Vivek Agnihotri: ಮೆಟ್ರೋ ರೈಲಿನ ಪ್ರಯಾಣಿಕರ ಮೇಲೆ ಪೊಲೀಸ್​ ಕಣ್ಗಾವಲು; ‘ಇದು ಮೂರ್ಖತನ’ ಎಂದ ವಿವೇಕ್​ ಅಗ್ನಿಹೋತ್ರಿ

|

Updated on: May 15, 2023 | 7:01 PM

Delhi Metro: ಮೆಟ್ರೋದಲ್ಲಿ ಪೊಲೀಸರು ಗಸ್ತು ತಿರುಗುವ ಹೊಸ ನಿಯಮದ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನೆಟ್ಟಿಗರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

Vivek Agnihotri: ಮೆಟ್ರೋ ರೈಲಿನ ಪ್ರಯಾಣಿಕರ ಮೇಲೆ ಪೊಲೀಸ್​ ಕಣ್ಗಾವಲು; ‘ಇದು ಮೂರ್ಖತನ’ ಎಂದ ವಿವೇಕ್​ ಅಗ್ನಿಹೋತ್ರಿ
ಮೆಟ್ರೋ ರೈಲು, ವಿವೇಕ್ ಅಗ್ನಿಹೋತ್ರಿ
Follow us on

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಅನೇಕ ವಿಚಾರಗಳ ಬಗ್ಗೆ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ದೆಹಲಿ ಮೆಟ್ರೋದಲ್ಲಿ (Delhi Metro) ಪೊಲೀಸರು ಗಸ್ತು ತಿರುಗುವ ಹೊಸ ನಿಯಮದ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅವರು ತಮ್ಮ ಇತ್ತೀಚಿನ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೆಲವೇ ದಿನಗಳ ಹಿಂದೆ ದೆಹಲಿ ಮೆಟ್ರೋದಲ್ಲಿ (Metro Rail) ಪ್ರಯಾಣಿಕರಿಂದ ಆಕ್ಷೇಪಾರ್ಹ ವರ್ತನೆ ಕಂಡು ಬಂದ ಹಿನ್ನೆಲೆಯಲ್ಲಿ ಕೋಚ್‌ಗಳ ಒಳಗೆ ಪೊಲೀಸ ಗಸ್ತು ಇರುತ್ತದೆ ಎಂದು ವರದಿಯಾಗಿದೆ. ಈ ಬಗ್ಗೆ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ವಿವೇಕ್​ ಅಗ್ನಿಹೋತ್ರಿ ಅವರ ಟ್ವೀಟ್​ ವೈರಲ್​ ಆಗಿದೆ. ನೆಟ್ಟಿಗರು ಇದಕ್ಕೆ ತಮ್ಮ ಅನಿಸಿಕೆಗಳನ್ನು ಕಮೆಂಟ್​ ಮಾಡಿದ್ದಾರೆ.

ದೆಹಲಿ ಮೆಟ್ರೋ ನಿಗಮದ ಈ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ವಿವೇಕ್ ಅಗ್ನಿಹೋತ್ರಿ ತಮ್ಮ ಟ್ವಿಟರ್‌ನಲ್ಲಿ ‘ಇದು ತುಂಬಾ ಮೂರ್ಖತನ’ ಎಂದು ಪೋಸ್ಟ್​ ಮಾಡಿದ್ದಾರೆ. ಪ್ರಯಾಣಿಕರಿಂದ ಯಾವುದೇ ಆಕ್ಷೇಪಾರ್ಹ ನಡವಳಿಕೆ ಇರಬಾರದು ಎಂಬ ಉದ್ದೇಶದಿಂದ ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿ) ಇತ್ತೀಚೆಗೆ ತೆಗೆದುಕೊಂಡ ನಿರ್ಧಾರದ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ. ಅದನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ ಅವರು ಈ ರೀತಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
Vivek Agnihotri: ವಿವೇಕ್​ ಅಗ್ನಿಹೋತ್ರಿಗೆ ಅಶ್ಲೀಲ ಸಂದೇಶ: ಸ್ಕ್ರೀನ್​ ಶಾಟ್​ ಸಮೇತ ಬಯಲಿಗೆ ಎಳೆದ ನಿರ್ದೇಶಕ
Vivek Agnihotri: ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ
Vivek Agnihotri: ಶಾರುಖ್​​ ನಟನೆಯ ‘ಬೇಷರಂ ರಂಗ್​’ ಹಾಡು ನೋಡಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ವಿವೇಕ್​ ಅಗ್ನಿಹೋತ್ರಿ
Vivek Agnihotri: ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ

ಪ್ರಯಾಣಿಕ ಆಕ್ಷೇಪಾರ್ಹ ವರ್ತನೆಗೆ ಸಂಬಂಧಿಸಿದಂತೆ ದೆಹಲಿ ಮೆಟ್ರೋದ ಅನೇಕ ವಿಡಿಯೋಗಳು ಆನ್‌ಲೈನ್‌ನಲ್ಲಿ ವೈರಲ್ ಆದ ನಂತರದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮೆಟ್ರೋ ಕೋಚ್‌ನೊಳಗೆ ವ್ಯಕ್ತಿಯೊಬ್ಬರು ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು ತೀರಾ ಮುಜುಗರಕ್ಕೆ ಕಾರಣ ಆಗಿತ್ತು. ಆ ವಿಡಿಯೋ ವೈರಲ್ ಆದ ನಂತರದಲ್ಲಿ ಹಲವರು ಸಾರ್ವಜನಿಕ ಸಾರಿಗೆಯ ಶಿಷ್ಟಾಚಾರವನ್ನು ಬಗ್ಗೆ ಪ್ರಶ್ನೆ ಎತ್ತಿದ್ದರು.

ಇದನ್ನೂ ಓದಿ: Kamaal R Khan: ‘ವಿವೇಕ್​ ಅಗ್ನಿಹೋತ್ರಿ ಹತಾಶೆಗೆ ಒಳಗಾದ ವ್ಯಕ್ತಿ’: ಮತ್ತೆ ಎಲ್ಲರನ್ನೂ ಕೆಣಕಲು ಆರಂಭಿಸಿದ ಕೆಆರ್​ಕೆ

ಶೀಘ್ರದಲ್ಲೇ ಮೆಟ್ರೋ ಕೋಚ್‌ಗಳಲ್ಲಿ ಸಮವಸ್ತ್ರ ಮತ್ತು ನಾಗರಿಕ ಉಡುಪುಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಕ್ಷೇಪಾರ್ಹ ನಡವಳಿಕೆಯನ್ನು ಗುರುತಿಸಲು ಮೆಟ್ರೋ ಕೋಚ್‌ಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.