AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಚಿತ್ರಕ್ಕೆ ಮಾತ್ರ ಯುದ್ಧದ ಬಿಸಿ: ‘ಧುರಂಧರ್ 2’ ಸಿನಿಮಾಗೆ ಚಿಂತೆ ಇಲ್ಲ ಯಾಕೆ?

ಯುದ್ಧದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ‘ಟಾಕ್ಸಿಕ್’ ಬಿಡುಗಡೆಯನ್ನು ಮುಂದೂಡಲಾಗಿದೆ. ಆದರೆ ‘ಧುರಂಧರ್ 2’ ಸಿನಿಮಾಗೆ ಮಧ್ಯಪ್ರಾಚ್ಯ ರಾಷ್ಟ್ರಗಳ ಸದ್ಯದ ಪರಿಸ್ಥಿತಿಯಿಂದ ಯಾವುದೇ ತೊಂದರೆ ಇಲ್ಲ. ಯಾಕೆಂದರೆ ಗಲ್ಫ್ ರಾಷ್ಟ್ರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುವುದೇ ಇಲ್ಲ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಟಾಕ್ಸಿಕ್’ ಚಿತ್ರಕ್ಕೆ ಮಾತ್ರ ಯುದ್ಧದ ಬಿಸಿ: ‘ಧುರಂಧರ್ 2’ ಸಿನಿಮಾಗೆ ಚಿಂತೆ ಇಲ್ಲ ಯಾಕೆ?
Ranveer Singh
ಮದನ್​ ಕುಮಾರ್​
|

Updated on: Mar 06, 2026 | 7:21 PM

Share

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಭೀತಿ ಭಾರತೀಯ ಚಿತ್ರರಂಗದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಈ ಕಾರಣದಿಂದಾಗಿ ಕನ್ನಡದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಯಿತು. ಮಾರ್ಚ್ 19ರಂದು ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಅದೇ ದಿನ ರಿಲೀಸ್ ಆಗಲು ಸಜ್ಜಾಗಿರುವ ಬಾಲಿವುಡ್‌ನ ‘ಧುರಂಧರ್ 2’ ಮಾತ್ರ ಬಿಡುಗಡೆ ದಿನಾಂಕ ಬದಲಾಯಿಸಿಕೊಂಡಿಲ್ಲ. ಯಾಕೆಂದರೆ, ‘ಧುರಂಧರ್ 2’ (Dhurandhar 2) ಚಿತ್ರಕ್ಕೆ ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧದ ಬಿಸಿ ತಟ್ಟುವುದಿಲ್ಲ.

ಬಿಡುಗಡೆಗೆ ಕೇವಲ ಎರಡು ವಾರ ಬಾಕಿ ಇರುವಾಗ ‘ಟಾಕ್ಸಿಕ್’ ಚಿತ್ರತಂಡ ಈ ನಿರ್ಧಾರ ತೆಗೆದುಕೊಂಡಿತು. ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯದಲ್ಲಿ ಅನಿಶ್ಚಿತತೆ ಮೂಡಿದೆ. ಭಾರತೀಯ ಸಿನಿಮಾಗಳಿಗೆ ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳು ದೊಡ್ಡ ಮಾರುಕಟ್ಟೆಯಾಗಿದ್ದು, ಅಲ್ಲಿನ ಸದ್ಯದ ಪರಿಸ್ಥಿತಿಯು ಸಿನಿಮಾದ ಕಲೆಕ್ಷನ್ ಮೇಲೆ ಭಾರಿ ಹೊಡೆತ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಿತ್ರವನ್ನು ಜೂನ್ ತಿಂಗಳಿಗೆ ಮುಂದೂಡಲಾಗಿದೆ.

ಕಳೆದ ಫೆಬ್ರವರಿಯಲ್ಲಿ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯಾಗಿತ್ತು. ಇದಕ್ಕೆ ಪ್ರತಿಕಾರವಾಗಿ ಇರಾನ್ ಕೂಡ ಅಮೆರಿಕ ಮತ್ತು ಇಸ್ರೇಲ್ ನೆಲೆಗಳ ಮೇಲೆ ದಾಳಿ ಮಾಡಿದೆ. ಪ್ರಸ್ತುತ ಗಲ್ಫ್ ರಾಷ್ಟ್ರಗಳಲ್ಲಿ ವಿಮಾನ ನಿಲ್ದಾಣಗಳು ಬಂದ್ ಆಗಿದ್ದು, ಪ್ರವಾಸಿಗರನ್ನು ಸ್ಥಳಾಂತರಿಸಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸಿನಿಮಾ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂಬುದು ತಜ್ಞರ ಅಭಿಪ್ರಾಯ.

ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ‘ಟಾಕ್ಸಿಕ್’ ಹಿಂದೆ ಸರಿದಿದ್ದರೂ ‘ಧುರಂಧರ್ 2’ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನಿರ್ಮಾಣ ಸಂಸ್ಥೆ ‘ಜಿಯೋ ಸ್ಟುಡಿಯೋಸ್’ ಸ್ಪಷ್ಟಪಡಿಸಿದೆ. ಇದಕ್ಕೆ ಕಾರಣ ಕೂಡ ಇದೆ. ಗಲ್ಫ್ ರಾಷ್ಟ್ರಗಳಲ್ಲಿ ‘ಧುರಂಧರ್ 2’ ಬಿಡುಗಡೆ ಆಗುತ್ತಿಲ್ಲ. ಕಳೆದ ವರ್ಷ ತೆರೆಕಂಡಿದ್ದ ‘ಧುರಂಧರ್’ ಸಿನಿಮಾದಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ತಾಣ ಎಂದು ಬಿಂಬಿಸಿದ್ದರಿಂದ ಯುಎಇ, ಸೌದಿ ಅರೇಬಿಯಾ, ಖತಾರ್ ಸೇರಿದಂತೆ ಆರು ಗಲ್ಫ್ ರಾಷ್ಟ್ರಗಳು ಚಿತ್ರಕ್ಕೆ ನಿಷೇಧ ಹೇರಿದ್ದವು.

ಇದನ್ನೂ ಓದಿ: ‘ಧುರಂಧರ್ 2’ ಟ್ರೇಲರ್ ಬಿಡುಗಡೆ ಬೆನ್ನಲ್ಲೇ ಶುರು ಆಗಲಿದೆ ಅಡ್ವಾನ್ಸ್ ಬುಕಿಂಗ್

ಸೀಕ್ವೆಲ್ ಮೇಲೂ ನಿಷೇಧ ಹೇರಲಾಗಿದೆ. ‘ಧುರಂಧರ್ 2’ ಕೂಡ ಮೊದಲ ಭಾಗದ ಕಥೆಯ ಮುಂದುವರಿದ ಭಾಗವಾಗಿದ್ದು, ಪಾಕಿಸ್ತಾನದ ಕುರಿತಾದ ಕಠಿಣ ನಿಲುವು ಹೊಂದಿರುವುದರಿಂದ ಇದು ಕೂಡ ಗಲ್ಫ್‌ನಲ್ಲಿ ಬಿಡುಗಡೆ ಆಗುವುದಿಲ್ಲ. ಹಾಗಾಗಿ ಅಲ್ಲಿನ ಯುದ್ಧದ ಪರಿಸ್ಥಿತಿ ಈ ಚಿತ್ರದ ಕಲೆಕ್ಷನ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹಾಗಾಗಿ ‘ಧುರಂಧರ್ 2’ ಸಿನಿಮಾ ಯಾವುದೇ ಭೀತಿ ಇಲ್ಲದೇ ಮಾರ್ಚ್ 19ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಡಿಕೆ ಶಿವಕುಮಾರ್​​ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮುಂದಿನ ಸಿಎಂ ಯಾರು ಅಂತಿದ್ದಂತೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ಸಿದ್ದರಾಮಯ್ಯ ಪದತ್ಯಾಗಕ್ಕೆ ಹುಟ್ಟೂರಲ್ಲಿ ಆಕ್ರೋಶ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ