AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಾಂತ್​ ರೋಣ ಸಿನಿಮಾ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಕಚೇರಿಯಲ್ಲಿ ವಿಚಾರಣೆ ನಡೆಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ
TV9 Web
| Edited By: |

Updated on:Aug 30, 2021 | 6:15 PM

Share

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಾಂತ್​ ರೋಣ ಸಿನಿಮಾ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದೆ. ಸತತ ಐದು ಗಂಟೆಗಳ ಕಾಲ ಈ ವಿಚಾರಣೆ ನಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್​ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಜಾಕ್ವೆಲಿನ್​ ಅವರು ಆರೋಪಿ ಎಂದು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಲಿಲ್ಲ. ಸುಕೇಶ್​ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಕ್ಷ್ಯ ಎನ್ನುವ ರೀತಿಯಲ್ಲಿ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸುಕೇಶ್​ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಸುಕೇಶ್​ ಈ ಪ್ರಕರಣದ ಪ್ರಮುಖ ಆರೋಪಿ. ಈತ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದ.

ಬಾಲಿವುಡ್​ನಲ್ಲಿ ಸಖತ್​ ಫೇಮಸ್​ ಆಗಿರುವ ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಇದೇ ಮೊದಲ ಬಾರಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ. ಜಾಕ್ವೆಲಿನ್​ ಜೊತೆಗೆ ಶೂಟಿಂಗ್ ಮುಗಿಸಿದ ಬಳಿಕ ಅವರ ಕಾರ್ಯವೈಖರಿಗೆ ಸುದೀಪ್​ ಮೆಚ್ಚುಗೆ ಸೂಚಿಸಿದ್ದರು. ಇಬ್ಬರೂ ಜೊತೆಯಾಗಿರುವ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡು, ವಿಶೇಷ ಹಾಡಿನ ಬಗ್ಗೆ ನಿರೀಕ್ಷೆ ಮೂಡಿಸಿದ್ದರು. ಆ ಹಾಡು ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುವಷ್ಟು ಕಾತರ ಹೆಚ್ಚಿದೆ.

ಮತ್ತಷ್ಟು ಮಾಹಿತಿಗೆ ನಿರೀಕ್ಷಿಸಿ.. 

Published On - 5:53 pm, Mon, 30 August 21

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ