International Yoga Day 2023: ಅಂತಾರಾಷ್ಟ್ರೀಯ ಯೋಗ ದಿನ: ಈ ನಟಿಯರ ಬದುಕು ಬದಲಾಯಿಸಿತು ಯೋಗ

ಕೆಲವು ನಟಿಯರ ಬದುಕನ್ನು ಯೋಗ ಬದಲಾಯಿಸಿದೆ. ಈ ಬಗ್ಗೆ ಅವರು ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಿದೆ. ಆ ಬಗ್ಗೆ ಇಲ್ಲಿದೆ ವಿವರ.

International Yoga Day 2023: ಅಂತಾರಾಷ್ಟ್ರೀಯ ಯೋಗ ದಿನ: ಈ ನಟಿಯರ ಬದುಕು ಬದಲಾಯಿಸಿತು ಯೋಗ
ಬಾಲಿವುಡ್ ನಟಿಯರ ಯೋಗ
Follow us
ರಾಜೇಶ್ ದುಗ್ಗುಮನೆ
|

Updated on: Jun 21, 2023 | 8:49 AM

ಇಂದು (ಜೂನ್ 21) ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು (International Yoga Day 2023) ಆಚರಿಸಲಾಗುತ್ತಿದೆ. ಕನ್ನಡ ಚಿತ್ರರಂಗ, ಹಿಂದಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ದಿನದಲ್ಲಿ ಭಾಗಿ ಆಗಿದ್ದಾರೆ. ಬಾಲಿವುಡ್​ನ ಹಲವು ನಟಿಯರು ಯೋಗಕ್ಕೆ ಆದ್ಯತೆ ನೀಡುತ್ತಾರೆ. ಕೆಲವು ನಟಿಯರ ಬದುಕನ್ನು ಯೋಗ ಬದಲಾಯಿಸಿದೆ. ಈ ಬಗ್ಗೆ ಅವರು ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಿದೆ. ಈ ಸಾಲಿನಲ್ಲಿ ಕರೀನಾ ಕಪೂರ್, ಶಿಲ್ಪಾ ಶೆಟ್ಟಿ ಮೊದಲಾದವರು ಇದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಕರೀನಾ ಕಪೂರ್

ಕರೀನಾ ಕಪೂರ್ ಅವರು ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಅವರು ಎರಡು ಮಕ್ಕಳ ತಾಯಿ. ಆದಾಗ್ಯೂ ಫಿಟ್​ನೆಸ್ ಕಾಯ್ದುಕೊಂಡಿದ್ದಾರೆ. ಕರೀನಾ ಯೋಗ ಮಾಡುವುದಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ನಿತ್ಯವೂ ಯೋಗ ಮಾಡುತ್ತಾರೆ. ಇದು ಅವರ ಫಿಟ್​ನೆಸ್ ಗುಟ್ಟು. ಸದ್ಯ ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿ ನಟಿಸುತ್ತಿದ್ದಾರೆ.

ಮಲೈಕಾ ಅರೋರಾ:

ಬಾಲಿವುಡ್ ನಟಿ ಮಲೈಕಾ ಅರೋರಾಗೆ ಈಗ ವಯಸ್ಸು 49. ಆದಾಗ್ಯೂ ಯುವತಿಯರನ್ನು ನಾಚಿಸುವಂತಿದೆ ಅವರ ಫಿಟ್​ನೆಸ್. ಅವರು ಇಷ್ಟು ಫಿಟ್ ಆಗಿರೋಕೆ ಯೋಗವೂ ಕಾರಣ. ಅವರು ನಿತ್ಯ ಯೋಗಾಸನ ಮಾಡುತ್ತಾರೆ. ಈ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಸಾರಾ ಅಲಿ ಖಾನ್

ಸೈಫ್ ಅಲಿ ಖಾನ್ ಮಗಳು ಸಾರಾ ಅಲಿ ಖಾನ್ ಚಿತ್ರರಂಗಕ್ಕೆ ಬರುವುದಕ್ಕೂ ಮೊದಲೂ ದಪ್ಪ ಇದ್ದರು. ಇದಕ್ಕೆ ಅವರು ಸಾಕಷ್ಟು ಟ್ರೋಲ್ ಆಗಿದ್ದರು. ಜಿಮ್ ಜೊತೆ ನಿತ್ಯ ಯೋಗಾಸನ ಮಾಡುವುದನ್ನು ಅಭ್ಯಾಸ ಮಾಡಿಕೊಂಡ ನಂತರ ಅವರ ಬಾಡಿ ಫಿಟ್ ಆಯಿತು. ಈಗ ಫಿಟ್​ ಆ್ಯಂಡ್ ಫೈನ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾರೆ.

ರಕುಲ್ ಪ್ರೀತ್ ಸಿಂಗ್

ಕನ್ನಡ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದ ನಟಿ ರಕುಲ್ ಪ್ರೀತ್​ ಸಿಂಗ್ ಯೋಗಾಸನ ಮಾಡುತ್ತಾರೆ. ಅವರು ಸಖತ್ ಫಿಟ್ ಆಗಿದ್ದಾರೆ. ಅವರು ಆಗಾಗ ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾರೆ.

ಶಿಲ್ಪಾ ಶೆಟ್ಟಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಯೋಗಾಸನಕ್ಕೆ ಆದ್ಯತೆ ನೀಡುತ್ತಾರೆ. ಒಂದು ದಿನವೂ ಬಿಡದೇ ಯೋಗ ಮಾಡುತ್ತಾರೆ. ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೂ ಯೋಗ ಹೇಳಿಕೊಡುತ್ತಾರೆ. ಅವರಿಗೆ ಯೋಗಾಸನದ ಬಗ್ಗೆ ಹೆಚ್ಚು ಆಸಕ್ತಿ ಇದೆ. ಅವರ ಪತಿ ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಕ್ಕಿ ಬಿದ್ದಾಗ ಶಿಲ್ಪಾ ಯೋಗದ ಬಗ್ಗೆ ಹೆಚ್ಚು ಮಾತನಾಡಿದ್ದರು.

ದಿಯಾ ಮಿರ್ಜಾ

ನಟಿ ದಿಯಾ ಮಿರ್ಜಾ ಅವರು ಕೂಡ ಯೋಗಾಸನ ಅಭ್ಯಾಸ ಮಾಡುತ್ತಾರೆ. ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಯೋಗ ಮಾಡುತ್ತಿರುವ ಸಾಕಷ್ಟು ಫೋಟೋಗಳು ಇವೆ.

ಇದನ್ನೂ ಓದಿ: Anita Bhat: ಯೋಗದ ಮೂಲಕ ಅನೇಕರಿಗೆ ಸ್ಫೂರ್ತಿಯಾದ ನಟಿ ಅನಿತಾ ಭಟ್

ಮೀರಾ ಕಪೂರ್

ನಟಿ ಮೀರಾ ಕಪೂರ್ ಫಿಟ್​ನೆಸ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಫಿಟ್​ನೆಸ್​ ಹಿಂದೆ ಯೋಗ ಇದೆ. ಅವರು ಯೋಗ ಮಾಡುತ್ತಿರುವ ಹಲವು ಫೋಟೋಗಳು ಈ ಮೊದಲು ವೈರಲ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ