ಬಾಲಿವುಡ್​ನ ‘ರಾಮಾಯಣ’ ಚಿತ್ರಕ್ಕೆ ನಿರ್ಮಾಪಕನಾದ ಯಶ್; ಏನಿದು ಸಮಾಚಾರ?

‘ರಾಮಾಯಣ’ ಸಿನಿಮಾ ಬಾಲಿವುಡ್​ನಲ್ಲಿ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿರುವ ಸಿನಿಮಾ. ನಮಿತ್ ಮಲ್ಹೋತ್ರಾ ಅವರು ‘ಪ್ರೈಮ್ ಫೋಕಸ್’ ಮೂಲಕ ಚಿತ್ರ ನಿರ್ಮಿಸುತ್ತಿದ್ದಾರೆ. ಇದರ ಜೊತೆಗೆ ಯಶ್ ಅವರು ‘ಮಾನ್​ಸ್ಟರ್ ಮೈಂಡ್ ಕ್ರಿಯೇಷನ್’ ಮೂಲಕ ಈ ಚಿತ್ರದ ನಿರ್ಮಾಪಕರಲ್ಲೊಬ್ಬರಾಗಿದ್ದಾರೆ.

ಬಾಲಿವುಡ್​ನ ‘ರಾಮಾಯಣ’ ಚಿತ್ರಕ್ಕೆ ನಿರ್ಮಾಪಕನಾದ ಯಶ್; ಏನಿದು ಸಮಾಚಾರ?
ನಮಿತ್-ಯಶ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Apr 12, 2024 | 12:46 PM

ನಟ ಯಶ್ (Yash) ಅವರು ನಟನೆಯ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಸಿನಿಮಾ ನಿರ್ಮಾಣ ಮಾಡಿದ್ದು ಕಡಿಮೆ. ‘ಟಾಕ್ಸಿಕ್’ ಸಿನಿಮಾಗೆ ಅವರು ಕೂಡ ನಿರ್ಮಾಪಕರು. ಈಗ ‘ರಾಮಾಯಣ’ ಸಿನಿಮಾಗೂ ಅವರು ನಿರ್ಮಾಪಕರಾಗುತ್ತಿದ್ದಾರೆ. ಈ ಬಗ್ಗೆ ವರದಿ ಆಗಿತ್ತು. ಈಗ ಈ ವಿಚಾರ ಬಹುತೇ ಖಚಿತ ಆಗಿದೆ. ಅಷ್ಟಕ್ಕೂ ಏನಿದು ವಿಚಾರ? ಯಶ್ ನಿರ್ಮಾಪಕರಾಗಿದ್ದು ಹೇಗೆ ಎನ್ನುವುದಕ್ಕೆ ಇಲ್ಲಿದೆ ವಿವರ.

‘ರಾಮಾಯಣ’ ಸಿನಿಮಾ ಬಾಲಿವುಡ್​ನಲ್ಲಿ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿರುವ ಸಿನಿಮಾ. ಈ ಚಿತ್ರದಲ್ಲಿ ರಣಬೀರ್ ಕಪೂರ್ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಉಳಿದ ಪಾತ್ರವರ್ಗದ ಬಗ್ಗೆಯೂ ಸುದ್ದಿ ಹರಿದಾಡುತ್ತಿದೆ. ಈ ಚಿತ್ರಕ್ಕೆ ಯಶ್ ಕೂಡ ನಿರ್ಮಾಪಕರಾಗುತ್ತಿದ್ದಾರೆ ಅನ್ನೋದು ವಿಶೇಷ.

ನಮಿತ್ ಮಲ್ಹೋತ್ರಾ ಅವರು ‘ಪ್ರೈಮ್ ಫೋಕಸ್’ ಮೂಲಕ ಚಿತ್ರ ನಿರ್ಮಿಸುತ್ತಿದ್ದಾರೆ. ಇದರ ಜೊತೆಗೆ ಯಶ್ ಅವರು ‘ಮಾನ್​ಸ್ಟರ್ ಮೈಂಡ್ ಕ್ರಿಯೇಷನ್’ ಮೂಲಕ ಈ ಚಿತ್ರದ ನಿರ್ಮಾಪಕರಲ್ಲೊಬ್ಬರಾಗಿದ್ದಾರೆ. ಯಶ್ ಅವರು ಈ ಚಿತ್ರಕ್ಕಾಗಿ 80 ಕೋಟಿ ರೂಪಾಯಿ ಸಂಭಾವನೆ ಪಡೆಯಬೇಕಿತ್ತು. ಆದರೆ ಈ ಹಣವನ್ನು ಅವರು ಈಗಲೇ ಪಡೆಯುತ್ತಿಲ್ಲ. ಬದಲಿಗೆ ಇದನ್ನು ಸಿನಿಮಾ ನಿರ್ಮಾಣದಲ್ಲಿ ಬಳಕೆ ಮಾಡುವಂತೆ ಕೋರಿದ್ದಾರೆ. ಈ ಮೂಲಕ ಅವರು ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ ಎಂದು ವರದಿ ಆಗಿದೆ.

ತರಣ್ ಆದರ್ಶ್ ಟ್ವೀಟ್

ಬಾಲಿವುಡ್​ನಲ್ಲಿ ಈ ಪದ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಈ ಮೊದಲು ರಣಬೀರ್ ಕಪೂರ್ ಅವರು ‘ಬ್ರಹ್ಮಾಸ್ತ್ರ’ ಸಿನಿಮಾಗಾಗಿ ಸಂಭಾವನೆ ಪಡೆದಿರಲಿಲ್ಲ. ಬದಲಿಗೆ ಅದನ್ನು ಸಿನಿಮಾ ಮೇಲೆ ಹೂಡಿಕೆ ಮಾಡಿದ್ದರು. ನಂತರ ಬಂದ ಲಾಭದಲ್ಲಿ ಪಾಲು ಪಡೆದುಕೊಂಡಿದ್ದರು. ಆಮಿರ್ ಖಾನ್, ಸಲ್ಮಾನ್ ಖಾನ್, ಶಾರುಖ್ ಖಾನ್ ಸೇರಿ ಅನೇಕರು ಇದೇ ತಂತ್ರ ಉಪಯೋಗಿಸುತ್ತಾರೆ. ಯಶ್ ಕೂಡ ಈಗ ಇದೇ ಮಾರ್ಗದಲ್ಲಿ ಸಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಯಶ್ ಕಡೆಯಿಂದಲೇ ಅಪ್​ಡೇಟ್ ಸಿಗಬೇಕಿದೆ.

‘ರಾಮಾಯಣ’ ಚಿತ್ರಕ್ಕೆ ಸದ್ಯ ಮುಂಬೈನಲ್ಲಿ ದೊಡ್ಡ ದೊಡ್ಡ ಸೆಟ್​ಗಳನ್ನು ಹಾಕಲಾಗಿದೆ. ಇದರ ಶೂಟಿಂಗ್ ಕೂಡ ನಡೆಯುತ್ತಿದೆ. ಸೆಟ್​ನ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗುತ್ತಿವೆ. ಇದನ್ನು ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಆದರೆ, ಸಿನಿಮಾ ತಂಡಕ್ಕೆ ಇದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: ‘ರಾಮಾಯಣ’ ಚಿತ್ರಕ್ಕೆ ಸಂಭಾವನೆ ಬದಲು ಬೇರೆಯದ್ದನ್ನೇ ಕೇಳಿದ ಯಶ್?

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಕೆವಿಎನ್​ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ. ವಿಶೇಷ ಎಂದರೆ ಯಶ್ ಕೂಡ ಸಿನಿಮಾ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಮಲಯಾಳಂನ ಗೀತು ಮೋಹನ್​ದಾಸ್ ಅವರು ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ರಿವೀಲ್ ಆಗಬೇಕಿದೆ. 2025ರ ಏಪ್ರಿಲ್​ನಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಚಿತ್ರದ ಪೋಸ್ಟರ್ ಹಾಗೂ ಮೊದಲ ಗ್ಲಿಂಪ್ಸ್ ಗಮನ ಸೆಳೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ