ವಿವೇಕ್ ಅಗ್ನಿಹೋತ್ರಿ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’; ಕನ್ನಡ ಸೇರಿ 11 ಭಾಷೆಗಳಲ್ಲಿ ರಿಲೀಸ್

ಈ ಚಿತ್ರದ ರಿಲೀಸ್ ಡೇಟ್​ ಕೂಡ ಘೋಷಣೆ ಮಾಡಲಾಗಿದೆ. ಸ್ವಾತಂತ್ರ್ಯ ದಿನದ ಪ್ರಯುಕ್ತ ಈ ಚಿತ್ರ 2023ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ವಿಶೇಷ ಎಂದರೆ ಈ ಚಿತ್ರ 11 ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

ವಿವೇಕ್ ಅಗ್ನಿಹೋತ್ರಿ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’; ಕನ್ನಡ ಸೇರಿ 11 ಭಾಷೆಗಳಲ್ಲಿ ರಿಲೀಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 10, 2022 | 3:50 PM

‘ದಿ ಕಾಶ್ಮೀರ್ ಫೈಲ್ಸ್​’ (The Kashmir Files Movie) ಚಿತ್ರದ ಮೂಲಕ ವಿವೇಕ್ ಅಗ್ನಿಹೋತ್ರಿ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಅಷ್ಟೇ ಅಲ್ಲ, ಸಣ್ಣ ಬಜೆಟ್ ಚಿತ್ರಗಳು ದೊಡ್ಡ ಮೊತ್ತದ ಕಲೆಕ್ಷನ್ ಮಾಡಲು ಸಾಧ್ಯವಿಲ್ಲ ಎಂಬ ಮೂಢನಂಬಿಕೆಯನ್ನು ಈ ಚಿತ್ರ ತೊಡೆದು ಹಾಕಿತ್ತು. ‘ದಿ ಕಾಶ್ಮೀರ್ ಫೈಲ್ಸ್​’ ಸೂಪರ್ ಹಿಟ್ ಆದ ಬಳಿಕ ವಿವೇಕ್ ಅಗ್ನಿಹೋತ್ರಿ ಅವರ ಮುಂದಿನ ಚಿತ್ರ ಯಾವುದು ಎನ್ನುವು ಕುತೂಹಲ ಮೂಡಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ‘ದಿ ವ್ಯಾಕ್ಸಿನ್ ವಾರ್’ ಹೆಸರಿನ ಚಿತ್ರವನ್ನು ವಿವೇಕ್ ನಿರ್ದೇಶನ ಮಾಡುತ್ತಿದ್ದಾರೆ.

ಮಾರ್ಚ್​ 11ರಂದು ‘ದಿ ಕಾಶ್ಮೀರ್ ಫೈಲ್ಸ್​’ ರಿಲೀಸ್ ಆಯಿತು. ಈ ಚಿತ್ರ ಸೂಪರ್ ಹಿಟ್ ಆಯಿತು. ಆರಂಭದ ವಾರಗಳಲ್ಲಿ ಸಾಧಾರಣ ಗಳಿಕೆ ಮಾಡಿದ್ದ ಈ ಚಿತ್ರ ಎರಡು, ಮೂರು ಹಾಗೂ ನಾಲ್ಕನೇ ವಾರದಲ್ಲಿ ಭರಪೂರ ಕಲೆಕ್ಷನ್ ಮಾಡಿತು. 90ರ ದಶಕದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ವಲಸೆ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರಕ್ಕೆ ರಾಜಕಾರಣಿಗಳಿಂದಲೂ ಮೆಚ್ಚುಗೆ ಸಿಕ್ಕಿತು.

ಈಗ ವಿವೇಕ್ ಅವರು  ‘ದಿ ವ್ಯಾಕ್ಸಿನ್ ವಾರ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್ ರಿವೀಲ್ ಮಾಡಲು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ವ್ಯಾಕ್ಸಿನ್ ಬಾಟಲಿ ಮೇಲೆ ಚಿತ್ರದ ಟೈಟಲ್ ಬರೆಯಲಾಗಿದೆ. ಕೊವಿಡ್ ಟೈಮ್​ನಲ್ಲಿ ವ್ಯಾಕ್ಸಿನ್​ಗಾಗಿ ಹಾಹಾಕಾರ ಎದ್ದಿತ್ತು. ಈ ವಿಚಾರ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಈ ಚಿತ್ರದ ರಿಲೀಸ್ ಡೇಟ್​ ಕೂಡ ಘೋಷಣೆ ಮಾಡಲಾಗಿದೆ. ಸ್ವಾತಂತ್ರ್ಯ ದಿನದ ಪ್ರಯುಕ್ತ ಈ ಚಿತ್ರ 2023ರ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ವಿಶೇಷ ಎಂದರೆ ಈ ಚಿತ್ರ 11 ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಕನ್ನಡ, ಹಿಂದಿ, ಇಂಗ್ಲಿಷ್, ತೆಲುಗು, ಮಲಯಾಳಂ, ಮರಾಠಿ ಮೊದಲಾದ ಭಾಷೆಗಳಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರ ನಿರ್ಮಾಣ ಮಾಡಿದ್ದ ಪಲ್ಲವಿ ಜೋಶಿ ಹಾಗೂ ಅಭಿಷೇಕ್ ಅಗರ್​ವಾಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಯಾರೆಲ್ಲ ನಟಿಸಲಿದ್ದಾರೆ ಅನ್ನೋದು ಇನ್ನಷ್ಟೇ ರಿವೀಲ್ ಆಗಬೇಕಿದೆ.

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ