AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ.. ಒಂದಲ್ಲ, ಎರಡಲ್ಲ ‘ರಾಮಾಯಣ’ ಬಜೆಟ್ ನಾಲ್ಕು ಸಾವಿರ ಕೋಟಿ ರೂಪಾಯಿ; ಯಶ್ ಪಾಲೆಷ್ಟು?

ಯಶ್ ಅಭಿನಯದ ‘ರಾಮಾಯಣ’ ಚಿತ್ರದ ಬಜೆಟ್ ಬರೋಬ್ಬರಿ ನಾಲ್ಕು ಸಾವಿರ ಕೋಟಿ ರೂಪಾಯಿ ಎಂದು ನಿರ್ಮಾಪಕರು ಹೇಳಿದ್ದಾರೆ. ಯಶ್ ರಾವಣನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಮತ್ತು ರಣಬೀರ್ ಕಪೂರ್ ರಾಮನ ಪಾತ್ರದಲ್ಲಿದ್ದಾರೆ. ಯಶ್ ಸಂಭಾವನೆಯಾಗಿ ಪಡೆಯಬೇಕಾಗಿದ್ದ ಹಣವನ್ನು ಚಿತ್ರದಲ್ಲಿ ಹೂಡಿಕೆ ಮಾಡಿದ್ದಾರೆ. ಈ ಚಿತ್ರ ವಿಶ್ವದ ಅತಿ ದೊಡ್ಡ ಚಿತ್ರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಅಬ್ಬಬ್ಬಾ.. ಒಂದಲ್ಲ, ಎರಡಲ್ಲ ‘ರಾಮಾಯಣ’ ಬಜೆಟ್ ನಾಲ್ಕು ಸಾವಿರ ಕೋಟಿ ರೂಪಾಯಿ; ಯಶ್ ಪಾಲೆಷ್ಟು?
ಯಶ್
ರಾಜೇಶ್ ದುಗ್ಗುಮನೆ
|

Updated on:Jul 15, 2025 | 11:11 AM

Share

ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾಮನಾಗಿ ಕಾಣಿಸಿಕೊಳ್ಳುತ್ತಿರುವ ‘ರಾಮಾಯಣ’ ಸಿನಿಮಾದ ಬಜೆಟ್ ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ಕು ಸಾವಿರ ಕೋಟಿ ರೂಪಾಯಿ. ಹಾಗಂತ ಇದು ಯಾವುದೋ ಊಹಾಪೋಹವಲ್ಲ. ಸ್ವತಃ ನಿರ್ಮಾಕರೇ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ. ನಾಲ್ಕು ಸಾವಿರ ಕೋಟಿ ರೂಪಾಯಿಯಲ್ಲಿ ಸಿನಿಮಾ ಮಾಡಿದರೆ ಅದರಿಂದ ಲಾಭ ಕಂಡುಕೊಳ್ಳುವುದು ಹೇಗೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ.

ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಪ್ರಮುಖರಲ್ಲಿ ನಿಮಿತ್ ಮಲ್ಹೋತ್ರಾ ಕೂಡ ಒಬ್ಬರು. ಇವರ ಜೊತೆ ರಣಬೀರ್ ಕಪೂರ್, ಯಶ್ ಮೊದಲಾದವರು ಬಂಡವಾಳ ಹೂಡಿದ್ದಾರೆ. ನಿಮಿತ್ ಅವರು ಈ ಸಿನಿಮಾದ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಈ ಮೊದಲು ಸಿನಿಮಾಗೆ ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದು ಹೇಳಲಾಗಿತ್ತು. ಆದರೆ, ಸಿನಿಮಾ ಬಜೆಟ್ ಊಹೆಗೂ ಮೀರಿದೆ.

‘ಎರಡೂ ಪಾರ್ಟ್​ನ ಮೊತ್ತ ಸೇರಿದರೆ 500 ಮಿಲಿಯನ್ ಡಾಲರ್ ಆಗಲಿದೆ. ಅಂದರೆ ಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿ. ನಾವು ವಿಶ್ವದ ಅತಿ ದೊಡ್ಡ ಸಿನಿಮಾ ಮಾಡುತ್ತಿದ್ದೇವೆ. ಅದ್ಭುತ ಸ್ಟೋರಿ ಮತ್ತು ಈ ಚಿತ್ರವನ್ನು ವಿಶ್ವವೇ ನೋಡಬೇಕು. ಆದಾಗ್ಯೂ ಹಾಲಿವುಡ್ ಸಿನಿಮಾಗಳಿಗಿಂತ ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮಾಡುತ್ತಿದ್ದೇವೆ. ಹಣವೇ ಎಲ್ಲವೂ ಅಲ್ಲ’ ಎಂದು ಅವರು ಹೇಳಿದ್ದಾರೆ. ಇದನ್ನು ಕೇಳಿ ಅನೇಕರು ಅಚ್ಚರಿಗೊಂಡಿದ್ದಾರೆ. ಅಂದರೆ ಪ್ರತಿ ಪಾರ್ಟ್​ಗೆ 2 ಸಾವಿರ ಕೋಟಿ ರೂಪಾಯಿ ಖರ್ಚಾದಂತೆ ಆಗಿದೆ.

ಇದನ್ನೂ ಓದಿ
Image
ತಾಯಿಗೆ ಕೊಟ್ಟ ಮಾತನ್ನು ಕೊನೆವರೆಗೂ ಉಳಿಸಿಕೊಂಡ ಸರೋಜಾ ದೇವಿ
Image
ಬಿ ಸರೋಜಾದೇವಿ ನಿಧನ; ಆರೂವರೆ ದಶಕ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ತಾರೆ
Image
ಈ ನಟಿ ಜೊತೆ ಕದ್ದು ಮುಚ್ಚಿ ಓಡಾಡಿದ್ದ ಸಲ್ಮಾನ್ ಖಾನ್?
Image
ಸೂತಕದ ಮನೆಯಲ್ಲೂ ಸೆಲ್ಫಿ ಹುಚ್ಚು; ತಾಳ್ಮೆ ಕಳೆದುಕೊಂಡು ಕೂಗಾಡಿದ ರಾಜಮೌಳಿ

ಈ ಚಿತ್ರಕ್ಕೆ ಯಶ್ ಅವರು ಯಾವುದೇ ಸಂಭಾವನೆ ಪಡೆಯುತ್ತಿಲ್ಲ. ಬದಲಿಗೆ ತಮಗೆ ಸಂಭಾವನೆ ರೂಪದಲ್ಲಿ ಬರಬೇಕಿದ್ದ 100 ಕೋಟಿ ರೂಪಾಯಿ ಹಣವನ್ನು ಅವರು ಸಿನಿಮಾ ಮೇಲೆ ಹೂಡಿಕೆ ಮಾಡಿದ್ದಾರೆ. ಈ ಮೂಲಕ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ಹೀಗಾಗಿ ಅವರು ಚಿತ್ರದ ಮೇಲೆ 100-150 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅವರು ಇನ್ನೂ ಹೆಚ್ಚಿನ ಹಣವನ್ನು ಹಾಕಿರಬಹುದು ಎಂದು ಅನೇಕರು ಊಹಿಸಿದ್ದಾರೆ.

ಇದನ್ನೂ ಓದಿ: ‘ಎಂಜಿ ರಸ್ತೇಲಿ ಯಶ್ ಮನೆ, ಸೈಟ್ ಕೊಡ್ಸಿದ್ದಾನೆ’; ಯಾರಿಗೂ ಗೊತ್ತಿಲ್ಲದ ವಿಚಾರ ಹೇಳಿದ ಪುಷ್ಪಾ

‘ರಾಮಾಯಣ’ ಚಿತ್ರಕ್ಕೆ ನಿತೇಶ್ ತಿವಾರಿ ನಿರ್ದೇಶನ ಇದೆ. ರಣಬೀರ್ ಕಪೂರ್ ನಿರ್ಮಾಪಕನಾಗಿ, ಯಶ್ ರಾವಣನಾಗಿ, ಸಾಯಿ ಪಲ್ಲವಿ ಸೀತೆ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Tue, 15 July 25

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ