‘ರಾಮಾಯಣ’ ಚಿತ್ರೀಕರಣ ಪ್ರಾರಂಭಿಸಿದ ನಟ ಯಶ್
Ramayana movie: ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟ ಯಶ್ ಇದೀಗ ‘ಟಾಕ್ಸಿಕ್’ ಸಿನಿಮಾದಿಂದ ಬಿಡುವು ಪಡೆದು ಮತ್ತೊಂದು ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ನಟ ಯಶ್, ಇಂದಿನಿಂದ (ಏಪ್ರಿಲ್ 30) ‘ರಾಮಾಯಣ’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದ್ದು ಮುಂದಿನ 30 ದಿನಗಳು ಯಶ್, ‘ರಾಮಾಯಣ’ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿರಲಿದ್ದಾರೆ.

‘ಕೆಜಿಎಫ್’ (KGF) ಸಿನಿಮಾದ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಯಶ್ (Yash) ಪ್ರಸ್ತುತ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದೆ. ಈ ನಡುವೆ ‘ಟಾಕ್ಸಿಕ್’ ಚಿತ್ರೀಕರಣಕ್ಕೆ ಬಿಡುವು ನಿಡಿ ಮತ್ತೊಂದು ಸಿನಿಮಾದ ಚಿತ್ರೀಕರಣದಲ್ಲಿ ಯಶ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅದುವೇ ‘ರಾಮಾಯಣ’. ಯಶ್, ‘ರಾಮಾಯಣ’ ಸಿನಿಮಾನಲ್ಲಿ ರಾವಣನ ಪಾತ್ರದಲ್ಲಿ ನಟಿಸಲಿದ್ದಾರೆ. ಸಿನಿಮಾದ ಚಿತ್ರೀಕರಣ ಶುರುವಾಗಿ ಈಗಾಗಲೇ ಬಹಳ ಸಮಯವಾಗಿದೆ. ಆದರೆ ಯಶ್, ಈಗ ‘ರಾಮಾಯಣ’ ಸಿನಿಮಾ ಸೆಟ್ ಸೇರಿಕೊಳ್ಳುತ್ತಿದ್ದಾರೆ.
ನಟ ಯಶ್, ಇಂದಿನಿಂದ (ಏಪ್ರಿಲ್ 30) ‘ರಾಮಾಯಣ’ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಸತತ ಒಂದು ತಿಂಗಳು ಕಾಲ ಮುಂಬೈನಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಸುಸಜ್ಜಿತ ಸ್ಟುಡಿಯೋನಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಪ್ರಸ್ತುತ ಯಶ್ ಮಾತ್ರವೇ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಂದಿನ 30 ದಿನಗಳಲ್ಲಿ ಯಶ್ ಅವರು ‘ರಾಮಾಯಣ’ ಸಿನಿಮಾದ ಪಾರ್ಟ್ 1 ಸಿನಿಮಾಕ್ಕೆ ಸಂಬಂಧಿಸಿದ ದೃಶ್ಯಗಳಲ್ಲಿ ನಟಿಸಲಿದ್ದಾರೆ. ಮುಂದಿನ ಶೆಡ್ಯೂಲ್ನಲ್ಲಿ ಪಾರ್ಟ್ 2ಗೆ ಸಂಬಂಧಿಸಿದ ದೃಶ್ಯಗಳಲ್ಲಿಯೂ ಯಶ್ ನಟಿಸಲಿದ್ದಾರೆ.
ಇದೇ ಮೊದಲ ಬಾರಿಗೆ ಯಶ್ ‘ರಾಮಾಯಣ’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಮೊದಲು ಕೆಲವು ಟ್ರೈನಿಂಗ್ ಸೆಷನ್ಸ್ನಲ್ಲಿ ಯಶ್ ಭಾಗಿ ಆಗಿದ್ದರು. ‘ರಾಮಾಯಣ’ ಸಿನಿಮಾವನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡುತ್ತಿರುವ ಕಾರಣ ನಟರೆಲ್ಲರಿಗೂ ವಿಶೇಷ ತರಬೇತಿಯನ್ನು ನೀಡಲಾಗಿತ್ತು. ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಕೆಲ ದಿನಗಳ ಮುಂಚೆಯಷ್ಟೆ ನಟ ಯಶ್ ಉಜ್ಜಯಿನಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದರು. ಈ ವೇಳೆ ಅವರ ಪತ್ನಿ ರಾಧಿಕಾ ಪಂಡಿತ್ ಸಹ ಜೊತೆಯಲ್ಲಿದ್ದರು.
ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ಮೊದಲ ಸಿನಿಮಾ ಪೋಸ್ಟರ್ ರಿಲೀಸ್
ಯಶ್ ಅವರ ಮುಂದಿನ ಶೆಡ್ಯೂಲ್ನಲ್ಲಿ ಅವರು ಸಾಯಿ ಪಲ್ಲವಿ, ರಣ್ಬೀರ್ ಕಪೂರ್ ಹಾಗೂ ಸನ್ನಿ ಡಿಯೋಲ್ ಅವರುಗಳ ಜೊತೆಗೆ ಚಿತ್ರೀಕರಣ ಮಾಡಲಿದ್ದಾರೆ. ‘ರಾಮಾಯಣ’ ಸಿನಿಮಾನಲ್ಲಿ ನಟ ಯಶ್ ನಟರಷ್ಟೆ ಅಲ್ಲದೆ ನಿರ್ಮಾಪಕರೂ ಸಹ ಆಗಿದ್ದಾರೆ. ಈ ಪ್ರಾಜೆಕ್ಟ್ಗೆ ಅವರ ಮಾನ್ಸ್ಟರ್ ಮೈಂಡ್ಸ್ ಮೂಲಕ ಬಂಡವಾಳ ತೊಡಗಿಸಿದ್ದಾರೆ.
ಯಶ್ರ ಮತ್ತೊಂದು ಪ್ರಾಜೆಕ್ಟ್ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾದ ಅರ್ಧಕ್ಕೂ ಹೆಚ್ಚು ಭಾಗದ ಚಿತ್ರೀಕರಣವನ್ನು ಯಶ್ ಈಗಾಗಲೇ ಮುಗಿಸಿದ್ದಾರೆ. ಸಿನಿಮಾನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ ಇನ್ನೂ ಹಲವು ಪ್ರಮುಖ ನಟ-ನಟಿಯರು ನಟಿಸಿದ್ದಾರೆ. ಸಿನಿಮಾಕ್ಕೆ ಕೆವಿಎನ್ ಮತ್ತು ಮಾನ್ಸ್ಟರ್ ಮೈಂಡ್ಸ್ ಬಂಡವಾಳ ತೊಡಗಿಸಿದೆ. ಸಿನಿಮಾ ಅನ್ನು ಗೀತು ಮೋಹನ್ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಯಶ್ ಎರಡು ಶೇಡ್ನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




