‘ಆಸ್ಕರ್​’ ಮೂಲಕ ‘ದಿ ವ್ಯಾಕ್ಸಿನ್ ವಾರ್​’ ಚಿತ್ರಕ್ಕೆ ವಿಶೇಷ ಗೌರವ; ವಿವೇಕ್​ ಅಗ್ನಿಹೋತ್ರಿ ಗುಡ್​ ನ್ಯೂಸ್​

‘ದಿ ಅಕಾಡೆಮಿ ಆಫ್​ ಮೋಷನ್​ ಪಿಕ್ಚರ್​ ಆರ್ಟ್ಸ್​ ಆ್ಯಂಡ್​ ಸೈನ್ಸ್​’ ಸಂಸ್ಥೆಯು ಗಮನಾರ್ಹ ಸಿನಿಮಾಗಳ ಸ್ಕ್ರಿಪ್ಟ್​ಗಳನ್ನು ಸಂಗ್ರಹಿಸಿ, ಲೈಬ್ರರಿಯಲ್ಲಿ ಇಡುತ್ತದೆ. ಅಂಥ ಚಿತ್ರಗಳ ಸಾಲಿಗೆ ‘ದಿ ವ್ಯಾಕ್ಸಿನ್​ ವಾರ್​’ ಕೂಡ ಸೇರಿರುವುದು ವಿಶೇಷ. ಈ ಸುದ್ದಿಯನ್ನು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡು ವಿವೇಕ್​ ಅಗ್ನಿಹೋತ್ರಿ ಸಂಭ್ರಮಿಸಿದ್ದಾರೆ.

‘ಆಸ್ಕರ್​’ ಮೂಲಕ ‘ದಿ ವ್ಯಾಕ್ಸಿನ್ ವಾರ್​’ ಚಿತ್ರಕ್ಕೆ ವಿಶೇಷ ಗೌರವ; ವಿವೇಕ್​ ಅಗ್ನಿಹೋತ್ರಿ ಗುಡ್​ ನ್ಯೂಸ್​
ದಿ ವ್ಯಾಕ್ಸಿನ್​ ವಾರ್​
Follow us
|

Updated on: Oct 12, 2023 | 3:12 PM

ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಬಹಳ ನಿರೀಕ್ಷೆ ಇಟ್ಟುಕೊಂಡು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ (The Vaccine War) ಮಾಡಿದರು. ಸೆಪ್ಟೆಂಬರ್​ 28ರಂದು ಈ ಸಿನಿಮಾ ಬಿಡುಗಡೆ ಆಯಿತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಈ ಚಿತ್ರಕ್ಕೆ ಕಲೆಕ್ಷನ್​ ಆಗಲಿಲ್ಲ. ಹಾಗಂತ ವಿವೇಕ್​ ಅಗ್ನಿಹೋತ್ರಿ ಅವರು ತೀರಾ ಬೇಸರ ಮಾಡಿಕೊಳ್ಳುವ ಅಗತ್ಯ ಇಲ್ಲ. ಯಾಕೆಂದರೆ, ಈಗ ಈ ಸಿನಿಮಾಗೆ ‘ಆಸ್ಕರ್​’ (Oscar) ಕಡೆಯಿಂದ ವಿಶೇಷ ಮನ್ನಣೆ ಸಿಕ್ಕಿದೆ. ಆ ಸುದ್ದಿಯನ್ನು ಸ್ವತಃ ವಿವೇಕ್​ ಅಗ್ನಿಹೋತ್ರಿ ಅವರು ಹಂಚಿಕೊಂಡಿದ್ದಾರೆ. ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾದ ಸ್ಕ್ರಿಪ್ಟ್​ ಕಳಿಸಿಕೊಡುವಂತೆ ಅಕಾಡೆಮಿ ಕಡೆಯಿಂದ ಸಂದೇಶ ಬಂದಿದೆ. ಇದು ಚಿತ್ರತಂಡದ ಸಂಸತಕ್ಕೆ ಕಾರಣ ಆಗಿದೆ.

ಆಸ್ಕರ್​ ಪ್ರಶಸ್ತಿ ನೀಡುವ ‘ದಿ ಅಕಾಡೆಮಿ ಆಫ್​ ಮೋಷನ್​ ಪಿಕ್ಚರ್​ ಆರ್ಟ್ಸ್​ ಆ್ಯಂಡ್​ ಸೈನ್ಸ್​’ ಸಂಸ್ಥೆಯು ಕೆಲವು ಗಮನಾರ್ಹ ಸಿನಿಮಾಗಳ ಸ್ಕ್ರಿಪ್ಟ್​ಗಳನ್ನು ಸಂಗ್ರಹಿಸುತ್ತದೆ. ಆ ರೀತಿ ಸಂಗ್ರಹಿಸಿದ ಚಿತ್ರಕಥೆಯನ್ನು ಲೈಬ್ರರಿಯಲ್ಲಿ ಇಡಲಾಗುತ್ತದೆ. ಅಂಥ ಸಿನಿಮಾಗಳ ಸಾಲಿಗೆ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರ ಕೂಡ ಸೇರಿರುವುದು ವಿಶೇಷ. ತಮ್ಮ ಸಿನಿಮಾಗೆ ಈ ರೀತಿಯ ಮನ್ನಣೆ ಸಿಕ್ಕಿದ್ದನ್ನು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡು ವಿವೇಕ್​ ಅಗ್ನಿಹೋತ್ರಿ ಸಂಭ್ರಮಿಸಿದ್ದಾರೆ.

ಕೊವಿಡ್​-19 ಹಾವಳಿ ಮಿತಿ ಮೀರಿದ ಸಂದರ್ಭದಲ್ಲಿ ಭಾರತವು ಸ್ವತಂತ್ರವಾಗಿ ವ್ಯಾಕ್ಸಿನ್​ ಕಂಡು ಹಿಡಿದ ಕಥೆಯನ್ನು ಇಟ್ಟುಕೊಂಡು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ತಯಾರಾಗಿದೆ. ಈ ಸಿನಿಮಾ ಮೂಲಕ ವಿಜ್ಞಾನಿಗಳಿಗೆ ಗೌರವ ಸಲ್ಲಿಸಲಾಗಿದೆ. ವಿವೇಕ್​ ಅಗ್ನಿಹೋತ್ರಿ ಅವರ ಪತ್ನಿ ಪಲ್ಲವಿ ಜೋಶಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಪಾತ್ರವರ್ಗದಲ್ಲಿ ನಾನಾ ಪಾಟೇಕರ್​, ಸಪ್ತಮಿ ಗೌಡ, ಪಲ್ಲವಿ ಜೋಶಿ, ಗಿರಿಜಾ ಓಕ್​, ರೈಮಾ ಸೇನ್​ ಸೇರಿದಂತೆ ಹಲವರು ನಟಿಸಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ​ ಈ ಸಿನಿಮಾ ಹಿಟ್​ ಆಗದಿದ್ದರೂ ಕೂಡ ಆಸ್ಕರ್​ ಸಂಸ್ಥೆಯಿಂದ ಗೌರವ ಸಿಕ್ಕಿರುವುದಕ್ಕೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

‘ದಿ ವ್ಯಾಕ್ಸಿನ್​ ವಾರ್​’ ಕಳಪೆ ಕಲೆಕ್ಷನ್​; ಚಿತ್ರಮಂದಿರದ ಎದುರು ಜನರ ಪ್ರತಿಭಟನೆ: ವಿಡಿಯೋ ವೈರಲ್​

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರ ಹವಾ ಹೆಚ್ಚಿತು. ದೇಶಾದ್ಯಂತ ಅವರು ಜನಪ್ರಿಯತೆ ಪಡೆದರು. ಆ ಸಿನಿಮಾದ ಅಭೂತಪೂರ್ವ ಗೆಲುವಿನ ಬಳಿಕ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಕೈಗೆತ್ತಿಕೊಂಡಿದ್ದರಿಂದ ಭಾರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಆದರೆ ಎಲ್ಲರ ನಿರೀಕ್ಷೆ ತಲೆ ಕೆಳಗಾಯಿತು. 2022ರಲ್ಲಿ ಬಿಡುಗಡೆ ಆಗಿದ್ದ ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರ ಬರೋಬ್ಬರಿ 252 ಕೋಟಿ ರೂಪಾಯಿ ಗಳಿಸಿದ್ದರೆ, 2023ರಲ್ಲಿ ತೆರೆಕಂಡ ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾ ಕೇವಲ 5.50 ಕೋಟಿ ರೂಪಾಯಿಗೆ ಆಟ ಮುಗಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ