AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Agnihotri: ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಬಜೆಟ್​ ಎಷ್ಟು? ಮುಚ್ಚುಮರೆ ಇಲ್ಲದೇ ಲೆಕ್ಕ ನೀಡಿದ ವಿವೇಕ್​ ಅಗ್ನಿಹೋತ್ರಿ

The Vaccine War Budget: ‘ದಿ ಕಾಶ್ಮೀರ್​ ಫೈಲ್ಸ್​’ ರೀತಿಯೇ ನೈಜ ಘಟನೆಯನ್ನು ಆಧರಿಸಿ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರ ಮೂಡಿಬರುತ್ತಿದೆ. ಈ ಚಿತ್ರದ ಬಜೆಟ್​ ಬಗ್ಗೆ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರು ಮಾಹಿತಿ ನೀಡಿದ್ದಾರೆ.

Vivek Agnihotri: ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಬಜೆಟ್​ ಎಷ್ಟು? ಮುಚ್ಚುಮರೆ ಇಲ್ಲದೇ ಲೆಕ್ಕ ನೀಡಿದ ವಿವೇಕ್​ ಅಗ್ನಿಹೋತ್ರಿ
ವಿವೇಕ್​ ಅಗ್ನಿಹೋತ್ರಿ
ಮದನ್​ ಕುಮಾರ್​
|

Updated on: Jul 14, 2023 | 4:51 PM

Share

ಸಿನಿಮಾ ರಂಗದಲ್ಲಿ ಕೆಲವು ಲೆಕ್ಕಾಚಾರಗಳನ್ನು ಗುಟ್ಟಾಗಿ ಇಡಲಾಗುತ್ತಿದೆ. ತಮ್ಮ ಸಿನಿಮಾದ ಬಜೆಟ್​ ಎಷ್ಟು ಎಂದು ಕೆಲವು ನಿರ್ಮಾಪಕರು ಬಿಟ್ಟುಕೊಡುವುದಿಲ್ಲ. ಆದರೆ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಆ ರೀತಿ ಅಲ್ಲ. ಅಭಿಮಾನಿಗಳು ಕೇಳುವ ಪ್ರಶ್ನೆಗಳಿಗೆ ಅವರು ಆಗಾಗ ಉತ್ತರ ನೀಡುತ್ತಾರೆ. ಪ್ರಸ್ತುತ ‘ದಿ ವ್ಯಾಕ್ಸಿನ್​ ವಾರ್​’ (The Vaccine War) ಸಿನಿಮಾದ ಕೆಲಸಗಳಲ್ಲಿ ವಿವೇಕ್​ ಅಗ್ನಿಹೋತ್ರಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಬಜೆಟ್​ ಎಷ್ಟು ಎಂಬುದನ್ನು ಕೂಡ ಅವರು ಬಹಿರಂಗ ಪಡಿಸಿದ್ದಾರೆ. ಅಚ್ಚರಿ ಎಂದರೆ, ‘ದಿ ಕಾಶ್ಮೀರ್​ ಫೈಲ್ಸ್​’ (The Kashmir Files) ಸಿನಿಮಾಗಿಂತಲೂ ಕಡಿಮೆ ಹಣದಲ್ಲಿ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಸಿದ್ಧವಾಗುತ್ತಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ 12 ಕೋಟಿ ರೂಪಾಯಿ ಬಜೆಟ್​ನಲ್ಲಿ ನಿರ್ಮಾಣ ಆಗಿತ್ತು. ಆ ಸಿನಿಮಾಗೆ ಬಾಕ್ಸ್​ ಆಫೀಸ್​ನಲ್ಲಿ 200 ಕೋಟಿ ರೂಪಾಯಿಗೂ ಅಧಿಕ ಕಮಾಯಿ ಆಯಿತು. ಆ ಚಿತ್ರದಿಂದ ವಿವೇಕ್​ ಅಗ್ನಿಹೋತ್ರಿ ಅವರ ಜನಪ್ರಿಯತೆ ಹೆಚ್ಚಿತು. ಹಾಗಿದ್ದರೂ ಕೂಡ ಅವರು ತಮ್ಮ ಮುಂದಿನ ಸಿನಿಮಾಗೆ ದುಂದು ವೆಚ್ಚ ಮಾಡುತ್ತಿಲ್ಲ. ಕೇವಲ 10 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾವನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: Jawan: ‘ತಾಕತ್ತಿದ್ದರೆ ಜವಾನ್​ ಎದುರು ನಿಮ್ಮ ಸಿನಿಮಾ ರಿಲೀಸ್​ ಮಾಡಿ’: ವಿವೇಕ್​ ಅಗ್ನಿಹೋತ್ರಿಗೆ ನೇರ ಸವಾಲು

ಸಾಮಾನ್ಯವಾಗಿ ಒಂದು ಸಿನಿಮಾ ಗೆದ್ದು, ಅದರ ಸೀಕ್ವೆಲ್​ ನಿರ್ಮಾಣ ಆಗುವಾಗ ಡಬಲ್​ ಬಜೆಟ್​ ಹಾಕಲಾಗುತ್ತದೆ. ಆದರೆ ವಿವೇಕ್​ ಅಗ್ನಿಹೋತ್ರಿ ಅವರು ಆ ರೀತಿಯ ನಿರ್ಧಾರ ತೆಗೆದುಕೊಂಡಿಲ್ಲ. ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಬಜೆಟ್​ನಲ್ಲಿ ನಿರ್ಮಾಣ ಮಾಡಬೇಕು ಎಂಬುದು ಅವರ ಗುರಿ. ಕಂಟೆಂಟ್​ ಚೆನ್ನಾಗಿ ಇದ್ದರೆ ಖಂಡಿತವಾಗಿಯೂ ಸಿನಿಮಾಗೆ ಜನರ ಬೆಂಬಲ ಸಿಗುತ್ತದೆ. ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮಾಡಿದರೆ ಬಾಕ್ಸ್​ ಆಫೀಸ್​ನ ಟೆನ್ಷನ್​ ಇರುವುದಿಲ್ಲ. ಅದೇ ಸೂತ್ರವನ್ನು ವಿವೇಕ್​ ಅಗ್ನಿಹೋತ್ರಿ ಅವರು ಫಾಲೋ ಮಾಡುತ್ತಿದ್ದಾರೆ.

ಇದನ್ನೂ ಓದಿ: Vivek Agnihotri: ‘ಹಿಂಸೆಯ ವೈಭವೀಕರಣವೂ ಟ್ಯಾಲೆಂಟ್​ ಆಗಿಬಿಟ್ಟಿದೆ’: ‘ಸಲಾರ್​’ ಟೀಸರ್​ ಬಿಡುಗಡೆ ಬೆನ್ನಲ್ಲೇ ವಿವೇಕ್​ ಅಗ್ನಿಹೋತ್ರಿ ಟ್ವೀಟ್​

‘ದಿ ಕಾಶ್ಮೀರ್​ ಫೈಲ್ಸ್​’ ರೀತಿಯೇ ನೈಜ ಘಟನೆಯನ್ನು ಆಧರಿಸಿ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರ ಮೂಡಿಬರುತ್ತಿದೆ. ಕೊರೊನಾ ಹರಡಿದ್ದ ಸಂದರ್ಭದಲ್ಲಿ ಭಾರತವು ಆ ಮಹಾಮಾರಿಯ ವಿರುದ್ಧ ಹೋರಾಡಿದ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಈ ಚಿತ್ರದಲ್ಲಿ ಕನ್ನಡದ ನಟಿ ಸಪ್ತಮಿ ಗೌಡ ಅವರು ನಟಿಸುತ್ತಿದ್ದಾರೆ ಎಂಬುದು ವಿಶೇಷ. ಈ ವರ್ಷ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಈ ಚಿತ್ರ ಬಿಡುಗಡೆ ಆಗಲಿದೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?