಆ ಗೆಳೆತನ ಪ್ರೀತಿಗೆ ತಿರುಗಿತು. ಕೆಲ ವರ್ಷಗಳ ಹಿಂದೆ ಬ್ರೇಕಪ್ ಮಾಡಿಕೊಂಡಿದ್ದ ಈ ಜೋಡಿ ಈಗ ಮತ್ತೆ ಒಂದಾಗಿದೆ. ಈಗ ವಿಜಯ್ ದೇವರಕೊಂಡ ಅವರು ಏಕಾಏಕಿ ಮುಂಬೈಗೆ ತೆರಳಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಿಂದ ಹೊರ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಅವರು ತುಂಬಾನೇ ತರಾತುರಿಯಲ್ಲಿದ್ದರು. ಕ್ಯಾಮೆರಾಗೆ ಪೋಸ್ ನೀಡದೆ ಹೊರ ಹೋಗಿದ್ದಾರೆ. ರಶ್ಮಿಕಾ ಅವರನ್ನು ಭೇಟಿ ಮಾಡಲು ತೆರಳಿರಬಹುದು ಎಂದು ಕೆಲವರು ಊಹಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ‘ಮಿಷನ್ ಮಜ್ನು’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಮುಂಬೈನಲ್ಲಿ ಈ ಚಿತ್ರಕ್ಕೆ ಅವರು ಪ್ರಮೋಷನ್ ಮಾಡುತ್ತಿದ್ದಾರೆ. ಸಿದ್ದಾರ್ಥ್ ಮಲ್ಹೋತ್ರ ಅವರು ರಶ್ಮಿಕಾಗೆ ಜತೆಯಾಗಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಕೆಲವರು ಈ ವಾದವನ್ನು ತಳ್ಳಿ ಹಾಕಿದೆ. ವಿಜಯ್ ದೇವರಕೊಂಡ ‘ಲೈಗರ್​’ ಸಿನಿಮಾ ಮೂಲಕ ಬಾಲಿವುಡ್​​ಗೆ ಕಾಲಿಟ್ಟರು. ಈ ಸಿನಿಮಾ ಸೋತಿತು. ಆದರೆ, ಅವರು ಸುಮ್ಮನೆ ಕೂತಿಲ್ಲ. ಮತ್ತೆ ಬಾಲಿವುಡ್​ಗೆ ಮರಳುವ ಪ್ರಯತ್ನದಲ್ಲಿದ್ದಾರೆ. ಹೀಗಾಗಿ, ಬೇರೆ ಬೇರೆ ನಿರ್ದೇಶಕರನ್ನು ಅವರು ಭೇಟಿ ಮಾಡುತ್ತಿದ್ದಾರೆ.

ಇದನ್ನೂ ಓದಿ: Mission Majnu Trailer: ಮತ್ತೆ ಪಾಕಿಸ್ತಾನಿ ಯುವತಿಯ ಪಾತ್ರ ಮಾಡಿದ ರಶ್ಮಿಕಾ ಮಂದಣ್ಣ

ವಿಜಯ್ ಕೈಯಲ್ಲಿ ‘ಖುಷಿ’ ಚಿತ್ರ ಇದೆ. ಸಮಂತಾ ಚಿತ್ರದ ನಾಯಕಿ. ಅವರಿಗೆ ಅನಾರೋಗ್ಯ ಕಾಡಿರುವುದರಿಂದ ಈ ಚಿತ್ರದ ಕೆಲಸಗಳು ವಿಳಂಬ ಆಗಿವೆ. ‘ಲೈಗರ್’ ನಿರ್ದೇಶಕ ಪುರಿ ಜಗನ್ನಾಥ್ ಜತೆ ವಿಜಯ್ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದರು. ಆದರೆ, ಇದು ಸೆಟ್ಟೇರುವುದು ಅನುಮಾನ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ