AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ

‘ದಿ ಕೇರಳ ಸ್ಟೋರಿ ಸಿನಿಮಾ ದ್ವೇಷ ಪೂರಿತ ಸಂಭಾಷಣೆಗಳನ್ನು ಒಳಗೊಂಡಿದೆ. ಇದೊಂದು ಪ್ರೊಪೊಗಾಂಡ ಸಿನಿಮಾ’ ಎಂದು ವಕೀಲ ನಿಜಾಮ್ ಪಾಷಾ ವಾದಿಸಿದ್ದಾರೆ.  

‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ
ಅದಾ ಶರ್ಮಾ
ರಾಜೇಶ್ ದುಗ್ಗುಮನೆ
|

Updated on: May 02, 2023 | 12:47 PM

Share

‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಮೇ 5ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದ ಟ್ರೇಲರ್ ಈಗಾಗಲೇ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಸಿನಿಮಾಗೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಅರ್ಜಿ ವಿಚಾರಣೆ ಮಾಡಲು ಕೋರ್ಟ್ ನಿರಾಕರಿಸಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾ ವಿರೋಧ ಮಾಡುವವರಿಗೆ ಇದರಿಂದ ಹಿನ್ನಡೆ ಉಂಟಾಗಿದೆ. ಸುದಿಪ್ತೋ ಸೇನ್ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಅದಾ ಶರ್ಮಾ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ನ್ಯಾಯಮೂರ್ತಿಗಳಾದ ಕೆಎಂ ಜೊಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆಯನ್ನು ನಿರಾಕರಿಸಿದೆ. ವಕೀಲರಾದ ಕಪಿಲ್ ಸಿಬಾಲ್ ಹಾಗೂ ನಿಜಾಮ್ ಪಾಶಾಗೆ ಈ ಕುರಿತು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಲು ಪೀಠ ಸೂಚನೆ ನೀಡಿದೆ. ‘ದಿ ಕೇರಳ ಸ್ಟೋರಿ ಸಿನಿಮಾ ದ್ವೇಷ ಪೂರಿತ ಸಂಭಾಷಣೆಗಳನ್ನು ಒಳಗೊಂಡಿದೆ. ಇದೊಂದು ಪ್ರೊಪೊಗಾಂಡ ಸಿನಿಮಾ’ ಎಂದು ವಕೀಲ ನಿಜಾಮ್ ಪಾಷಾ ವಾದಿಸಿದ್ದಾರೆ.

‘ದ್ವೇಷದ ಭಾಷಣಗಳಲ್ಲಿ ವೈವಿಧ್ಯತೆ ಇದೆ. ಈ ಚಿತ್ರವನ್ನು ಸೆನ್ಸಾರ್ ಮಂಡಳಿಯವರು ನೋಡಿದ್ದಾರೆ ಮತ್ತು ಅಲ್ಲಿಂದ ಪ್ರಮಾಣಪತ್ರ ಸಿಕ್ಕಿದೆ. ನೀವು ಸಿನಿಮಾನ ರಿಲೀಸ್​ನ ಚಾಲೆಂಜ್ ಮಾಡಬೇಕು ಎಂದರೆ ಸೆನ್ಸಾರ್  ಪ್ರಕ್ರಿಯೆಯನ್ನು ಪ್ರಶ್ನೆ ಮಾಡಬೇಕು’ ಎಂದು ಕೋರ್ಟ್ ಹೇಳಿದೆ.

‘ನೀವು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು’ ಎಂದು ನ್ಯಾಯಮೂರ್ತಿ ನಾಗರತ್ನ ಅವರು ವಕೀಲರಾದ ಪಾಶಾಗೆ ಸೂಚಿಸಿದರು. ‘ನಮಗೆ ಸಮಯದ ಅಭಾವ ಇದೆ. ಸಿನಿಮಾ ಶುಕ್ರವಾರ ರಿಲೀಸ್ ಆಗುತ್ತಿದೆ’ ಎಂದು ಪಾಶಾ ಹೇಳಿದರು. ‘ಹಾಗಾದರೆ ಮುಂದಿನ ದಿನಗಳಲ್ಲಿ ಎಲ್ಲರೂ ಸುಪ್ರೀಂಕೋರ್ಟ್​ಗೆ ಮೊದಲು ಬರುತ್ತಾರೆ’ ಎಂದು ನಾಗರತ್ನ ಅಭಿಪ್ರಾಯಪಟ್ಟರು.

‘ದಿ ಕೇರಳ ಸ್ಟೋರಿ’ ನೈಜ ಘಟನೆ ಆಧಾರಿತವಾಗಿದ್ದು ಎಂದು ನಿರ್ದೇಶಕರು ಹೇಳಿದ್ದಾರೆ. 2022ರಲ್ಲಿ ರಿಲೀಸ್ ಆದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಹಿಟ್ ಆಯಿತು. ಕಾಶ್ಮೀರಿ ಪಂಡಿತರ ವಲಸೆ ಮತ್ತು ಅವರ ಹತ್ಯೆಯನ್ನು ಆಧರಿಸಿ ಈ ಸಿನಿಮಾ ಸಿದ್ಧಗೊಂಡಿತ್ತು. ಈಗ ಮತ್ತೊಂದು ನೈಜ ಘಟನೆ ಆಧಾರಿತ ಸಿನಿಮಾ ಬರುತ್ತಿದ್ದು ಇದನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?

ಮೇ 5ರಂದು ‘ದಿ ಕೇರಳ ಸ್ಟೋರಿ’ ರಿಲೀಸ್ ಆಗುತ್ತಿದೆ. ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಕನ್ನಡದಲ್ಲಿ ಸಿನಿಮಾ ಏಕೆ ರಿಲೀಸ್ ಆಗುತ್ತಿಲ್ಲ ಎನ್ನುವ ಪ್ರಶ್ನೆಯನ್ನು ಅನೇಕರು ಎತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​