ಮದುವೆಗೆ ಸಜ್ಜಾದ ತಮನ್ನಾ ಭಾಟಿಯಾ; ಭಾವಿ ಪತಿ ಜೊತೆ ಹೊಸ ಮನೆ ಹುಡುಕಾಟ

ಬದುಕಿನಲ್ಲಿ ಹೊಸ ಅಧ್ಯಾಯ ಆರಂಭಿಸಲು ನಟಿ ತಮನ್ನಾ ಭಾಟಿಯಾ ಅವರು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಅವರು ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಈಗಾಗಲೇ ಭಾವಿ ಪತಿಯ ಜೊತೆ ಸೇರಿಕೊಂಡು ಹೊಸ ಮನೆ ಹುಡುಕುತ್ತಿದ್ದಾರೆ ಎಂದು ವರದಿ ಆಗಿದೆ. ತಮನ್ನಾ ಅವರಿಗೆ ಚಿತ್ರರಂಗದಲ್ಲಿ ತುಂಬ ಬೇಡಿಕೆ ಇದೆ. ಅದರ ನಡೆವೆಯೂ ಅವರು ಮದುವೆ ಆಗಲು ನಿರ್ಧರಿಸಿದ್ದಾರೆ.

ಮದುವೆಗೆ ಸಜ್ಜಾದ ತಮನ್ನಾ ಭಾಟಿಯಾ; ಭಾವಿ ಪತಿ ಜೊತೆ ಹೊಸ ಮನೆ ಹುಡುಕಾಟ
ತಮನ್ನಾ ಭಾಟಿಯಾ
Follow us
ಮದನ್​ ಕುಮಾರ್​
|

Updated on: Nov 25, 2024 | 4:26 PM

ನಟಿಯಾಗಿ ಮಾತ್ರವಲ್ಲದೇ ಐಟಂ ಡ್ಯಾನ್ಸರ್ ಆಗಿಯೂ ತಮ್ಮನಾ ಭಾಟಿಯಾ ಅವರು ಬ್ಯುಸಿ ಆಗಿದ್ದಾರೆ. ಸದ್ಯದಲ್ಲೇ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿ ವೈಯಕ್ತಿಕ ಜೀವನದ ಕಡೆಗೆ ಗಮನ ಹರಿಸಲಿದ್ದಾರೆ. ಅಂದರೆ, ಅವರು ಮದುವೆ ಆಗಲಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟ ಆಗಿವೆ. ತಮನ್ನಾ ಭಾಟಿಯಾ ಅವರು ಬಾಲಿವುಡ್​ ನಟ ವಿಜಯ್ ವರ್ಮಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಮದುವೆ ಆಗಲು ತಮನ್ನಾ ಮತ್ತು ವಿಜಯ್ ವರ್ಮಾ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಅವರಿಬ್ಬರು ಈಗ ಹೊಸ ಮನೆಯ ಹುಡುಕಾಟದಲ್ಲಿದ್ದಾರೆ.

2025ರ ಆರಂಭದಲ್ಲಿ ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ಅವರು ಮದುವೆ ಆಗಲಿದ್ದಾರೆ. ಮದುವೆಗಾಗಿ ಅವರು ಶಾಪಿಂಗ್ ಮಾಡಲು ಆರಂಭಿಸಿದ್ದಾರೆ. ಸಂಸಾರ ನಡೆಸಲು ಬೇಕಾದ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಹೊಸ ಮನೆಯ ಅಗತ್ಯವಿದೆ. ಹಾಗಾಗಿ ಮುಂಬೈನಲ್ಲಿ ಅವರು ಹೊಸ ಮನೆಯ ಹುಡುಕಾಟ ನಡೆಸಿದ್ದಾರೆ. ಇಷ್ಟೆಲ್ಲ ಸುದ್ದಿ ಹರಿದಾಡುತ್ತಿದ್ದರೂ ಕೂಡ ಅವರು ಎಲ್ಲಿಯೂ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: ತಮನ್ನಾಗೆ ಕೈಕೋಳ ಉಡುಗೊರೆ ಕೊಟ್ಟವರ್ಯಾರು? ಯಾಕೆ?

ವಿಜಯ್ ವರ್ಮಾ ಮತ್ತು ತಮನ್ನಾ ಭಾಟಿಯಾ ಅವರು ತಮ್ಮ ಪ್ರೀತಿಯ ವಿಚಾರವನ್ನು ಗುಟ್ಟಾಗಿ ಇಟ್ಟಿಲ್ಲ. ಅನೇಕ ಸಂದರ್ಭಗಳಲ್ಲಿ ಅವರಿಬ್ಬರು ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಸಮಾರಂಭಗಳಲ್ಲಿ ಕೈ ಕೈ ಹಿಡಿದು ಬರುವ ಮೂಲಕ ರಿಲೇಷನ್​ಶಿಪ್​ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಇನ್ನೇನಿದ್ದರೂ ಅವರು ಹಸೆಮಣೆ ಏರುವುದೊಂದೇ ಬಾಕಿ.

ಇದನ್ನೂ ಓದಿ: ತಮನ್ನಾ ತೊಟ್ಟಿರುವ ಈ ಸಾದಾ-ಸೀದಾ ಉಡುಪಿನ ಬೆಲೆ ಲಕ್ಷಕ್ಕೂ ಹೆಚ್ಚು

2023ರಲ್ಲಿ ಬಿಡುಗಡೆಯಾದ ‘ಲಸ್ಟ್​ ಸ್ಟೋರೀಸ್​ 2’ ಸಿನಿಮಾದಲ್ಲಿ ಮೊದಲ ಬಾರಿಗೆ ತಮನ್ನಾ ಭಾಟಿಯಾ ಮತ್ತು ವಿಜಯ್ ವರ್ಮಾ ಅವರು ಜೊತೆಯಾಗಿ ನಟಿಸಿದರು. ತಮನ್ನಾ ಭಾಟಿಯಾ ಅವರಿಗೆ 34 ವರ್ಷ ವಯಸ್ಸು. 38ರ ಪ್ರಾಯದ ವಿಜಯ್ ವರ್ಮಾ ಜೊತೆ ಅವರ ಮದುವೆ ನೆರವೇರಲಿದೆ. ಮದುವೆ ಬಗ್ಗೆ ಈ ಜೋಡಿಯಿಂದಲೇ ಅಧಿಕೃತ ಸುದ್ದಿ ಹೊರಬೀಳಲಿ ಎಂದು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ