ಅಭಿಮಾನಿಯ ಕಾಲು ಮುಟ್ಟಿ ನಮಸ್ಕಾರ ಮಾಡಿದ ಹೃತಿಕ್​ ರೋಷನ್​; ಇಲ್ಲಿದೆ ವೈರಲ್​ ವಿಡಿಯೋ

Hrithik Roshan Viral Video: ಮಾಧ್ಯಮಗಳ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿದೆ. ಹೃತಿಕ್​ ರೋಷನ್​ ಫ್ಯಾನ್ಸ್​ ವಲಯದಲ್ಲಿ ಇದು ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಅಭಿಮಾನಿಯ ಕಾಲು ಮುಟ್ಟಿ ನಮಸ್ಕಾರ ಮಾಡಿದ ಹೃತಿಕ್​ ರೋಷನ್​; ಇಲ್ಲಿದೆ ವೈರಲ್​ ವಿಡಿಯೋ
ಹೃತಿಕ್ ರೋಷನ್ ವೈರಲ್ ವಿಡಿಯೋ
Follow us
TV9 Web
| Updated By: ಮದನ್​ ಕುಮಾರ್​

Updated on:Aug 28, 2022 | 3:05 PM

ನಟ ಹೃತಿಕ್​ ರೋಷನ್​ (Hrithik Roshan) ಅವರು ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ಬಾಲಿವುಡ್​ನಲ್ಲಿ (Bollywood)  ಅವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್​ ಇದೆ. ಸಾಹಸ ಪ್ರಧಾನ ಸಿನಿಮಾಗಳ ಮೂಲಕ ಅವರು ಹೆಸರು ಮಾಡಿದ್ದಾರೆ. ಹೃತಿಕ್​ ರೋಷನ್​ ಎಂದರೆ ಕೋಟ್ಯಂತರ ಜನರಿಗೆ ಸ್ಫೂರ್ತಿ. ಸಿನಿಮಾ ಮಾತ್ರವಲ್ಲದೇ ಫಿಟ್ನೆಸ್​ ವಿಚಾರದಲ್ಲೂ ಅವರು ಮಾದರಿ ವ್ಯಕ್ತಿ ಆಗಿದ್ದಾರೆ. ಇನ್ನು, ಅಭಿಮಾನಿಗಳ ಜತೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳುವ ಕಾರಣದಿಂದಲೂ ಅವರನ್ನು ಜನರು ಇಷ್ಟ ಪಡುತ್ತಾರೆ. ಅದಕ್ಕೆ ಈಗ ಒಂದು ಹೊಸ ಉದಾಹರಣೆ ಸಿಕ್ಕಿದೆ. ವೇದಿಕೆಯಲ್ಲಿ ಅಭಿಮಾನಿಯೊಬ್ಬರ ಕಾಲಿಗೆ ಹೃತಿಕ್​ ರೋಷನ್​ ನಮಸ್ಕಾರ ಮಾಡಿದ್ದಾರೆ. ಆ ವಿಡಿಯೋ (Hrithik Roshan Viral Video) ಸಖತ್​ ವೈರಲ್​ ಆಗಿದೆ. ನೆಚ್ಚಿನ ನಟನ ಸರಳತೆ ಕಂಡ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇತ್ತೀಚೆಗೆ ಹೃತಿಕ್ ರೋಷನ್​ ಅವರು ಫಿಟ್ನೆಸ್​ಗೆ ಸಂಬಂಧಿಸಿ ಕಾರ್ಯಕ್ರಮವೊಂದಕ್ಕೆ ಮುಖ್ಯ ಅತಿಯಾಗಿ ತೆರಳಿದ್ದರು. ಆ ಕಾರ್ಯಕ್ರಮದ ವೇದಿಕೆಯಲ್ಲಿ ಅವರ ಕೈಯಿಂದ ಅನೇಕರಿಗೆ ಬಹುಮಾನ ವಿತರಿಸಲಾಯಿತು. ಬಹುಮಾನ ಸ್ವೀಕರಿಸಲು ವೇದಿಕೆ ಬಂದ ಅಭಿಮಾನಿಯೊಬ್ಬರು ಹೃತಿಕ್​ ಕಾಲಿಗೆ ನಮಸ್ಕರಿಸಿದರು. ಕೂಡಲೇ ಹೃತಿಕ್​ ಕೂಡ ಆ ಅಭಿಮಾನಿಯ ಕಾಲು ಮುಟ್ಟಿ ನಮಸ್ಕಾರ ಮಾಡಿದರು. ಮಾಧ್ಯಮದ ಕ್ಯಾಮೆರಾದಲ್ಲಿ ಈ ವಿಡಿಯೋ ಸೆರೆಯಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗಿದೆ.

ಇದನ್ನೂ ಓದಿ
Image
‘ಕೆಜಿಎಫ್​ 3’ ಚಿತ್ರದಲ್ಲಿ ಹೃತಿಕ್​ ರೋಷನ್​ ಇರ್ತಾರಾ? ಊರ ತುಂಬ ಹಬ್ಬಿದೆ ಹೊಸ ಗಾಸಿಪ್​
Image
ಹೃತಿಕ್​ ರೋಷನ್​ಗೂ ಅಚ್ಚರಿ ಮೂಡಿಸಿತು 67 ವರ್ಷದ ನಟ ಅನುಪಮ್​ ಖೇರ್​ ಫಿಟ್ನೆಸ್​; ಇಲ್ಲಿದೆ ಫೋಟೋ
Image
‘ಹೃತಿಕ್​ ರೋಷನ್​ ಜತೆ ನೀವು ಡೇಟಿಂಗ್​ ಮಾಡ್ತಾ ಇದ್ದೀರಾ?’; ನೇರ ಪ್ರಶ್ನೆಗೆ ಸಬಾ ಉತ್ತರ ಏನಿತ್ತು?
Image
‘ಪ್ರೀತಿಯ ಆರ್ಯನ್​ ಖಾನ್​..’: ಶಾರುಖ್​ ಪುತ್ರನಿಗೆ ಹೃತಿಕ್​ ರೋಷನ್​ ಬಹಿರಂಗ ಪತ್ರ

ಸದ್ಯ ಹೃತಿಕ್ ರೋಷನ್​ ಅವರು ‘ವಿಕ್ರಮ್​ ವೇದ’ ಸಿನಿಮಾದ ಮೇಲೆ ಗಮನ ಹರಿಸಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟೀಸರ್​​ ಬಿಡುಗಡೆ ಆಗಿದೆ. ಇದು ತಮಿಳಿನ ‘ವಿಕ್ರಮ್​ ವೇದ’ ಚಿತ್ರದ ಹಿಂದಿ ರಿಮೇಕ್​. ಈ ಸಿನಿಮಾದಲ್ಲಿ ಹೃತಿಕ್ ರೋಷನ್​ ಜೊತೆ ಸೈಫ್​ ಅಲಿ ಖಾನ್​ ಕೂಡ ಮುಖ್ಯ ಪಾತ್ರ ಮಾಡಿದ್ದಾರೆ. ಮೂಲ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಪುಷ್ಕರ್​-ಗಾಯತ್ರಿ ಅವರೇ ರಿಮೇಕ್​ಗೂ ನಿರ್ದೇಶನ ಮಾಡಿದ್ದಾರೆ.

‘ವಿಕ್ರಮ್​ ವೇದ’ ಸಿನಿಮಾದಲ್ಲಿ ಸೈಫ್​ ಅಲಿ ಖಾನ್​ ಪೊಲೀಸ್​ ಅಧಿಕಾರಿ ಪಾತ್ರ ಮಾಡಿದ್ದಾರೆ. ಗ್ಯಾಂಗ್​ಸ್ಟರ್​ ಆಗಿ ಹೃತಿಕ್​ ರೋಷನ್​ ಮನರಂಜನೆ ನೀಡಲಿದ್ದಾರೆ. ಇಬ್ಬರ ನಡುವೆ ಈ ಸಿನಿಮಾದಲ್ಲಿ ಹಲವು ಫೈಟಿಂಗ್​ ಸನ್ನಿವೇಶಗಳು ಇರಲಿವೆ ಎಂಬುದಕ್ಕೆ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ಹೃತಿಕ್​ ರೋಷನ್ ಪಾತ್ರಕ್ಕೆ ರಗಡ್​ ಗೆಟಪ್​ ಇದೆ.

ಸೆಪ್ಟೆಂಬರ್​ 30ರಂದು ‘ವಿಕ್ರಮ್​ ವೇದ’ ಸಿನಿಮಾ ರಿಲೀಸ್​ ಆಗಲಿದೆ. ಹೃತಿಕ್​ ನಟಿಸಿದ್ದ ‘ವಾರ್​’ ಸಿನಿಮಾ 2019ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಗಿತ್ತು. ಈಗ ಅದೇ ರೀತಿ ಮತ್ತೊಂದು ಗೆಲುವಿಗಾಗಿ ಅವರು ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:05 pm, Sun, 28 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ