‘ದಿ ಕಾಶ್ಮೀರ್ ಫೈಲ್ಸ್​’ ಕೆಟ್ಟ ಸಿನಿಮಾ ಎಂಬ ಹೇಳಿಕೆ; ಸತ್ಯ ಜನರಿಂದ ಸುಳ್ಳು ಹೇಳಿಸುತ್ತದೆ ಎಂದ ವಿವೇಕ್ ಅಗ್ನಿಹೋತ್ರಿ

| Updated By: ರಾಜೇಶ್ ದುಗ್ಗುಮನೆ

Updated on: Nov 29, 2022 | 11:08 AM

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಸೋಮವಾರ ರಾತ್ರಿ ಮಾತನಾಡಿದ್ದ ನಡಾವ್, ‘ದಿ ಕಾಶ್ಮೀರ್ ಫೈಲ್ಸ್ ಅಸಭ್ಯ ಸಿನಿಮಾ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಕಲಾತ್ಮಕ ವಿಭಾಗಕ್ಕೆ ಸೂಕ್ತವಲ್ಲ’ ಎಂದಿದ್ದರು.

‘ದಿ ಕಾಶ್ಮೀರ್ ಫೈಲ್ಸ್​’ ಕೆಟ್ಟ ಸಿನಿಮಾ ಎಂಬ ಹೇಳಿಕೆ; ಸತ್ಯ ಜನರಿಂದ ಸುಳ್ಳು ಹೇಳಿಸುತ್ತದೆ ಎಂದ ವಿವೇಕ್ ಅಗ್ನಿಹೋತ್ರಿ
ವಿವೇಕ್​-ನಡಾವ್
Follow us on

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್​’ (The Kashmir Files) ಚಿತ್ರಕ್ಕೆ ಹಿನ್ನಡೆ ಆಗಿತ್ತು. ಈ ಚಿತ್ರದ ಬಗ್ಗೆ ಇಸ್ರೇಲ್ ನಿರ್ಮಾಪಕ ಹಾಗೂ ತೀರ್ಪುಗಾರರ ಮುಖ್ಯಸ್ಥ ನಡಾವ್ ಲಪಿಡ್ ಅವರು ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಬಗ್ಗೆ ಅಪಸ್ವರ ತೆಗೆದಿದ್ದರು. ಇದೊಂದು ಕೆಟ್ಟ ಸಿನಿಮಾ ಎಂದು ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ವಿವೇಕ್ ಅಗ್ನಿಹೋತ್ರಿ ಅವರು ಇದಕ್ಕೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಸಿನಿಮೋತ್ಸವ ಮಂಡಳಿ ಈ ವಿವಾದದಿಂದ ದೂರ ಸರಿಯುವ ಪ್ರಯತ್ನ ಮಾಡಿದೆ.

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಸೋಮವಾರ ರಾತ್ರಿ ಮಾತನಾಡಿದ್ದ ನಡಾವ್, ‘ದಿ ಕಾಶ್ಮೀರ್ ಫೈಲ್ಸ್ ಅಸಭ್ಯ ಸಿನಿಮಾ. ಇಂತಹ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಕಲಾತ್ಮಕ ವಿಭಾಗಕ್ಕೆ ಸೂಕ್ತವಲ್ಲ. ಈ ಚಿತ್ರ ನೋಡಿ ನಾವು ವಿಚಲಿತರಾಗಿದ್ದೇವೆ. ಈ ವೇದಿಕೆಯಲ್ಲಿ ನಿಮ್ಮೊಂದಿಗೆ ಈ ವಿಚಾರ ತಿಳಿಸಲು ನನಗೇನು ತೊಂದರೆ ಇಲ್ಲ. ಸಿನಿಮೋತ್ಸವದಲ್ಲಿ ನೀಡಿದ ವಿಮರ್ಶಾತ್ಮಕ ಚರ್ಚೆಯನ್ನು ನಾವು ಸ್ವೀಕರಿಸಬಹುದು’ ಎಂದಿದ್ದರು.

ಈ ಹೇಳಿಕೆ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅವರು ಅಸಮಾಧಾನಗೊಂಡಂತಿದೆ. ಅವರು ಈ ಬಗ್ಗೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ‘ಶುಭ ಮುಂಜಾನೆ. ಸತ್ಯ ಎನ್ನುವುದು ಅತ್ಯಂತ ಕಠೋರ ವಿಚಾರ. ಅದು ಜನರಿಂದ ಸುಳ್ಳನ್ನು ಹೇಳಿಸುತ್ತದೆ’ ಎಂದಿದ್ದಾರೆ ವಿವೇಕ್ ಅಗ್ನಿಹೋತ್ರಿ. ಇದು ನಡಾವ್ ಅವರ ಹೇಳಿಕೆಗೆ ನೀಡಿದ ತಿರುಗೇಟು ಎಂದು ಬಣ್ಣಿಸಲಾಗುತ್ತಿದೆ.

ಇದನ್ನೂ ಓದಿ
ಬೈಕಾಟ್ ಟ್ರೆಂಡ್​ಗೆ ಸೆಡ್ಡು ಹೊಡೆದ ‘ಬ್ರಹ್ಮಾಸ್ತ್ರ’; ಬಾಕ್ಸ್ ಆಫೀಸ್ ಉಡೀಸ್​ ಮಾಡಿದ ರಣಬೀರ್​-ಆಲಿಯಾ ಚಿತ್ರ
‘ಇದು ಎಕ್ಸ್​​ಟ್ರಾ ಬಜೆಟ್​​ನ ನಾಗಿಣಿ ಧಾರಾವಾಹಿ’; ‘ಬ್ರಹ್ಮಾಸ್ತ್ರ’ ಸಿನಿಮಾ ನೋಡಿದವರು ಹೀಗಂದ್ರು
KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

ಮಂಡಳಿ ಸ್ಪಷ್ಟನೆ

‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಬಗ್ಗೆ ನಡಾವ್ ನೀಡಿದ ಹೇಳಿಕೆ ಕುರಿತು ಪರ ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಇದನ್ನು ಒಪ್ಪಿದರೆ, ಇನ್ನೂ ಕೆಲವರು ಕೊಂಕು ತೆಗೆದಿದ್ದಾರೆ. ಪ್ರತಿಷ್ಠಿತ ವೇದಿಕೆ ಮೇಲೆ ನಡಾವ್ ಅವರು ಈ ರೀತಿ ಹೇಳಬಾರದಿತ್ತು ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಮಂಡಳಿ ಸ್ಪಷ್ಟನೆ ನೀಡಿದೆ. ‘ಈ ಹೇಳಿಕೆಗೂ ಮಂಡಳಿಗೂ ಯಾವುದೇ ಸಂಬಂಧ ಇಲ್ಲ. ಇದು ಅವರ ಅಭಿಪ್ರಾಯ’ ಎಂದು ಹೇಳಿದೆ. ಈ ಮೂಲಕ ವಿವಾದದಿಂದ ದೂರ ಉಳಿಯುವ ಪ್ರಯತ್ನ ಮಾಡಿದೆ.

ಇದನ್ನೂ ಓದಿ: ಬಾಕ್ಸ್ ಆಫೀಸ್ ಕಲೆಕ್ಷನ್​ನಲ್ಲಿ ‘ದಿ ಕಾಶ್ಮೀರ್ ಫೈಲ್ಸ್​’ ಹಿಂದಿಕ್ಕಲಿದೆ ‘ಬ್ರಹ್ಮಾಸ್ತ್ರ’ ಸಿನಿಮಾ; ಸೈಲೆಂಟ್ ಆಯ್ತು ಬಾಯ್ಕಾಟ್ ಟ್ರೆಂಡ್

ಸಿನಿಮಾದಲ್ಲೇನಿದೆ?

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದಲ್ಲಿ ಕಾಶ್ಮೀರಿ ಪಂಡಿತರ ಕಥೆ ಹೇಳಲಾಗಿದೆ. 1990ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ವಲಸೆ ಹಾಗೂ ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಈ ಸಿನಿಮಾ ಇದೆ.