AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡು ಮಗುವಿಗೆ ಜನ್ಮವಿತ್ತ ಅನುಷ್ಕಾ, ಖುಷಿ ಹಂಚಿಕೊಂಡ ವಿರಾಟ್: ಮಗುವಿನ ಹೆಸರೇನು?

Virat-Anushka: ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಎರಡನೇ ಮಗುವನ್ನು ಸ್ವಾಗತಿಸಿದ್ದಾರೆ. ಮಗುವಿಗೆ ಭಿನ್ನ ಹೆಸರನ್ನು ವಿರಾಟ್ ಹಾಗೂ ಅನುಷ್ಕಾ ಇಟ್ಟಿದ್ದಾರೆ.

ಗಂಡು ಮಗುವಿಗೆ ಜನ್ಮವಿತ್ತ ಅನುಷ್ಕಾ, ಖುಷಿ ಹಂಚಿಕೊಂಡ ವಿರಾಟ್: ಮಗುವಿನ ಹೆಸರೇನು?
ಮಂಜುನಾಥ ಸಿ.
|

Updated on:Feb 20, 2024 | 9:44 PM

Share

ಭಾರತದ ಟಾಪ್ ಸೆಲೆಬ್ರಿಟಿ ಜೋಡಿ ವಿರಾಟ್ ಕೊಹ್ಲಿ (Virat Kohli) ಮತ್ತು ಅನುಷ್ಕಾ ಶರ್ಮಾ (Anushka Sharma) ಗಂಡು ಮಗುವಿನ ಪೋಷಕರಾಗಿದ್ದಾರೆ. ನಟಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಖುಷಿಯ ಸುದ್ದಿಯನ್ನು ಇನ್​ಸ್ಟಾಗ್ರಾಂನಲ್ಲಿ ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಈಗಾಗಲೇ ಒಂದು ಹೆಣ್ಣು ಮಗುವಿದೆ. ಇದೀಗ ಗಂಡು ಮಗುವನ್ನು ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಫೆಬ್ರವರಿ 15ರಂದೇ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಸುದ್ದಿಯನ್ನು ತಡವಾಗಿ ಹಂಚಿಕೊಳ್ಳಲಾಗಿದೆ.

ಗಂಡು ಮಗುವಿಗೆ ‘ಅಕಾಯ್’ ಎಂದು ಹೆಸರಿಟ್ಟಿದ್ದಾರೆ ವಿರಾಟ್ ಹಾಗೂ ಅನುಷ್ಕಾ ಶರ್ಮಾ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಂಚಿಕೊಂಡಿರುವ ವಿರಾಟ್ ಕೊಹ್ಲಿ, ‘ಅತ್ಯಂತ ಸಂತೋಷ ಮತ್ತು ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ. ಫೆಬ್ರವರಿ 15 ರಂದು, ನಾವು ನಮ್ಮ ಗಂಡು ಮಗು ಅಕಾಯ್ ಅನ್ನು ನಮ್ಮ ಜೀವನಕ್ಕೆ ಸ್ವಾಗತಿಸಿದ್ದೇವೆ. ಅಕಾಯ್, ವಮಿಕಾಳ ಪುಟ್ಟ ಸಹೋದರ. ನಾವು ‘ಅಕಾಯ್’ ಅನ್ನು ಸ್ವಾಗತಿಸಿದ ಸುದ್ದಿ ತಿಳಿಸಲು ಬಹಳ ಖುಷಿ ಪಡುತ್ತಿದ್ದೇವೆ. ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸಲು ವಿನಂತಿಸುತ್ತೇವೆ’ ಎಂದು ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ:2ನೇ ಬಾರಿ ಪ್ರೆಗ್ನೆಂಟ್​ ಆದ ಅನುಷ್ಕಾ ಶರ್ಮಾ? ನೆಟ್ಟಿಗರಿಗೆ ಸಿಕ್ಕಿದೆ ವಿಡಿಯೋ ಸಾಕ್ಷಿ

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ 2017ರಲ್ಲಿ ವಿವಾಹವಾದರು. 2021ರಲ್ಲಿ ಮೊದಲ ಮಗು ವಮಿಕಾಗೆ ಅನುಷ್ಕಾ ಶರ್ಮಾ ಜನ್ಮ ನೀಡಿದರು. ಈಗ 2024ರ ಫೆಬ್ರವರಿ 15ರಂದು ಅಕಾಯ್​ಗೆ ಜನ್ಮ ನೀಡಿದ್ದಾರೆ. ಅಕಾಯ್ ಎಂದರೆ ಟರ್ಕಿಶ್​ನಲ್ಲಿ ಹೊಳೆಯುವ ಚಂದ್ರ ಎಂಬ ಅರ್ಥವಿದೆ. ಹಿಂದಿಯಲ್ಲಿ ಕಾಯ ಇಲ್ಲದವ ಅಥವಾ ಶಿವ ಎಂಬ ಅರ್ಥವೂ ಇದೆ ಎನ್ನಲಾಗುತ್ತದೆ. ಮಗಳಿಗೆ ‘ವಮಿಕಾ’ ಎಂದು ಹೆಸರು ಇಟ್ಟಿದ್ದಾರೆ ವಿರಾಟ್ ಹಾಗೂ ಅನುಷ್ಕಾ. ವಮಿಕಾ ಎಂದರೆ ಸಂಸ್ಕೃತದಲ್ಲಿ ದೇವಿ ದುರ್ಗಾ ಎಂದರ್ಥ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:40 pm, Tue, 20 February 24

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ