100 ಕೋಟಿ ರೂಪಾಯಿ ಸನಿಹದಲ್ಲಿ ‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾ ಕಲೆಕ್ಷನ್

ಕಾಮಿಡಿ ಸಿನಿಮಾಗಳನ್ನು ಇಷ್ಟಪಡುವ ಪ್ರೇಕ್ಷಕರಿಗೆ ‘ವೆಲ್ಕಮ್ ಟು ದಿ ಜಂಗಲ್’ ಚಿತ್ರ ಇಷ್ಟ ಆಗುತ್ತಿದೆ. ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ, ಪರೇಶ್ ರಾವಲ್ ಮುಂತಾದವರು ನಟಿಸಿರುವ ಈ ಸಿನಿಮಾ ಸಾವಿರಾರು ಶೋಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ಕಲೆಕ್ಷನ್ 100 ಕೋಟಿ ರೂಪಾಯಿ ಸನಿಹದಲ್ಲಿದೆ.

100 ಕೋಟಿ ರೂಪಾಯಿ ಸನಿಹದಲ್ಲಿ ‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾ ಕಲೆಕ್ಷನ್
Welcome To The Jungle

Updated on: Jun 29, 2026 | 5:08 PM

ಮುಖ್ಯಾಂಶಗಳು

  • ವೀಕೆಂಡ್​ನಲ್ಲಿ ಭರ್ಜರಿ ಪ್ರದರ್ಶನ ಕಂಡ ‘ವೆಲ್ಕಮ್ ಟು ದಿ ಜಂಗಲ್’ ಚಿತ್ರ.
  • ವಿಶ್ವದಾದ್ಯಂತ 100 ಕೋಟಿ ರೂ. ಗಳಿಸುವತ್ತ ಅಕ್ಷಯ್ ಕುಮಾರ್ ಸಿನಿಮಾ.
  • ಕಾಮಿಡಿ ಕಥಾಹಂದರದ ಈ ಸಿನಿಮಾದಲ್ಲಿ ಬಿ-ಟೌನ್ ಬಹುತಾರಾಗಣ ಇದೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅಭಿನಯದ ಹೊಸ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಮೊದಲ ವೀಕೆಂಡ್‌ನಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಬೇಟೆಯಾಡಿದೆ. ಶುಕ್ರವಾರ (ಜೂನ್ 26) ಸಾಧಾರಣ ಓಪನಿಂಗ್ ಪೆಡೆದುಕೊಂಡಿದ್ದ ಈ ಸಿನಿಮಾ ಶನಿವಾರ ಮತ್ತು ಭಾನುವಾರ ಪ್ರೇಕ್ಷಕರನ್ನು ದೊಡ್ಡ ಮಟ್ಟದಲ್ಲಿ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾನುವಾರದ ರಜಾದಿನ ಮುಗಿದಿದ್ದು, ಇಂದಿನಿಂದ (ಜೂನ್ 29) ಚಿತ್ರಕ್ಕೆ ಅಸಲಿ ಪರೀಕ್ಷೆ ಆರಂಭವಾಗಿದೆ. ವಾರದ ದಿನಗಳಲ್ಲೂ ಸಿನಿಮಾ ಇದೇ ವೇಗ ಕಾಯ್ದುಕೊಂಡರೆ ಚಿತ್ರ ದೊಡ್ಡ ಯಶಸ್ಸು ಸಾಧಿಸುವುದು ಖಚಿತ.

ಬಾಕ್ಸ್ ಆಫೀಸ್ ಟ್ರ್ಯಾಕರ್ ‘ಸ್ಯಾಕ್ನಿಲ್ಕ್’ ನೀಡಿರುವ ವರದಿಯ ಪ್ರಕಾರ, ಮೂರನೇ ದಿನವಾದ ಭಾನುವಾರ (ಜೂನ್ 28) ‘ವೆಲ್ಕಮ್ ಟು ದಿ ಜಂಗಲ್’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಭಾರತದಲ್ಲಿ ಬರೋಬ್ಬರಿ 24.75 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಈ ಮೂಲಕ ಸಿನಿಮಾ ಬಿಡುಗಡೆಯಾದ ಕೇವಲ ಮೂರೇ ದಿನಕ್ಕೆ ಭಾರತದಲ್ಲಿ ಒಟ್ಟು 63.75 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ದಾಟಿದೆ.

ಭಾರತದಲ್ಲಿ ಈ ಚಿತ್ರದ ಒಟ್ಟು ಗ್ರಾಸ್ ಕಲೆಕ್ಷನ್ 76.50 ಕೋಟಿ ರೂಪಾಯಿಗೆ ತಲುಪಿದ್ದರೆ, ವಿದೇಶಿ ಮಾರುಕಟ್ಟೆಯಿಂದಲೂ ಚಿತ್ರಕ್ಕೆ ಉತ್ತಮ ಬೆಂಬಲ ಸಿಕ್ಕಿದೆ. ಓವರ್‌ಸೀಸ್‌ನಲ್ಲಿ 16.95 ಕೋಟಿ ರೂಪಾಯಿ ಬಾಚಿಕೊಂಡಿರುವ ‘ವೆಲ್ಕಮ್ ಟು ದಿ ಜಂಗಲ್’, ಜಾಗತಿಕವಾಗಿ ಒಟ್ಟು 93.45 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಮೂಲಕ ಸಿನಿಮಾ ಅತ್ಯಂತ ವೇಗವಾಗಿ 100 ಕೋಟಿ ರೂಪಾಯಿ ಕ್ಲಬ್ ಸೇರುವತ್ತ ಮುನ್ನುಗ್ಗುತ್ತಿದೆ.

ದೇಶಾದ್ಯಂತ ಒಟ್ಟು 10,867 ಶೋಗಳಲ್ಲಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರಕ್ಕೆ ವೀಕೆಂಡ್‌ನಲ್ಲಿ ಸಂಜೆ ಮತ್ತು ರಾತ್ರಿಯ ಶೋಗಳಿಗೆ ಭಾರಿ ಜನಸ್ತೋಮ ಹರಿದುಬಂದಿದೆ. ಈ ವರ್ಷದ ಬಾಲಿವುಡ್ ಸಿನಿಮಾಗಳ ಪೈಕಿ ‘ಬಾರ್ಡರ್ 2’ ಮತ್ತು ‘ಧುರಂಧರ್: ದಿ ರಿವೆಂಜ್’ ಚಿತ್ರಗಳ ನಂತರ ‘ವೆಲ್ಕಮ್ ಟು ದಿ ಜಂಗಲ್’ ಅತಿ ದೊಡ್ಡ ಓಪನಿಂಗ್ ಪಡೆದ ಮೂರನೇ ಸಿನಿಮಾ ಎನಿಸಿಕೊಂಡಿದೆ.

ಇದನ್ನೂ ಓದಿ: 7.1 ಕೋಟಿ ರೂಪಾಯಿಗೆ 2 ಫ್ಲಾಟ್‌ ಮಾರಾಟ ಮಾಡಿದ ನಟ ಅಕ್ಷಯ್ ಕುಮಾರ್

ಈ ಚಿತ್ರದ ಪ್ರಮುಖ ಆಕರ್ಷಣೆಯೇ ‘ಹೇರಾ ಫೇರಿ’ ಸಿನಿಮಾದ ಸೂಪರ್ ಹಿಟ್ ಜೋಡಿಗಳಾದ ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಮತ್ತು ಪರೇಶ್ ರಾವಲ್ ಮತ್ತೆ ಒಂದಾಗಿರುವುದು. ಅಹ್ಮದ್ ಖಾನ್ ನಿರ್ದೇಶನದ ಈ ಮಲ್ಟಿಸ್ಟಾರರ್ ಚಿತ್ರದಲ್ಲಿ ದಿಶಾ ಪಟಾನಿ, ಜಾಕ್ವೆಲಿನ್ ಫರ್ನಾಂಡಿಸ್, ಅರ್ಷದ್ ವಾರ್ಸಿ, ಜಾಕಿ ಶ್ರಾಫ್, ರವೀನಾ ಟಂಡನ್, ಲಾರಾ ದತ್ತಾ, ಜಾನಿ ಲಿವರ್, ರಾಜ್‌ಪಾಲ್ ಯಾದವ್, ಶ್ರೇಯಸ್ ತಲ್ಪಾಡೆ ಸೇರಿದಂತೆ ದೊಡ್ಡ ತಾರಾಬಳಗವೇ ಇದ್ದು, ಪ್ರೇಕ್ಷಕರಿಗೆ ನಗುವಿನ ಔತಣ ಬಡಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us