AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿ ಹರ ವೀರ ಮಲ್ಲು’ ಸಿನಿಮಾ ವಿರುದ್ಧ ಬಾಯ್​ಕಾಟ್ ಟ್ರೆಂಡ್: ಕಾರಣವೇನು?

Hari Hara Veera Mallu: ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ನಾಳೆ (ಜುಲೈ 24) ಬಿಡುಗಡೆ ಆಗುತ್ತಿದೆ. ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಸಹ ಜೋರಾಗಿದೆ. ಪವನ್ ಅಭಿಮಾನಿಗಳು ಸಿನಿಮಾ ಪರ ಜೋರಾದ ಪ್ರಚಾರ ಮಾಡುತ್ತಿದ್ದಾರೆ. ಆದರೆ ಮತ್ತೊಂದು ‘ಹರಿ ಹರ ವೀರ ಮಲ್ಲು’ ಸಿನಿಮಾ ವಿರುದ್ಧ ಬಾಯ್​ಕಾಟ್ ಟ್ರೆಂಡ್ ನಡೆಯುತ್ತಿದೆ.

‘ಹರಿ ಹರ ವೀರ ಮಲ್ಲು’ ಸಿನಿಮಾ ವಿರುದ್ಧ ಬಾಯ್​ಕಾಟ್ ಟ್ರೆಂಡ್: ಕಾರಣವೇನು?
Hari Hara Veera Mallu
ಮಂಜುನಾಥ ಸಿ.
|

Updated on: Jul 23, 2025 | 3:05 PM

Share

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ನಾಳೆ (ಜುಲೈ 24) ಬಿಡುಗಡೆ ಆಗಲಿದೆ. ಸಿನಿಮಾದ ಬಗ್ಗೆ ಹಲವು ಕಾರಣಗಳಿಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಇದೆ. ಶುರುವಾಗಿ ಆರು ವರ್ಷಗಳ ಬಳಿಕ ಈ ಸಿನಿಮಾ ತೆರೆ ಕಾಣುತ್ತಿದೆ. ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆದ ಬಳಿಕ ಬಿಡುಗಡೆ ಆಗುತ್ತಿರುವ ಅವರ ಮೊದಲ ಸಿನಿಮಾ ಇದು. ಮೂರು ವರ್ಷಗಳ ಬಳಿಕ ಅವರು ಸೋಲೊ ನಾಯಕ ಆಗಿರುವ ಸಿನಿಮಾ ತೆರೆಗೆ ಬರುತ್ತಿದೆ. ಅದರ ಜೊತೆಗೆ ಪವನ್ ಕಲ್ಯಾಣ್ ನಟಿಸಿರುವ ಮೊದಲ ಐತಿಹಾಸಕ ಹಿನ್ನೆಲೆಯುಳ್ಳ ಸಿನಿಮಾ ಇದು.

ಸಿನಿಮಾದ ಬಗ್ಗೆ ನಿರೀಕ್ಷೆಗಳು ಒತ್ತಟ್ಟಿಗಾದರೆ ಸಿನಿಮಾದ ವಿರುದ್ಧ ಟೀಕೆಯೂ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ‘ಬಾಯ್ಕಾಟ್ ಎಚ್​ಎಚ್​ವಿಎಂ’ (BoycottHHVM) ಟ್ರೆಂಡ್ ಮಾಡಲಾಗುತ್ತಿದೆ. ಆಂಧ್ರ ಪ್ರದೇಶದ ವಿಪಕ್ಷವಾಗಿರುವ ವೈಸಿಪಿಯ ಸದಸ್ಯರು, ಜಗನ್ ಮೋಹನ್ ರೆಡ್ಡಿಯ ಅಭಿಮಾನಿಗಳು ಬಾಯ್​ಕಾಟ್ ಟ್ರೆಂಡ್ ಮಾಡುತ್ತಿದ್ದಾರೆ. ಟ್ವಿಟ್ಟರ್​​ನಲ್ಲಿ ಸಿನಿಮಾ ವಿರುದ್ಧವಾಗಿ ಹಲವು ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ.

‘ಸಿನಿಮಾ ಕಾರ್ಯಕ್ರಮದಲ್ಲಿ ರಾಜಕಾರಣ ಮಾಡುವ ಪವನ್ ಕಲ್ಯಾಣ್​ಗೆ ಬುದ್ಧಿ ಕಲಿಸಲು ‘ಹರಿ ಹರ ವೀರ ಮಲ್ಲು’ ಸಿನಿಮಾ ಅನ್ನು ಬಾಯ್​ಕಾಟ್ ಮಾಡಬೇಕಿದೆ. ಯಾವುದೇ ವೈಸಿಪಿ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು ಚಿತ್ರಮಂದಿರದಲ್ಲಿ ಹರಿ ಹರ ವೀರ ಮಲ್ಲು ಸಿನಿಮಾ ನೋಡಬೇಡಿ’ ಎಂದು ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ. ಕೆಲವರಂತೂ ‘ನಾನು ಹರಿ ಹರ ವೀರ ಮಲ್ಲು’ ಸಿನಿಮಾ ನೋಡುವುದಿಲ್ಲ ಮತ್ತು ಇನ್ನೂ 20 ಮಂದಿಯನ್ನು ನೋಡದಂತೆ ತಡೆಯುತ್ತೇನೆ’ ಎಂದು ಸವಾಲುಗಳನ್ನು ಹಾಕಿದ್ದಾರೆ.

ಇದನ್ನೂ ಓದಿ:‘ಹರಿ ಹರ ವೀರ ಮಲ್ಲು’ ಸಿನಿಮಾ ಟಿಕೆಟ್ ದರ: ಯಾವ ರಾಜ್ಯದಲ್ಲಿ ಎಷ್ಟಿದೆ?

ಸಾಮಾಜಿಕ ಜಾಲತಾಣದಲ್ಲಿ ಚಾಲ್ತಿಯಲ್ಲಿರುವ ಈ ‘ಹರಿ ಹರ ವೀರ ಮಲ್ಲು ಬಾಯ್​ಕಾಟ್ ಟ್ರೆಂಡ್ ಬಗ್ಗೆ ಮಾತನಾಡಿರುವ ಪವನ್ ಕಲ್ಯಾಣ್, ‘ಯಾವ ಕಾರಣಕ್ಕೆ ಬಾಯ್​ಕಾಟ್ ಮಾಡುತ್ತಾರಂತೆ?’ ಎಂದು ಪ್ರಶ್ನೆ ಮಾಡಿದ್ದಾರೆ. ಮುಂದುವರೆದು, ‘ಅವರಿಗೆ ಸಿನಿಮಾ ಬಾಯ್​ಕಾಟ್ ಮಾಡಲು ಯಾವುದೇ ಪ್ರತ್ಯಕ್ಷ ಕಾರಣ ಇಲ್ಲ. ಅವರದ್ದು ಏನಿದ್ದರು ವೈಯಕ್ತಿಕ ದ್ವೇಷವಷ್ಟೆ. ಸಿನಿಮಾ ಬಿಡುಗಡೆ ಆಗುವುದು ಪಕ್ಕಾ, ಅಭಿಮಾನಿಗಳು ಸಿನಿಮಾ ನೋಡುವುದು ಪಕ್ಕಾ, ಅಂಥಹಾ ನಕಲಿ ಟ್ರೆಂಡ್​ಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ