ಶಾರುಖ್ ಖಾನ್ ಚಿತ್ರದಿಂದ ಹೊರ ನಡೆದ ರಾಣಾ ದಗ್ಗುಬಾಟಿ; ವಿಜಯ್ ಸೇತುಪತಿಗೆ ಸಿಕ್ತು ಚಾನ್ಸ್

ಈ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಚಿತ್ರತಂಡದವರಿಂದ ಘೋಷಣೆ ಆಗುವ ಸಾಧ್ಯತೆ ಇದೆ. ಹೊಸ ಪೋಸ್ಟರ್ ಮೂಲಕ ವಿಜಯ್ ಸೇತುಪತಿ ಎಂಟ್ರಿ ಘೋಷಣೆ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

ಶಾರುಖ್ ಖಾನ್ ಚಿತ್ರದಿಂದ ಹೊರ ನಡೆದ ರಾಣಾ ದಗ್ಗುಬಾಟಿ; ವಿಜಯ್ ಸೇತುಪತಿಗೆ ಸಿಕ್ತು ಚಾನ್ಸ್
ವಿಜಯ್ ಸೇತುಪತಿ-ಶಾರುಖ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 04, 2022 | 6:35 AM

ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್​’ ಸಿನಿಮಾ (Jawan Movie) ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸಿನಿಮಾಗೆ ತಮಿಳು ನಿರ್ದೇಶಕ ಅಟ್ಲೀ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಟ್ಲೀ ಈಗಾಗಲೇ ಕಾಲಿವುಡ್​ನಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ಶಾರುಖ್ ಹಾಗೂ ಅಟ್ಲೀ ಒಂದಾಗಿರುವುದು ಸಾಕಷ್ಟು ಕುತೂಹಲ ಸೃಷ್ಟಿ ಮಾಡಿದೆ. ಈ ಚಿತ್ರಕ್ಕೆ ವಿಜಯ್ ಸೇತುಪತಿ ವಿಲನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

‘ಜವಾನ್​’ ಪ್ಯಾನ್ ಇಂಡಿಯಾ ಸಿನಿಮಾ. ಈ ಚಿತ್ರಕ್ಕೆ ನಯನತಾರಾ ನಾಯಕಿ. ಈ ಚಿತ್ರಕ್ಕೆ ವಿಲನ್ ಯಾರು ಆಗಲಿದ್ದಾರೆ ಎಂಬ ಕುತೂಹಲ ಇತ್ತು. ಆರಂಭದಲ್ಲಿ ಈ ಚಿತ್ರಕ್ಕೆ ರಾಣಾ ದಗ್ಗುಬಾಟಿ ಅವರು ವಿಲನ್ ಪಾತ್ರ ಮಾಡಲಿದ್ದಾರೆ ಎನ್ನಲಾಗಿತ್ತು. ಅವರು ಈ ಆಫರ್ ಒಪ್ಪಿದ್ದರು. ಆದರೆ, ಅವರು ಕಾರಣಾಂತರಗಳಿಂದ ಸಿನಿಮಾ ತಂಡದಿಂದ ಹೊರ ನಡೆದಿದ್ದರು. ಈಗ ವಿಜಯ್ ಸೇತುಪತಿ ಅವರು ಈ ಸ್ಥಾನ ತುಂಬುತ್ತಿದ್ದಾರೆ ಎನ್ನಲಾಗುತ್ತಿದೆ.

ರಾಣಾ ದಗ್ಗುಬಾಟಿ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡಲು ಸಾಕಷ್ಟು ಆಸಕ್ತಿ ತೋರಿದ್ದರು. ಆದರೆ, ಅವರು ತಮ್ಮ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಸಿನಿಮಾದಿಂದ ಹೊರ ಬಂದಿದ್ದಾರೆ. ಆ ಬಳಿಕ ಈ ಆಫರ್ ವಿಜಯ್ ಸೇತುಪತಿ ಬಳಿ ಹೋಗಿದೆ. ಅವರು ಖುಷಿಯಿಂದ ಈ ಸಿನಿಮಾ ಒಪ್ಪಿಕೊಂಡಿದ್ದಾರೆ. ವಿಶೇಷ ಎಂದರೆ ಈ ಆಫರ್​​ ಅನ್ನು ವಿಜಯ್​ ಸೇತುಪತಿಗೆ ಸ್ವತಃ ಶಾರುಖ್ ಖಾನ್ ನೀಡಿದ್ದಾರೆ ಎನ್ನಲಾಗಿದೆ. ಈ ಚಿತ್ರಕ್ಕಾಗಿ ತಮ್ಮ ಇತರ ಸಿನಿಮಾಗಳ ಕಾಲ್​ಶೀಟ್​ನಲ್ಲಿ ವಿಜಯ್ ಸೇತುಪತಿ ಹಲವು ಬದಲಾವಣೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ
Image
ಹಲವು ತಿಂಗಳ ಬಳಿಕ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್​ಗೆ ಫುಲ್ ರಿಲೀಫ್
Image
ಆರ್ಯನ್​ ಖಾನ್​ ಕೇಸ್​ ಮರೆತು ಸಾರ್ವಜನಿಕವಾಗಿ ಕಾಣಿಸಿಕೊಂಡ ಶಾರುಖ್ ಪತ್ನಿ ಗೌರಿ ಖಾನ್​, ಪುತ್ರಿ ಸುಹಾನಾ
Image
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಆರ್ಯನ್​ ಖಾನ್​; ಮಗನ ಹೆಗಲಿಗೆ ದೊಡ್ಡ ಜವಾಬ್ದಾರಿ ಹೊರಿಸಿದ ಶಾರುಖ್​?
Image
ಆರ್ಯನ್​ ಖಾನ್​​ಗೆ ಬಾಡಿಗಾರ್ಡ್​ ಫೈನಲ್​? ವರ್ಷದ ಸಂಬಳ 2.7 ಕೋಟಿ ರೂಪಾಯಿ

ಈ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಚಿತ್ರತಂಡದವರಿಂದ ಘೋಷಣೆ ಆಗುವ ಸಾಧ್ಯತೆ ಇದೆ. ಹೊಸ ಪೋಸ್ಟರ್ ಮೂಲಕ ವಿಜಯ್ ಸೇತುಪತಿ ಎಂಟ್ರಿ ಘೋಷಣೆ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ.

ಇದನ್ನೂ ಓದಿ: ಮತ್ತೆ ಪಾರ್ಟಿ ಮಾಡಿದ ಆರ್ಯನ್ ಖಾನ್; ಶಾರುಖ್ ಖಾನ್ ಮಗನ ವಿಡಿಯೋ ವೈರಲ್

ಶಾರುಖ್ ಖಾನ್ ಅವರು ‘ಜವಾನ್​’ ಮಾತ್ರವಲ್ಲದೆ, ರಾಜ್​ಕುಮಾರ್ ಹಿರಾನಿ ನಿರ್ದೇಶನದ ‘ಡಂಕಿ’ ಹಾಗೂ ಸಿದ್ದಾರ್ಥ್ ಆನಂದ್ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಪಠಾಣ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಗಳ ಬಗ್ಗೆಯೂ ಫ್ಯಾನ್ಸ್​ಗೆ ನಿರೀಕ್ಷೆ ಇದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ