‘ಯಶ್ ಬೇಗ ಬೇಗ ಸಿನಿಮಾ ಮಾಡಿ, ನಾವು ಕಾಯ್ತಾ ಇದೀವಿ’; ಶಾರುಖ್ ಖಾನ್

‘ಕೆಜಿಎಫ್ 2’ ಚಿತ್ರದಲ್ಲಿ ಯಶ್ ಅವರು ಹೀರೋ ಆಗಿ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಲಿವುಡ್​ನಲ್ಲೇ 500+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಬಾಲಿವುಡ್​ನಲ್ಲೂ ಯಶ್​ ಹವಾ ಸೃಷ್ಟಿ ಮಾಡಿದ್ದಾರೆ. ಈಗ ಶಾರುಖ್ ಖಾನ್ ಅವರ ‘ಟಾಕ್ಸಿಕ್’ ಬಗ್ಗೆ ಯಶ್ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

‘ಯಶ್ ಬೇಗ ಬೇಗ ಸಿನಿಮಾ ಮಾಡಿ, ನಾವು ಕಾಯ್ತಾ ಇದೀವಿ’; ಶಾರುಖ್ ಖಾನ್
ಯಶ್-ಶಾರುಖ್

Updated on: Nov 05, 2024 | 11:01 AM

ಕನ್ನಡದ ನಟ ಯಶ್ ಅವರ ಹವಾ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಬಾಲಿವುಡ್​ನಲ್ಲೂ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಈಗ ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಮಾಡುತ್ತಿದ್ದಾರೆ. ಅವರು ಬೇಗ ಬೇಗ ಸಿನಿಮಾ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ. ಈಗ ಶಾರುಖ್ ಖಾನ್ ಕೂಡ ಇದೇ ರೀತಿಯ ಬೇಡಿಕೆ ಇಟ್ಟಿದ್ದಾರೆ. ಇದು ಇತ್ತೀಚಿನ ವಿಡಿಯೋ ಎಂದು ಹೇಳಲಾಗುತ್ತಿದೆ.

‘ಕೆಜಿಎಫ್ 2’ ಚಿತ್ರದಲ್ಲಿ ಯಶ್ ಅವರು ಹೀರೋ ಆಗಿ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಲಿವುಡ್​ನಲ್ಲೇ 500+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಬಾಲಿವುಡ್​ನಲ್ಲೂ ಯಶ್​ ಹವಾ ಸೃಷ್ಟಿ ಮಾಡಿದ್ದಾರೆ. ಈಗ ಶಾರುಖ್ ಖಾನ್ ಅವರು ‘ಟಾಕ್ಸಿಕ್’ ಬಗ್ಗೆ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

ಶಾರುಖ್ ಖಾನ್ ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಇದನ್ನು ‘ಎಸ್​​ಆರ್​ಕೆ ಡೇ’ ಎಂದು ಆಚರಿಸಲಾಗಿದೆ. ಈ ವೇಳೆ ಯಶ್ ಅವರಿಗೆ ಶಾರುಖ್ ಖಾನ್ ಒಂದು ಕಿವಿ ಮಾತು ಹೇಳಿದ್ದಾರೆ. ಇದಕ್ಕೆ ಯಶ್ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಶಾರುಖ್ ಖಾನ್ ಅವರಿಗೆ ಫ್ಯಾನ್ಸ್ ಕಡೆಯಿಂದ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಉತ್ತರ ನೀಡಿದ್ದಾರೆ ಅವರು. ‘ಯಶ್ ಬೇಗ ಬೇಗ ಸಿನಿಮಾ ಮಾಡಿ. ನಾವು ಕಾಯುತ್ತಿದ್ದೇವೆ’ ಎಂದು ಶಾರುಖ್ ಖಾನ್ ಹೇಳಿದ್ದಾರೆ. ಈ ಮೂಲಕ ಯಶ್​ ಸಿನಿಮಾಗಳ ಮೇಲೆ ಶಾರುಖ್ ಖಾನ್​ಗೂ ನಿರೀಕ್ಷೆ ಇದೆ ಅನ್ನೋದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ; ಇಲ್ಲಿದೆ ವಿಶೇಷ ವಿಡಿಯೋ

ಯಶ್ ಮಾರುಕಟ್ಟೆ ವಿಸ್ತರಣೆ ಆಗಿದೆ. ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಹಿಂದಿಯಲ್ಲೂ ಅವರು ಸಿನಿಮಾ ಮಾಡುತ್ತಿದ್ದಾರೆ. ಹಿಂದಿಯಲ್ಲಿ ‘ರಾಮಾಯಣ’ ಚಿತ್ರವನ್ನು ಯಶ್ ಮಾಡುತ್ತಿದ್ದಾರೆ. ಇದರಲ್ಲಿ ರಾವಣನ ಪಾತ್ರವನ್ನು ಯಶ್ ಮಾಡುತ್ತಿದ್ದಾರೆ. ಈ ಪಾತ್ರ ಮಾಡಲು ನಿಜಕ್ಕೂ ಅವರು ಎಗ್ಸೈಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:59 am, Tue, 5 November 24

ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us