ಶಾರುಖ್ ಖಾನ್ ನಿಜವಾದ ಆಸ್ತಿ ಎಷ್ಟು ಸಾವಿರ ಕೋಟಿ? ಅಧಿಕೃತ ಮಾಹಿತಿಯೇ ಸಿಕ್ತು

Shah Rukh Khan: ಶಾರುಖ್ ಖಾನ್, ಭಾರತದ ಅತ್ಯಂತ ಶ್ರೀಮಂತ ನಟರಲ್ಲಿ ಒಬ್ಬರು. ಅವರ ಆಸ್ತಿಯ ಬಗ್ಗೆ ಊಹಾಪೋಹಗಳು ಆಗಾಗ್ಗೆ ಹರಿದಾಡುತ್ತಲೇ ಇರುತ್ತವೆ. ಇದೀಗ ಶಾರುಖ್ ಖಾನ್​ರ ಆಸ್ತಿ ಮೌಲ್ಯದ ಅಧಿಕೃತ ಮಾಹಿತಿ ಲಭ್ಯವಾಗಿದೆ.

ಶಾರುಖ್ ಖಾನ್ ನಿಜವಾದ ಆಸ್ತಿ ಎಷ್ಟು ಸಾವಿರ ಕೋಟಿ? ಅಧಿಕೃತ ಮಾಹಿತಿಯೇ ಸಿಕ್ತು
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Aug 30, 2024 | 6:48 PM

ಬಾಲಿವುಡ್ ನಟ ಶಾರುಖ್ ಖಾನ್ ಅವರು ಬಾಲಿವುಡ್ನ ಕಿಂಗ್ ಖಾನ್. ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಶಾರುಖ್ ಖಾನ್ ಅವರು ಸಿನಿಮಾಗಳ ಜೊತೆಗೆ ಸಾಕಷ್ಟು ಉದ್ಯಮಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಭಾರತದ ಶ್ರೀಮಂತ ನಟ ಎನಿಸಿಕೊಂಡಿದ್ದಾರೆ. ಈ ಬಾರಿಯ ಹುರುನ್ ಶ್ರೀಮಂತರ ಪಟ್ಟಿಯಲ್ಲಿ ಅವರಿಗೆ ಸ್ಥಾನ ಸಿಕ್ಕಿದೆ. ಶಾರುಖ್ ಖಾನ್ ಅವರ ಆಸ್ತಿ ಈ ಮೊದಲು 6,300 ಕೋಟಿ ರೂಪಾಯಿ ಆಗಿತ್ತು. ಅದು ಈಗ 7,300 ಕೋಟಿ ರೂಪಾಯಿಗೂ ಹೆಚ್ಚಿದೆ.

ಶಾರುಖ್ ಖಾನ್ ಅವರು ಸಿನಿಮಾಗಳಿಗೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಕಳೆದ ವರ್ಷ ಅವರ ನಟನೆಯ ‘ಪಠಾಣ್’, ‘ಜವಾನ್’ ಹಾಗೂ ‘ಡಂಕಿ’ ಸಿನಿಮಾ ರಿಲೀಸ್ ಆದವು. ಮೂರು ಚಿತ್ರಗಳಿಂದ ಆದ ಬಿಸ್ನೆಸ್ 2,500 ಕೋಟಿ ರೂಪಾಯಿಗೂ ಅಧಿಕ. ಇದರ ಜೊತೆಗೆ ಅವರು ಹಲವು ಉದ್ಯಮಗಳಲ್ಲಿ, ರಿಯಲ್ ಎಸ್ಟೇಟ್ಗಳಲ್ಲಿ ಹೂಡಿಕೆ ಮಾಡಿದ್ದಾರೆ. ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ರೆಡ್ ಚಿಲ್ಲಿಸ್ ಎಂಟರ್ಟೇನ್ಮೆಂಟ್ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಇದರಿಂದ ಅವರ ಆಸ್ತಿ ಹೆಚ್ಚುತ್ತಿದೆ.

ಇದನ್ನೂ ಓದಿ:‘ಪಠಾಣ್’ ಗೆದ್ದ ಖುಷಿಯಲ್ಲಿ ಜಾನ್ ಅಬ್ರಹಾಂ ಕೇಳಿದ್ದೆಲ್ಲ ಕೊಡಿಸಿದ್ದ ಶಾರುಖ್ ಖಾನ್

ಸೋಶಿಯಲ್ ಮೀಡಿಯಾದಲ್ಲೂ ಶಾರುಖ್ಗೆ ದೊಡ್ಡ ಹಿಂಬಾಲಕರ ಸಂಖ್ಯೆ ಇದೆ. ಅವರಿಗೆ ಟ್ವಿಟರ್ನಲ್ಲಿ 4.41 ಕೋಟಿ ಫಾಲೋವರ್ಸ್ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಪವರ್ಫುಲ್ ವ್ಯಕ್ತಿ ಎನಿಸಿಕೊಳ್ಳಲು ಇದು ಕೂಡ ಒಂದು ಕಾರಣ. ಆರಂಭದಲ್ಲಿ ಶಾರುಖ್ ಖಾನ್ ಅವರು ಸಾಕಷ್ಟು ಏರಿಳಿತ ಕಂಡರು. ಈಗ ಅವರಿಗೆ ಸಾಕಷ್ಟು ಹಣ ಇದೆ.

ಶಾರುಖ್ ಖಾನ್ ಅವರ ಬಳಿ ಹಲವು ಸಿನಿಮಾಗಳು ಇವೆ. ‘ಟೈಗರ್ vs ಪಠಾಣ್’ ಸಿನಿಮಾದಲ್ಲಿ ನಟಿಸಬೇಕಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರು ನಟಿಸುತ್ತಿದ್ದಾರೆ. ಇದರ ಜೊತೆಗೆ ‘ಕಿಂಗ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಅವರ ಮಗಳು ಸುಹಾನಾ ಖಾನ್ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಸುಜಯ್ ಘೋಷ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅಭಿಷೇಕ್ ಬಚ್ಚನ್ ವಿಲನ್ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಅಭಿಷೇಕ್ ಬಚ್ಚನ್ಗೆ ಗೆಲುವು ಸಿಕ್ಕಿಲ್ಲ. ಈ ಕಾರಣಕ್ಕೆ ಅವರು ವಿಲನ್ ಆಗುತ್ತಿದ್ದಾರೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್