ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಇನ್ನಿಲ್ಲ; ಹೈದರಾಬಾದ್‌ನಲ್ಲಿ ನಿಧನ
‘ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ.
‘ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ. ಹಾಸನ ಮೂಲದ ಸಕಲೇಶಪುರದನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದ ಶೋಭಿತಾ ಅವರು ಮದುವೆ ಬಳಿಕ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿತ್ತು.
ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ನಟಿಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಶನಿವಾರ (ನವೆಂಬರ್ 30) ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಶನಿವಾರವಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿ ಶೇರ್ ಮಾಡಿದ್ದರು. ಆ ಬಳಿಕ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದ್ದು ಅಚ್ಚರಿಗೆ ಕಾರಣ ಆಗಿದೆ.
ಇದನ್ನೂ ಓದಿ: ನಟಿ ಸಮಂತಾ ರುತ್ ಪ್ರಭು ತಂದೆ ಜೋಸೆಫ್ ಪ್ರಭು ನಿಧನ
ಶೋಭಿತಾ ಮದುವೆ ಆದಾಗಿಂದ ಇಂಡಸ್ಟ್ರಿಯಿಂದ ಅಂತರ ಕಾಯ್ದುಕೊಂಡಿದ್ದರು. ಮರಣೋತ್ತರ ಪರೀಕ್ಷೆ ನಂತರ ಬೆಂಗಳೂರಿಗೆ ಮೃತದೇಹ ತರುವ ಸಾಧ್ಯತೆ ಇದೆ. ಅವರ ನಿಧನಕ್ಕೆ ಸಿನಿಮಾ ಮತ್ತು ಸೀರಿಯಲ್ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯವಾಗಿದ್ದ ಶೋಭಿತಾ ಅವರು ಏಕಾಏಕಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಎಲ್ಲರಿಗೂ ಆಘಾತ ಆಗಿದೆ.
ಇದನ್ನೂ ಓದಿ: ಸಾಲ ಪಡೆದಿದ್ದ ವ್ಯಕ್ತಿಗೆ ನಗ್ನ ಚಿತ್ರ ಹರಿಬಿಡುವ ಬೆದರಿಕೆ: ಕಿರುಕುಳಕ್ಕೆ ನೊಂದು ಕ್ಯಾಮರಾಮನ್ ಆತ್ಮಹತ್ಯೆ
ಶೋಭಿತಾ ಅವರಿಗೆ 30 ವರ್ಷ ವಯಸ್ಸು ಆಗಿತ್ತು. 12ಕ್ಕೂ ಅಧಿಕ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಮಂಗಳಗೌರಿ ಮದುವೆ, ಗಾಳಿಪಟ, ಕೃಷ್ಣ ರುಕ್ಮಿಣಿ, ಮನೆ ದೇವ್ರು, ಅಮ್ಮಾವ್ರು, ದೀಪವು ನಿನ್ನದೇ ಗಾಳಿಯೂ ನಿನ್ನದೇ ಮುಂತಾದ ಧಾರಾವಾಹಿಗಳ ಮೂಲಕ ಅವರು ಪರಿಚಿತರಾಗಿದ್ದರು. ಶೋಭಿತಾ ನಿಧನಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಅವರ ಸಾವಿಗೆ ಕಾರಣ ಏನು ಎಂಬುದು ತಿಳಿಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 6:34 pm, Sun, 1 December 24