ಪಿಎಂ ಮೋದಿ ಸೂಚನೆಯನ್ನು ಟೀಕಿಸಿದ ಅನುರಾಗ್ ಕಶ್ಯಪ್​ಗೆ ತಿರುಗೇಟು ಕೊಟ್ಟ ವಿವೇಕ್ ಅಗ್ನಿಹೋತ್ರಿ

ಅನುರಾಗ್ ಕಶ್ಯಪ್ ಅವರು ಬಿಜೆಪಿ ಸರ್ಕಾರದ ನಿರ್ಧಾರಗಳನ್ನು ಹಲವು ಬಾರಿ ಟೀಕಿಸಿದ ಉದಾಹರಣೆ ಇದೆ. ಈ ವಿಚಾರದಲ್ಲಿ ಅವರು ಅನೇಕ ಬಾರಿ ಸುದ್ದಿ ಆಗಿದ್ದಾರೆ. ಆದರೆ, ವಿವೇಕ್ ಅಗ್ನಿಹೋತ್ರಿ ಅವರು ಹಾಗಲ್ಲ.

ಪಿಎಂ ಮೋದಿ ಸೂಚನೆಯನ್ನು ಟೀಕಿಸಿದ ಅನುರಾಗ್ ಕಶ್ಯಪ್​ಗೆ ತಿರುಗೇಟು ಕೊಟ್ಟ ವಿವೇಕ್ ಅಗ್ನಿಹೋತ್ರಿ
ವಿವೇಕ್ ಅಗ್ನಿಹೋತ್ರಿ-ಅನುರಾಗ್ ಕಶ್ಯಪ್
Follow us
|

Updated on:Jan 21, 2023 | 9:29 AM

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಿನಿಮಾ ವಿಷಯವಾಗಿ ಟೀಕೆ ಮಾಡದಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದರು. ಈ ವಿಚಾರವನ್ನು ಅನುರಾಗ್ ಕಶ್ಯಪ್ (Anurag Kashyap) ಅವರು ಟೀಕೆ ಮಾಡಿದ್ದರು. ಈ ಟೀಕೆಯನ್ನು ವಿವೇಕ್ ಅಗ್ನಿಹೋತ್ರಿ ಖಂಡಿಸಿದ್ದಾರೆ. ವ್ಯಂಗ್ಯವಾಗಿ ಕೆಲವೇ ಶಬ್ದಗಳಲ್ಲಿ ಅವರು ತಿರುಗೇಟು ನೀಡಿದ್ದಾರೆ.

ಅನುರಾಗ್ ಕಶ್ಯಪ್ ಅವರು ಬಿಜೆಪಿ ಸರ್ಕಾರದ ನಿರ್ಧಾರಗಳನ್ನು ಹಲವು ಬಾರಿ ಟೀಕಿಸಿದ ಉದಾಹರಣೆ ಇದೆ. ಈ ವಿಚಾರದಲ್ಲಿ ಅವರು ಅನೇಕ ಬಾರಿ ಸುದ್ದಿ ಆಗಿದ್ದಾರೆ. ಆದರೆ, ವಿವೇಕ್ ಅಗ್ನಿಹೋತ್ರಿ ಅವರು ಹಾಗಲ್ಲ. ಬಿಜೆಪಿ ಸರ್ಕಾರವನ್ನು ಸದಾ ಬೆಂಬಲಿಸುತ್ತ ಬಂದವರು. ಬಲಪಂಥೀಯ ಚಿಂತನೆಗಳನ್ನು ಹೊಂದಿರುವವರು. ಈ ಕಾರಣಕ್ಕೆ ಇಬ್ಬರ ಮಧ್ಯೆ ಜಟಾಪಟಿ ಏರ್ಪಟ್ಟಿದೆ.

ಅನುರಾಗ್ ಕಶ್ಯಪ್ ಹೇಳಿದ್ದೇನು?

‘ನಾಲ್ಕು ವರ್ಷಗಳ ಹಿಂದೆ ಅವರು ಇದನ್ನು ಹೇಳಿದ್ದರೆ ಅದರಿಂದ ವ್ಯತ್ಯಾಸ ಉಂಟಾಗುತ್ತಿತ್ತು. ಈಗ, ಅವರ ಹೇಳಿಕೆಯಿಂದ ಬದಲಾವಣೆ ಆಗುತ್ತದೆ ಎಂದು ನನಗೆ ಅನ್ನಿಸುವುದಿಲ್ಲ. ಗುಂಪು (mob) ನಿಯಂತ್ರಣ ಕಳೆದುಕೊಂಡಿದೆ. ಯಾರೂ ಯಾರ ಮಾತನ್ನೂ ಕೇಳುವುದಿಲ್ಲ’ ಎಂದು ಅನುರಾಗ್​ ಕಶ್ಯಪ್​ ಅವರು ಹೇಳಿದ್ದರು. ಗುಂಪು ಎಂಬ ಪದ ಬಳಕೆಯನ್ನು ಅವರು ಹಿಂಸಾಚಾರ ಸೃಷ್ಟಿ ಮಾಡುವ ಗುಂಪು ಎಂಬರ್ಥದಲ್ಲಿ ಬಳಕೆ ಮಾಡಿದ್ದರು.

ಇದನ್ನೂ ಓದಿ
Image
ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
Image
‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?
Image
ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

ಇದನ್ನೂ ಓದಿ: ‘4 ವರ್ಷಗಳ ಹಿಂದೆ ಹೇಳಿದ್ದರೆ ಬದಲಾವಣೆ ಆಗುತ್ತಿತ್ತು’; ಪಿಎಂ ಮೋದಿ ಸೂಚನೆಗೆ ಅನುರಾಗ್ ಕಶ್ಯಪ್ ಪ್ರತಿಕ್ರಿಯೆ

ವಿವೇಕ್ ಅಗ್ನಿಹೋತ್ರಿ ತಿರುಗೇಟು

ಇದನ್ನು ರೀಟ್ವೀಟ್ ಮಾಡಿರುವ ವಿವೇಕ್​ ಅಗ್ನಿಹೋತ್ರಿ ಅವರು, ‘ಆಡಿಯನ್ಸ್ ಈಗ ಮಾಬ್ ಆದರೇ? ವೋವ್ ವೋವ್ ವೋವ್​’ ಎಂದಷ್ಟೇ ಹೇಳಿದ್ದಾರೆ. ವಿವೇಕ್ ಅಗ್ನಿಹೋತ್ರಿ ಹೇಳಿಕೆಯನ್ನು ಅನೇಕರು ಟೀಕೆ ಮಾಡಿದ್ದಾರೆ. ಕೆಲವರು ಬೆಂಬಲಿಸಿದ್ದಾರೆ.

ಸಿನಿಮಾ ಬಗ್ಗೆ ಟೀಕೆ

ವಿವೇಕ್ ಅಗ್ನಿಹೋತ್ರಿ ಅವರು ‘ದಿ ವ್ಯಾಕ್ಸಿನ್ ವಾರ್​’ ಸಿನಿಮಾ ಮಾಡುತ್ತಿದ್ದಾರೆ. ಕೊವಿಡ್ ಸಂದರ್ಭದಲ್ಲಿ ಭಾರತ ವೈರಸ್ ವಿರುದ್ಧ ಹೋರಾಡಿದ್ದನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ವಿವೇಕ್ ಅವರನ್ನು ಟೀಕಿಸಲಾಗಿದೆ. ಇದು ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮಾಡುತ್ತಿರುವ ಸಿನಿಮಾ ಎಂದು ಅನೇಕರು ಕಿಡಿಕಾರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Sat, 21 January 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ