ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಾಂತ್ ರೋಣ ಸಿನಿಮಾ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದೆ. ಸತತ ಐದು ಗಂಟೆಗಳ ಕಾಲ ಈ ವಿಚಾರಣೆ ನಡೆದಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಸುಲಿಗೆ ಜಾಲ ಒಂದು ಪತ್ತೆ ಆಗಿತ್ತು. ಸುಕೇಶ್ ಚಂದ್ರಶೇಖರ್ ಎಂಬಾತ ಇದನ್ನು ನಡೆಸುತ್ತಿದ್ದ. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಜಾಕ್ವೆಲಿನ್ ಅವರು ಆರೋಪಿ ಎಂದು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಲಿಲ್ಲ. ಸುಕೇಶ್ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಕ್ಷ್ಯ ಎನ್ನುವ ರೀತಿಯಲ್ಲಿ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿದು ಬಂದಿದೆ.
ಸುಕೇಶ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಸುಕೇಶ್ ಈ ಪ್ರಕರಣದ ಪ್ರಮುಖ ಆರೋಪಿ. ಈತ 17ನೇ ವಯಸ್ಸಿಗೆ ಈ ಕೆಲಸಕ್ಕೆ ಇಳಿದಿದ್ದ.
Enforcement Directorate (ED) is questioning Bollywood actress Jacqueline Fernandez in Delhi for the last five hours, in a money laundering case.
(File photo) pic.twitter.com/ftUj2CkNcN
— ANI (@ANI) August 30, 2021
ಬಾಲಿವುಡ್ನಲ್ಲಿ ಸಖತ್ ಫೇಮಸ್ ಆಗಿರುವ ಜಾಕ್ವೆಲಿನ್ ಫರ್ನಾಂಡಿಸ್ ಅವರು ಇದೇ ಮೊದಲ ಬಾರಿಗೆ ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಂತಾಗಿದೆ. ಜಾಕ್ವೆಲಿನ್ ಜೊತೆಗೆ ಶೂಟಿಂಗ್ ಮುಗಿಸಿದ ಬಳಿಕ ಅವರ ಕಾರ್ಯವೈಖರಿಗೆ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಇಬ್ಬರೂ ಜೊತೆಯಾಗಿರುವ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡು, ವಿಶೇಷ ಹಾಡಿನ ಬಗ್ಗೆ ನಿರೀಕ್ಷೆ ಮೂಡಿಸಿದ್ದರು. ಆ ಹಾಡು ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುವಷ್ಟು ಕಾತರ ಹೆಚ್ಚಿದೆ.
ಮತ್ತಷ್ಟು ಮಾಹಿತಿಗೆ ನಿರೀಕ್ಷಿಸಿ..
Published On - 5:53 pm, Mon, 30 August 21