ಗೋಧ್ರಾ ಹತ್ಯಾಕಾಂಡ ಕುರಿತ ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾ ಆ.2ಕ್ಕೆ ಬಿಡುಗಡೆ

|

Updated on: Apr 22, 2024 | 10:54 PM

2002ರ ಫೆ.27ರಂದು ಗೋಧ್ರಾ ರೇಲ್ವೆ ನಿಲ್ದಾಣದ ಸಮೀಪ ಭಾರಿ ದುರಂತ ನಡೆದಿತ್ತು. ಆ ಕಹಿ ಘಟನೆಯ ಸುತ್ತ ಅನೇಕ ವಿವಾದಗಳು ಸುತ್ತಿಕೊಂಡಿವೆ. ಆ ಘಟನೆಯನ್ನು ಕೇಂದ್ರವಾಗಿ ಇಟ್ಟುಕೊಂಡು ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾ ಸಿದ್ಧವಾಗಿದೆ. ಆದ್ದರಿಂದ ಪ್ರೇಕ್ಷಕರಿಗೆ ಈ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇದೆ. ಆಗಸ್ಟ್​ 2ರಂದು ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.

ಗೋಧ್ರಾ ಹತ್ಯಾಕಾಂಡ ಕುರಿತ ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾ ಆ.2ಕ್ಕೆ ಬಿಡುಗಡೆ
ವಿಕ್ರಾಂತ್​ ಮಾಸ್ಸಿ
Follow us on

ಹಲವು ವರ್ಷಗಳ ಹಿಂದೆ ನಡೆದ ಕಹಿ ಘಟನೆಗಳನ್ನು ಆಧರಿಸಿ ಸಿದ್ಧವಾದ ಕೆಲವು ಸಿನಿಮಾಗಳು ಭಾರಿ ಯಶಸ್ಸು ಕಂಡಿವೆ. ‘ದಿ ಕಾಶ್ಮೀರ್​ ಫೈಲ್ಸ್​’, ‘ದಿ ಕೇರಳ ಸ್ಟೋರಿ’ ಸಿನಿಮಾಗಳೇ ಅದಕ್ಕೆ ಸಾಕ್ಷಿ. ಅದೇ ರೀತಿ ಗೋಧ್ರಾ (Godhra) ಹತ್ಯಾಕಾಂಡದ ಕುರಿತು ಈಗ ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾಗೆ ‘ದಿ ಸಾಬರಮತಿ ರಿಪೋರ್ಟ್​’ (The Sabarmati Report) ಎಂದು ಶೀರ್ಷಿಕೆ ಇಡಲಾಗಿದೆ. ಕೆಲವೇ ತಿಂಗಳ ಹಿಂದೆ ಈ ಚಿತ್ರದ ಟೀಸರ್​ ಬಿಡುಗಡೆ ಆಗಿ ಗಮನ ಸೆಳೆದಿತ್ತು. ಈಗ ‘ದಿ ಸಾಬರಮತಿ ರಿಪೋರ್ಟ್​’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಆಗಸ್ಟ್​ 2ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ನಟ ವಿಕ್ರಾಂತ್​ ಮಾಸ್ಸಿ (Vikrant Massey) ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

2002ರ ಫೆಬ್ರವರಿ 27ರಂದು ಗುಜರಾತ್​ನ ಗೋಧ್ರಾ ರೇಲ್ವೆ ನಿಲ್ದಾಣದ ಬಳಿ ದೊಡ್ಡ ದುರಂತ ಸಂಭವಿಸಿತ್ತು. ಆ ಘಟನೆಯ ಸುತ್ತ ಹಲವಾರು ವಿವಾದಗಳು ಸುತ್ತಿಕೊಂಡಿವೆ. ಅದೇ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾ ನಿರ್ಮಾಣ ಆಗಿರುವುದರಿಂದ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. 22 ವರ್ಷಗಳ ಹಿಂದೆ ನಡೆದ ಘಟನೆಯ ಚಿತ್ರಣ ಈಗ ದೊಡ್ಡ ಪರದೆಯಲ್ಲಿ ಜನರ ಎದುರು ಬರಲಿದೆ.

ಬಾಲಾಜಿ ಮೋಷನ್​ ಪಿಕ್ಚರ್ಸ್​ನ ‘ಬಾಲಾಜಿ ಟಿಲಿಫಿಲ್ಮ್ಸ್​​’ ಮೂಲಕ ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾ ನಿರ್ಮಾಣ ಆಗಿದೆ. ರಂಜನ್​ ಚಂಡೇಲ್​ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ವಿಕ್ರಾಂತ್​ ಮಾಸ್ಸಿ ಜೊತೆಗೆ ರಾಶಿ ಖನ್ನಾ, ರಿಧಿ ಡೋಗ್ರಾ ಕೂಡ ನಟಿಸಿದ್ದಾರೆ. ವಿವಾದಾತ್ಮಕ ವಸ್ತುವಿಷಯ ಇರುವುದರಿಂದ ಈ ಸಿನಿಮಾಗೆ ಜನರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು.

ಇದನ್ನೂ ಓದಿ: ‘ಇರ್ಫಾನ್​ ಖಾನ್​ ಅವರ ಸ್ಥಾನವನ್ನು ಈ ನಟ ತುಂಬುತ್ತಾರೆ’; ವಿಕ್ರಾಂತ್​ ಮಾಸ್ಸಿಗೆ ಕಂಗನಾ ಹೊಗಳಿಕೆ

ಈ ಮೊದಲು ‘ದಿ ಸಾಬರಮತಿ ರಿಪೋರ್ಟ್​​’ ಸಿನಿಮಾವನ್ನು ಮೇ 3ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ದೇಶಾದ್ಯಂತ ಈಗ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹಲವು ಹಂತಗಳಲ್ಲಿ ಮತದಾನಕ್ಕೆ ದಿನಾಂಕಗಳು ನಿಗದಿ ಆಗಿವೆ. ಇಂಥ ಸಂದರ್ಭದಲ್ಲಿ ಈ ಚಿತ್ರವನ್ನು ರಿಲೀಸ್​ ಮಾಡಿದರೆ ನೀತಿ ಸಂಹಿತೆಯ ಉಲ್ಲಂಘನೆ ಆಗಲಿದೆ. ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಚಿತ್ರದ ಬಿಡುಗಡೆ ದಿನಾಂಕವನ್ನು ಮೇ 3ರ ಬದಲಿಗೆ ಆಗಸ್ಟ್​ 2ಕ್ಕೆ ಮುಂದೂಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.