Shah Rukh Khan: ‘ನಿಮ್ಮ ಚಿತ್ರದ ಟಿಕೆಟ್​ ನೀವೇ ಖರೀದಿ ಮಾಡ್ತೀರಾ?’: ಟ್ರೋಲ್​ ಮಾಡಲು ಬಂದವರಿಗೆ ಶಾರುಖ್​ ನೀಡಿದ ಉತ್ತರ ಏನು?

Jawan Movie: ಟ್ವಿಟರ್​ನಲ್ಲಿ ನಡೆದ ಪ್ರಶ್ನೋತ್ತರದ ವೇಳೆ ಅನೇಕರು ‘ಜವಾನ್​’ ಪ್ರಿವ್ಯೂಗೆ ಮೆಚ್ಚುಗೆ ಸೂಚಿಸಿದ್ದಾರೆ. ಇನ್ನೂ ಕೆಲವರು ಶಾರುಖ್​ ಖಾನ್​ರನ್ನು ಟ್ರೋಲ್​ ಮಾಡಲು ಪ್ರಯತ್ನಿಸಿದ್ದಾರೆ.

Shah Rukh Khan: ‘ನಿಮ್ಮ ಚಿತ್ರದ ಟಿಕೆಟ್​ ನೀವೇ ಖರೀದಿ ಮಾಡ್ತೀರಾ?’: ಟ್ರೋಲ್​ ಮಾಡಲು ಬಂದವರಿಗೆ ಶಾರುಖ್​ ನೀಡಿದ ಉತ್ತರ ಏನು?
ಶಾರುಖ್​ ಖಾನ್​
Follow us
ಮದನ್​ ಕುಮಾರ್​
|

Updated on: Jul 13, 2023 | 2:07 PM

ನಟ ಶಾರುಖ್​ ಖಾನ್​ ಅವರು ಈಗ ‘ಜವಾನ್​’ (Jawan) ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಅವರ ಅಭಿಮಾನಿಗಳಂತೂ ಈ ಸಿನಿಮಾ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇತ್ತೀಚೆಗೆ ರಿಲೀಸ್​ ಆದ ಪ್ರಿವ್ಯೂ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಇದರಲ್ಲಿನ ಪ್ರತಿ ಫ್ರೇಮ್​ ಕೂಡ ಸಿನಿಪ್ರಿಯರಿಗೆ ಇಷ್ಟ ಆಗಿದೆ. ಶಾರುಖ್​ ಖಾನ್​ (Shah Rukh Khan) ಅವರು ಈ ಚಿತ್ರದ ಪ್ರಮೋಷನ್​ಗಾಗಿ ಹೊಸ ಹೊಸ ಪ್ಲ್ಯಾನ್​ ಮಾಡುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಅವರು ಅಭಿಮಾನಿಗಳ ಜೊತೆ ಟ್ವಿಟರ್​ನಲ್ಲಿ ಪ್ರಶ್ನೋತ್ತರ ನಡೆಸುತ್ತಾರೆ. ಇತ್ತೀಚೆಗೆ ಅಭಿಮಾನಿಗಳಿಂದ ಪ್ರಶ್ನೆ ಸ್ವೀಕರಿಸಿದ ಅವರಿಗೆ ಕೆಲವರಿಂದ ಟ್ರೋಲ್​ (Troll) ಕಾಟ ಎದುರಾಗಿದೆ. ಅದನ್ನು ತಮ್ಮದೇ ರೀತಿಯಲ್ಲಿ ಹ್ಯಾಂಡಲ್​ ಮಾಡಿದ್ದಾರೆ ಶಾರುಖ್​.

‘ನಿಮ್ಮ ಸಿನಿಮಾದ ಟಿಕೆಟ್​ ಅನ್ನು ನೀವೇ ಖರೀದಿ ಮಾಡುತ್ತೀರಾ’ ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ. ಅದಕ್ಕೆ ಶಾರುಖ್​ ಖಾನ್​ ಅವರು ಸಖತ್ ಕೂಲ್​ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮ ಕೆಲಸಕ್ಕೆ ನೀವೇ ಸಂಬಳ ಕೊಟ್ಟುಕೊಳ್ಳುತ್ತೀರಾ’ ಎಂದು ಮರುಪ್ರಶ್ನೆ ಹಾಕುವ ಮೂಲಕ ಟ್ರೋಲಿಗರ ಬಾಯಿ ಮುಚ್ಚಿಸಿದ್ದಾರೆ ಎಸ್​ಆರ್​ಕೆ. ಪ್ರಶ್ನೋತ್ತರದ ವೇಳೆ ಅನೇಕರು ‘ಜವಾನ್​’ ಪ್ರಿವ್ಯೂಗೆ ಮೆಚ್ಚುಗೆ ಸೂಚಿಸಿದ್ದಾರೆ. ಎಲ್ಲರಿಂದ ಹೊಗಳಿಕೆ ಮಾತುಗಳು ಕೇಳಿಬರುತ್ತಿರುವುದರಿಂದ ಶಾರುಖ್​ ಖಾನ್​ಗೆ ಖುಷಿ ಆಗಿದೆ.

‘ಜವಾನ್​’ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ, ನಯನತಾರಾ, ದೀಪಿಕಾ ಪಡುಕೋಣೆ ಮುಂತಾದವರು ನಟಿಸಿದ್ದಾರೆ. ಅಟ್ಲಿ ನಿರ್ದೇಶನದಲ್ಲಿ ಈ ಸಿನಿಮಾ ಅದ್ದೂರಿಯಾಗಿ ಮೂಡಿಬಂದಿದೆ. ಸೆಪ್ಟೆಂಬರ್​ 7ರಂದು ‘ಜವಾನ್​’ ತೆರೆಕಾಣಲಿದ್ದು, ಈ ಸಿನಿಮಾದಿಂದ ಶಾರುಖ್​ ಖಾನ್​ ಅವರಿಗೆ ದೊಡ್ಡ ಗೆಲುವು ಸಿಗುವ ನಿರೀಕ್ಷೆ ಇದೆ. ಶಾರುಖ್​ ಒಡೆತನ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಬ್ಯಾನರ್​ ಮೂಲಕ ಈ ಚಿತ್ರ ಮೂಡಿಬಂದಿದೆ.

Jawan Prevue: ಅಮ್ಮ-ಮಗನ ಪಾತ್ರದಲ್ಲಿ ದೀಪಿಕಾ ಪಡುಕೋಣೆ-ಶಾರುಖ್​ ಖಾನ್​? ಭಾರಿ ಟ್ವಿಸ್ಟ್​ ನಿರೀಕ್ಷೆಯಲ್ಲಿ ಫ್ಯಾನ್ಸ್​

‘ಜವಾನ್​’ ಮಾತ್ರವಲ್ಲದೇ ಶಾರುಖ್​ ಖಾನ್​ ನಟನೆಯ ‘ಡಂಕಿ’ ಸಿನಿಮಾದ ಮೇಲೂ ಸಖತ್​ ನಿರೀಕ್ಷೆ ಇದೆ. ಆ ಚಿತ್ರಕ್ಕೆ ಖ್ಯಾತ ನಿರ್ದೇಶಕ ರಾಜ್​ಕುಮಾರ್​ ಹಿರಾನಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಅವರಿಬ್ಬರ ಕಾಂಬಿನೇಷನ್​ ಆದ್ದರಿಂದ ಹೈಪ್​ ಹೆಚ್ಚಾಗಿದೆ. 2023ರಲ್ಲೇ ‘ಡಂಕಿ’ ಕೂಡ ರಿಲೀಸ್​ ಆಗಲಿದೆ. ಆ ಮೂಲಕ ಶಾರುಖ್​ ಖಾನ್​ ಅವರ ಅಭಿಮಾನಿಗಳಿಗೆ ಬ್ಯಾಕ್​ ಟು ಬ್ಯಾಕ್​ ಮನರಂಜನೆ ಸಿಗಲಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ