ಅವರಂತೆ ಸಿನಿಮಾ ಮಾಡೋಕೆ ನಮ್ಮ ಬಳಿ ಸಾಧ್ಯವಾಗುತ್ತಿಲ್ಲ ಎಂದು ಒಪ್ಪಿಕೊಂಡ ಸಲ್ಮಾನ್ ಖಾನ್
ಚಿರಂಜೀವಿ ನಟನೆಯ ‘ಗಾಡ್ ಫಾದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಸಲ್ಲು ಸುದ್ದಿಗೋಷ್ಠಿ ಒಂದರಲ್ಲಿ ಮಾತನಾಡಿದ್ದಾರೆ.
ಹಲವು ವರ್ಷಗಳ ಹಿಂದೆ ಬಾಲಿವುಡ್ ಸಿನಿಮಾಗಳು (Bollywood Movies) ದೊಡ್ಡ ಮಟ್ಟದಲ್ಲಿ ಬಿಸ್ನೆಸ್ ಮಾಡುತ್ತಿದ್ದವು. ಆದರೆ, ಈಗ ಕಾಲ ಬದಲಾಗಿದೆ. ದಕ್ಷಿಣ ಭಾರತದ ಸಿನಿಮಾಗಳು ವಿಶ್ವಮಟ್ಟದಲ್ಲಿ ಮೆರೆಯುತ್ತಿವೆ. ‘ಕೆಜಿಎಫ್’, (KGF Movies) ‘ಬಾಹುಬಲಿ’, ‘ಆರ್ಆರ್ಆರ್’ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹೆಸರು ಮಾಡುತ್ತಿವೆ. ಬಾಲಿವುಡ್ಅನ್ನು ಮೀರಿಸುವಂತಹ ಸಿನಿಮಾ ದಕ್ಷಿಣ ಭಾರತದಲ್ಲಿ ತಯಾರಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಬಾಲಿವುಡ್ ಚಾರ್ಮ್ ಕಳೆದುಕೊಂಡಿದೆ. ಅಲ್ಲೊಂದು, ಇಲ್ಲೊಂದು ಸಿನಿಮಾಗಳು ಮಾತ್ರ ಹಿಟ್ ಆಗುತ್ತಿವೆ. ಈ ವಿಚಾರವನ್ನು ಸಲ್ಮಾನ್ ಖಾನ್ (Salman Khan) ಒಪ್ಪಿಕೊಂಡಿದ್ದಾರೆ.
ಚಿರಂಜೀವಿ ನಟನೆಯ ‘ಗಾಡ್ ಫಾದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಸಲ್ಲು ಸುದ್ದಿಗೋಷ್ಠಿ ಒಂದರಲ್ಲಿ ಮಾತನಾಡಿದ್ದಾರೆ. ‘ಚಿರು ಅವರ ಮಗ ರಾಮ್ ಚರಣ್ ನನ್ನ ಒಳ್ಳೆಯ ಗೆಳೆಯ. ಅವರು ‘ಆರ್ಆರ್ಆರ್’ ಚಿತ್ರದಲ್ಲಿ ಅದ್ಭುತ ಕೆಲಸ ಮಾಡಿದ್ದಾರೆ. ಅವರ ಚಿತ್ರದ ಯಶಸ್ಸಿಗೆ ನಾನು ಶುಭ ಹಾರೈಸಿದ್ದೇನೆ. ಅವರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನಮ್ಮ ಸಿನಿಮಾಗಳು ದಕ್ಷಿಣ ಭಾರತದಲ್ಲಿ ಉತ್ತಮವಾಗಿ ಪರ್ಫಾರ್ಮ್ ಮಾಡುತ್ತಿಲ್ಲ. ಆದರೆ, ದಕ್ಷಿಣ ಭಾರತದ ಸಿನಿಮಾಗಳು ಹಿಂದಿ ಚಿತ್ರರಂಗದಲ್ಲಿ ಸಖತ್ ಸದ್ದು ಮಾಡುತ್ತಿವೆ. ಈ ಬಗ್ಗೆ ನನಗೆ ಆಶ್ವರ್ಯ ಇದೆ’ ಎಂದರು ಸಲ್ಮಾನ್ ಖಾನ್.
‘ದಕ್ಷಿಣ ಭಾರತದ ಫಿಲ್ಮ್ ಇಂಡಸ್ಟ್ರಿ ಹೀರೋಯಿಸಂಅನ್ನು ನಂಬುತ್ತದೆ. ಈ ರೀತಿಯ ಬೆರಳೆಣಿಕ ಸಿನಿಮಾಗಳು ಬಾಲಿವುಡ್ನಲ್ಲಿ ಸಿದ್ಧಗೊಳ್ಳುತ್ತಿವೆ. ಹೀರೋಯಿಸಂ ಚಿತ್ರಗಳನ್ನು ನಾವು ಹೆಚ್ಚೆಚ್ಚು ಮಾಡಬೇಕಿದೆ. ದಕ್ಷಿಣ ಭಾರತದಲ್ಲಿ ಸ್ಟಾರ್ಗಳಿಗೆ ಅಭಿಮಾನಿ ಬಳಗ ದೊಡ್ಡದಿದೆ. ನಾನು ಚಿರಂಜೀವಿ ಜತೆ ಕೆಲಸ ಮಾಡುತ್ತಿದ್ದೇನೆ. ಅವರು ವಿಭಿನ್ನ ಶೈಲಿಯ ಚಿತ್ರಗಳನ್ನು ಮಾಡುತ್ತಾರೆ. ಜನರು ಇಷ್ಟಪಡುವ ಸಿನಿಮಾಗಳನ್ನು ಬಾಲಿವುಡ್ ಮಂದಿ ಮಾಡಬೇಕು’ ಎಂದು ಕಿವಿಮಾತು ಹೇಳಿದರು ಅವರು.
ಮಲಯಾಳಂನಲ್ಲಿ ಮೋಹನ್ ಲಾಲ್ ನಟನೆಯ ಸೂಪರ್ ಹಿಟ್ ಚಿತ್ರ ‘ಲೂಸಿಫರ್’ ಟಾಲಿವುಡ್ಗೆ ‘ಗಾಡ್ ಫಾದರ್’ ಹೆಸರಿನಲ್ಲಿ ರಿಮೇಕ್ ಆಗುತ್ತಿದೆ. ಚಿರಂಜೀವಿ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಂಭಾವನೆ ಸ್ವೀಕರಿಸುತ್ತಿಲ್ಲ ಎಂದು ವರದಿ ಆಗಿತ್ತು.
ಸಲ್ಮಾನ್ ಖಾನ್ ಪಾತ್ರ 20 ನಿಮಿಷಗಳ ಕಾಲ ತೆರೆಮೇಲೆ ಬರಲಿದೆ. ಈ ಚಿತ್ರದಲ್ಲಿ ನಟಿಸೋಕೆ ಸಲ್ಲುಗೆ 15-20 ಕೋಟಿ ರೂಪಾಯಿ ಸಂಭಾವನೆ ನೀಡಲು ನಿರ್ಮಾಪಕರು ನಿರ್ಧರಿಸಿದ್ದರು. ಸಂಭಾವನೆ ವಿಚಾರ ಕೇಳಿದಾಗ, ‘ಶೂಟಿಂಗ್ ಬಳಿಕ ಈ ಬಗ್ಗೆ ಮಾತನಾಡೋಣ’ ಎಂದಿದ್ದರು ಸಲ್ಮಾನ್ ಖಾನ್. ಚಿತ್ರೀಕರಣ ಪೂರ್ಣಗೊಂಡ ನಂತರ ಕೇಳಿದರೆ, ‘ತಾವು ಚಿರಂಜೀವಿಗೋಸ್ಕರ ಸಂಭಾವನೆ ಪಡೆಯುವುದಿಲ್ಲ’ ಎನ್ನುವ ಮಾತನ್ನು ಹೇಳಿದ್ದಾರೆ ಎನ್ನಲಾಗಿತ್ತು.
ಇದನ್ನೂ ಓದಿ: ಸಲ್ಮಾನ್ ಖಾನ್ ಚಿತ್ರವೂ ಮಾಡಿರದ ಸಾಧನೆ ಮಾಡಿದ ‘ದಿ ಕಾಶ್ಮೀರ್ ಫೈಲ್ಸ್’; ಬಾಕ್ಸ್ ಆಫೀಸ್ನಲ್ಲಿ ಸುನಾಮಿ
ಸಲ್ಮಾನ್ ಖಾನ್ ಫಾರ್ಮ್ಹೌಸ್ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?