AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ವಿ ಕಪೂರ್-ಶಿಖರ್ ಸಂಬಂಧವನ್ನು ಖಚಿತಪಡಿಸಿದ ಬೋನಿ ಕಪೂರ್

ಜಾನ್ವಿ ಕಪೂರ್ ಅವರು ಶಿಖರ್ ಜೊತೆಗಿನ ಸಂಬಂಧವನ್ನು ನೇರವಾಗಿ ಒಪ್ಪಿಕೊಂಡಿಲ್ಲ. ಆದರೆ, ಅವರು ಆಗಾಗ ಡಿನ್ನರ್ ಡೇಟ್​ಗೆ ತೆರಳುತ್ತಾ ಇರುತ್ತಾರೆ. ಇವರು ಒಟ್ಟಾಗಿ ಪಾರ್ಟಿ ಮಾಡುತ್ತಾರೆ. ವಿದೇಶಕ್ಕೂ ಒಟ್ಟಾಗಿ ತೆರಳಿದ್ದೂ ಇದೆ.

ಜಾನ್ವಿ ಕಪೂರ್-ಶಿಖರ್ ಸಂಬಂಧವನ್ನು ಖಚಿತಪಡಿಸಿದ ಬೋನಿ ಕಪೂರ್
ಜಾನ್ವಿ-ಶಿಖರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 01, 2024 | 11:46 AM

Share

ಬಾಲಿವುಡ್​ನ ಖ್ಯಾತ ನಿರ್ಮಾಪಕ ಬೋನಿ ಕಪೂರ್ (Boney Kapoor) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಅವರ ನಿರ್ಮಾಣದ ‘ಮೈದಾನ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಇದು ಫುಟ್​ಬಾಲ್ ಕೋಚ್ ಸೈಯದ್ ಅಬ್ದುಲ್ ರಹೀಮ್ ಅವರ ಜೀವನ ಆಧರಿಸಿದೆ. ಸೈಯದ್ ಅವರ ಪಾತ್ರದಲ್ಲಿ ಅಜಯ್ ದೇವಗನ್ ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರದಲ್ಲಿ ಬೋನಿ ಕಪೂರ್ ಅವರು ಬ್ಯುಸಿ ಇದ್ದಾರೆ. ಈ ವೇಳೆ ಅವರು ಜಾನ್ವಿ ಕಪೂರ್ ಬಾಯ್​ಫ್ರೆಂಡ್ ಶಿಖರ್ ಪಹಾರಿಯಾ ಬಗ್ಗೆ ಮಾತನಾಡಿದ್ದಾರೆ.

ಜೂಮ್​ಗೆ ನೀಡಿದ ಸಂದರ್ಶನದಲ್ಲಿ ಬೋನಿ ಕಪೂರ್ ಮಾತನಾಡಿದ್ದಾರೆ. ‘ನನಗೆ ಶಿಖರ್ ಅಂದರೆ ಪ್ರೀತಿ. ಜಾನ್ವಿ ಅವನ ಜೊತೆ ಕಾಣಿಸಿಕೊಳ್ಳದೇ ಇರುವಾಗಲೂ ನನಗೆ ಅವರ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಅವರು ಎಂದಿಗೂ ನನ್ನ ಮಗಳನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ ಎಂದು ನನಗೆ ಅನಿಸಿತು. ಯಾವುದಾದರೂ ಸಹಾಯ ಬೇಕಾದರೆ ಅವರು ಯಾವಾಗಲೂ ಓಡಿ ಬರುತ್ತಾರೆ. ಅವರು ನನ್ನೊಂದಿಗೆ, ಜಾನ್ವಿ ಮತ್ತು ಅರ್ಜುನ್ ಅವರೊಂದಿಗೆ ಒಳ್ಳೆಯ ಸ್ನೇಹ ಹೊಂದಿದ್ದಾರೆ. ಹಾಗಾಗಿ ಅವರಂತಹ ವ್ಯಕ್ತಿ ನಮ್ಮ ಜೀವನದಲ್ಲಿ ಸಿಕ್ಕಿರುವುದು ನಮ್ಮ ಅದೃಷ್ಟ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರು.

ಜಾನ್ವಿ ಕಪೂರ್ ಅವರು ಶಿಖರ್ ಜೊತೆಗಿನ ಸಂಬಂಧವನ್ನು ನೇರವಾಗಿ ಒಪ್ಪಿಕೊಂಡಿಲ್ಲ. ಆದರೆ, ಅವರು ಆಗಾಗ ಡಿನ್ನರ್ ಡೇಟ್​ಗೆ ತೆರಳುತ್ತಾ ಇರುತ್ತಾರೆ. ಇವರು ಒಟ್ಟಾಗಿ ಪಾರ್ಟಿ ಮಾಡುತ್ತಾರೆ. ವಿದೇಶಕ್ಕೂ ಒಟ್ಟಾಗಿ ತೆರಳಿದ್ದೂ ಇದೆ. ಇತ್ತೀಚೆಗೆ ಜಾನ್ವಿ ಕಪೂರ್ ಅವರು ತಿರುಪತಿಗೆ ಹೆಚ್ಚಾಗಿ ಭೇಟಿ ನೀಡುತ್ತಿದ್ದಾರೆ. ಜಾನ್ವಿ ಕಪೂರ್ ಜೊತೆ ಶಿಖರ್ ಕೂಡ ಇದ್ದಾರೆ. ಕೇವಲ ಜಾನ್ವಿಗೆ ಮಾತ್ರವಲ್ಲದೆ ಅವರ ತಂದೆ ಬೋನಿ ಕಪೂರ್​ಗೂ ಶಿಖರ್ ಸಖತ್ ಇಷ್ಟ ಆಗಿದ್ದಾರೆ.

ಇದನ್ನೂ ಓದಿ: ಮಂಡಿ ಮೂಲಕ ತಿರುಮಲದ ಮೆಟ್ಟಿಲೇರಿದ ಜಾನ್ವಿ ಕಪೂರ್; ಇಲ್ಲಿದೆ ವಿಡಿಯೋ

ಜಾನ್ವಿ ಕಪೂರ್, ಶಿಖರ್ ಹಾಗೂ ಓರಿ ಕಳೆದ ವರ್ಷ ಏಪ್ರಿಲ್ 27ರಂದು ತಿರುಪತಿಗೆ ಭೇಟಿ ನೀಡಿದ್ದರು. ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಮೂವರ ಫೋಟೋ ಹಾಗೂ ವಿಡಿಯೋ ವೈರಲ್ ಆಗಿ ಸದ್ದು ಮಾಡಿತ್ತು.

ಯಾರು ಶಿಖರ್?

ಶಿಖರ್ ಪಹಾರಿಯಾ ಅವರು ಮಹಾರಾಷ್ಟ್ರ ಮಾಜಿ ಸಿಎಂ ಸುಶಿಲ್ ಕುಮಾರ್ ಶಿಂದೆ ಅವರ ಮೊಮ್ಮೊಗ. ಶಿಖರ್ ಹಾಗೂ ಜಾನ್ವಿ ಅವರು ಪ್ರೀತಿಯಲ್ಲಿ ಇದ್ದರು. ನಂತರ ಬ್ರೇಕಪ್ ಆಯಿತು. ನಂತರ ಇಬ್ಬರೂ ಪ್ಯಾಚಪ್ ಮಾಡಿಕೊಂಡರು. ಈಗ ಇಬ್ಬರೂ ಮತ್ತೆ ಡೇಟಿಂಗ್ ಆರಂಭಿಸಿದ್ದಾರೆ. ಬೋನಿ ಕಪೂರ್ ಜೊತೆಗೂ ಶಿಖರ್​ ಆಗಾಗ ಕಾಣಿಸಿಕೊಳ್ಳುತ್ತಾ ಇರುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್