AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳಲಿದೆ ‘ವಾರ್ 2’; ಈ ವರ್ಷವೇ ಬರಲಿದೆ ಸಿನಿಮಾ?

ಸಿದ್ದಾರ್ಥ್ ಆನಂದ್ ನಿರ್ದೇಶನದ ‘ವಾರ್’ ಸಿನಿಮಾ ಸೂಪರ್ ಹಿಟ್ ಆಯಿತು. ‘ವಾರ್ 2’ ಚಿತ್ರದಲ್ಲಿ ಹೃತಿಕ್​ ಜೊತೆ ಜೂನಿಯರ್ ಎನ್​ಟಿಆರ್ ಸೇರಿಕೊಳ್ಳುತ್ತಿದ್ದಾರೆ. ಇದರಿಂದ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡುವಂತೆ ಆಗಿದೆ. ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದ್ದರೂ ಇದಕ್ಕೆ ಕಡಿಮೆ ದಿನಗಳ ಶೂಟಿಂಗ್ ನಿಗದಿ ಮಾಡಲಾಗಿದೆ.

ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳಲಿದೆ ‘ವಾರ್ 2’; ಈ ವರ್ಷವೇ ಬರಲಿದೆ ಸಿನಿಮಾ?
ಜೂನಿಯರ್ ಎನ್​ಟಿಆರ್-ಹೃತಿಕ್
ರಾಜೇಶ್ ದುಗ್ಗುಮನೆ
|

Updated on: Mar 13, 2024 | 2:58 PM

Share

ಬಿಗ್ ಬಜೆಟ್ ಸಿನಿಮಾ ಎಂದಾಗ ಕನಿಷ್ಠ ಒಂದು ವರ್ಷ ಶೂಟಿಂಗ್ ನಡೆಯುತ್ತದೆ. ನಾನಾ ಲೊಕೇಷನ್​ಗಳಿಗೆ ತೆರಳಿ ಚಿತ್ರೀಕರಣ ಮಾಡಲಾಗುತ್ತದೆ. ಆದರೆ, ‘ವಾರ್ 2’ ಸಿನಿಮಾ (War 2 Movie) ಈ ವಿಚಾರದಲ್ಲಿ ಭಿನ್ನವಾಗಿದೆ. ಅಯಾನ್ ಮುಖರ್ಜಿ ನಿರ್ದೇಶನದ ಈ ಸಿನಿಮಾದ ಶೂಟಿಂಗ್​ಗೆ ಕೇವಲ 60 ದಿನ ನಿಗದಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ 2024ರಲ್ಲೇ ಸಿನಿಮಾ ರಿಲೀಸ್ ಆದರೂ ಅಚ್ಚರಿ ಏನಿಲ್ಲ ಎನ್ನುತ್ತಿವೆ ಮೂಲಗಳು. ಈ ವಿಚಾರ ಕೇಳಿ ಜೂನಿಯರ್ ಎನ್​ಟಿಆರ್ ಹಾಗೂ ಹೃತಿಕ್ ಫ್ಯಾನ್ಸ್ ಖುಷಿಯಾಗಿದ್ದಾರೆ.

ಸಿದ್ದಾರ್ಥ್ ಆನಂದ್ ನಿರ್ದೇಶನದ ‘ವಾರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಯಾಗಿದೆ. ‘ವಾರ್ 2’ ಚಿತ್ರದಲ್ಲಿ ಹೃತಿಕ್​ ಜೊತೆ ಜೂನಿಯರ್ ಎನ್​ಟಿಆರ್ ಸೇರಿಕೊಳ್ಳುತ್ತಿದ್ದಾರೆ. ಇದರಿಂದ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡುವಂತೆ ಆಗಿದೆ. ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದ್ದರೂ ಇದಕ್ಕೆ ಕಡಿಮೆ ದಿನಗಳ ಶೂಟಿಂಗ್ ನಿಗದಿ ಮಾಡಲಾಗಿದೆ.

ಜೂನಿಯರ್​ ಎನ್​ಟಿಆರ್ ಹಾಗೂ ಹೃತಿಕ್ ರೋಷನ್ ಅವರಿಂದ 60 ದಿನಗಳ ಕಾಲ್​ಶೀಟ್​ನ ಅಯಾನ್ ಮುಖರ್ಜಿ ಪಡೆದಿದ್ದಾರೆ. 30 ದಿನಗಳ ಕಾಲ ಇವರ ಕಾಂಬಿನೇಷನ್ ದೃಶ್ಯಗಳ ಶೂಟಿಂಗ್ ಇರಲಿದೆ. ಇನ್ನು 30 ದಿನ ಪ್ರತ್ಯೇಕವಾಗಿ ಇವರ ಭಾಗದ ದೃಶ್ಯದ ಶೂಟ್ ನಡೆಯಲಿದೆ ಎಂದು ತಿಳಿದು ಬಂದಿದೆ. ಹೃತಿಕ್ ರೋಷನ್ ಭಾಗದ ಶೂಟಿಂಗ್ ಜೂನ್​ನಲ್ಲಿ ಪೂರ್ಣಗೊಂಡರೆ, ಜೂನಿಯರ್​ ಎನ್​ಟಿಆರ್ ಭಾಗದ ಚಿತ್ರೀಕರಣ ಜುಲೈನಲ್ಲಿ ಪೂರ್ಣಗೊಳ್ಳಲಿದೆ. ಬಹುತೇಕ ಚಿತ್ರೀಕರಣ ಸ್ಟುಡಿಯೋದಲ್ಲೇ ನಡೆಯಲಿದೆ.

ಇದನ್ನೂ ಓದಿ: ‘ವಾರ್ 2’ ಚಿತ್ರದಲ್ಲಿ ಇರಲ್ಲ ಯಾವುದೇ ವಿಶೇಷ ಅತಿಥಿ ಪಾತ್ರ; ಸೋಲಿನಿಂದ ಬುದ್ಧಿ ಕಲಿತ ನಿರ್ಮಾಪಕರು

ಅಯಾನ್ ಮುಖರ್ಜಿ ಅವರು ಸಂಪೂರ್ಣವಾಗಿ ಪ್ಲ್ಯಾನಿಂಗ್ ಮಾಡಿ ಶೂಟಿಂಗ್​ಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅವರು ಸ್ಕ್ರಿಪ್ಟ್ ಕೆಲಸಕ್ಕಾಗಿ ಸಾಕಷ್ಟು ಸಮಯ ಹೂಡಿಕೆ ಮಾಡಿದ್ದಾರೆ. ಈ ಕಾರಣದಿಂದ ಶೂಟಿಂಗ್ ಮತ್ತಷ್ಟು ಸುಲಭವಾಗಲಿದೆ ಎಂದು ಊಹಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್