ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?

Brahmastra | Lucky Man: ‘ಬ್ರಹ್ಮಾಸ್ತ್ರ’ ಚಿತ್ರದ ಟ್ರೇಲರ್​ ಹೆಚ್ಚು ಜನರಿಗೆ ಇಷ್ಟ ಆಗಿಲ್ಲ. ಆದರೂ ಕೂಡ ಬೆಂಗಳೂರಿನಲ್ಲಿ ಈ ಸಿನಿಮಾವನ್ನು ಜನರು ಮುಗಿಬಿದ್ದು ಬುಕ್​ ಮಾಡುತ್ತಿದ್ದಾರೆ.

ಸೆ.9ಕ್ಕೆ ‘ಲಕ್ಕಿ ಮ್ಯಾನ್​’ ವರ್ಸಸ್​ ‘ಬ್ರಹ್ಮಾಸ್ತ್ರ’: ಬುಕ್​ ಮೈ ಶೋನಲ್ಲಿ ಹೇಗಿದೆ ಬಲಾಬಲ?
ಬ್ರಹ್ಮಾಸ್ತ್ರ, ಲಕ್ಕಿ ಮ್ಯಾನ್ ಚಿತ್ರಗಳ ಪೋಸ್ಟರ್​​
Follow us
TV9 Web
| Updated By: ಮದನ್​ ಕುಮಾರ್​

Updated on: Sep 08, 2022 | 7:30 AM

ದಕ್ಷಿಣ ಭಾರತದ ಸಿನಿಮಾಗಳ ಎದುರಿನಲ್ಲಿ ಬಾಲಿವುಡ್​ ಸಿನಿಮಾಗಳು ಮಂಕಾಗಿದೆ. ಭಾರಿ ನಿರೀಕ್ಷೆ ಮೂಡಿಸಿದ್ದ ಕೆಲವು ಹಿಂದಿ ಸಿನಿಮಾಗಳು ಈ ವರ್ಷ ಮಕಾಡೆ ಮಲಗಿದವು. ಖಾನ್​ತ್ರಯರಾದ ಸಲ್ಮಾನ್​ ಖಾನ್​, ಶಾರುಖ್​ ಖಾನ್​, ಆಮಿರ್​ ಖಾನ್​ ಅವರ ಸಿನಿಮಾಗಳು ಬಾಲವುಡ್​ನಲ್ಲಿ ಮೋಡಿ ಮಾಡುತ್ತಿಲ್ಲ. ಅಷ್ಟೇ ಅಲ್ಲದೇ ಅಕ್ಷಯ್​ ಕುಮಾರ್, ರಣಬೀರ್​ ಕಪೂರ್ (Ranbir Kapoor)​, ರಣವೀರ್​ ಸಿಂಗ್​ ನಟನೆಯ ಚಿತ್ರಗಳು ಕೂಡ ಲಾಭ ಕಂಡಿಲ್ಲ. ಈ ಶುಕ್ರವಾರ (ಸೆ.9) ರಣಬೀರ್​ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾ ರಿಲೀಸ್​ ಆಗುತ್ತಿದೆ. ಇತ್ತ, ಸ್ಯಾಂಡಲ್​ವುಡ್​ನಿಂದ ಪುನೀತ್​ ರಾಜ್​ಕುಮಾರ್​ ಅಭಿನಯದ ‘ಲಕ್ಕಿ ಮ್ಯಾನ್​’ (Lucky Man) ಚಿತ್ರ ಕೂಡ ಅದೇ ದಿನ ತೆರೆಕಾಣುತ್ತಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಗಳು ಮುಖಾಮುಖಿ ಆಗಲಿವೆ.

ಈ ಎರಡೂ ಸಿನಿಮಾಗಳ ಬುಕಿಂಗ್​ ಓಪನ್​ ಆಗಿದೆ. ಬೇರೆ ಬೇರೆ ಕಾರಣಗಳಿಂದಾಗಿ ಈ ಚಿತ್ರಗಳು ಗಮನ ಸೆಳೆಯುತ್ತಿವೆ. ಪುನೀತ್​ ರಾಜ್​ಕುಮಾರ್​ ಅವರು ದೇವರ ಪಾತ್ರದಲ್ಲಿ ನಟಿಸಿದ್ದಾರೆ ಎಂಬ ಕಾರಣದಿಂದ ‘ಲಕ್ಕಿ ಮ್ಯಾನ್’ ಚಿತ್ರದ ಮೇಲೆ ಅಭಿಮಾನಿಗಳಿಗೆ ವಿಶೇಷ ಪ್ರೀತಿ ಇದೆ. ಹಾಗಾಗಿ ಮೊದಲ ದಿನ ಈ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ.

‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಬಹುತಾರಾಗಣ ಇದೆ. ಆಲಿಯಾ ಭಟ್​, ರಣಬೀರ್ ಕಪೂರ್​, ಅಮಿತಾಭ್​ ಬಚ್ಚನ್​, ನಾಗಾರ್ಜುನ ಮುಂತಾದ ಸ್ಟಾರ್​ ಕಲಾವಿದರು ಇದರಲ್ಲಿ ನಟಿಸಿದ್ದಾರೆ. ಅಯಾನ್​ ಮುಖರ್ಜಿ ನಿರ್ದೇಶನ ಮಾಡಿರುವ ಈ ಚಿತ್ರ ದೊಡ್ಡ ಮಟ್ಟದಲ್ಲಿ ರಿಲೀಸ್​ ಆಗುತ್ತಿದೆ. ಸಾವಿರಾರು ಚಿತ್ರಮಂದಿರಗಳು ಈ ಸಿನಿಮಾಗಾಗಿ ಮೀಸಲಾಗಿವೆ.

ಇದನ್ನೂ ಓದಿ
Image
‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
Image
‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ
Image
ಪುನೀತ್ ನಟನೆಯ ‘ಲಕ್ಕಿ ಮ್ಯಾನ್​’ ಚಿತ್ರದ ಆಡಿಯೋ ರಿಲೀಸ್ ಲೈವ್ ನೋಡಿ
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

‘ಬ್ರಹ್ಮಾಸ್ತ್ರ’ ಚಿತ್ರದ ಟ್ರೇಲರ್​ ಹೆಚ್ಚು ಜನರಿಗೆ ಇಷ್ಟ ಆಗಿಲ್ಲ. ಆದರೂ ಕೂಡ ಬೆಂಗಳೂರಿನಲ್ಲಿ ಈ ಸಿನಿಮಾವನ್ನು ಜನರು ಮುಗಿಬಿದ್ದು ಬುಕ್​ ಮಾಡುತ್ತಿದ್ದಾರೆ. ಬುಕ್​ ಮೈ ಶೋನಲ್ಲಿ ಈ ಚಿತ್ರಕ್ಕೆ 3.6 ಲಕ್ಷಕ್ಕೂ ಅಧಿಕ ಮಂದಿ ಲೈಕ್​ ಮಾಡಿದ್ದಾರೆ. ಆದರೆ ‘ಲಕ್ಕಿ ಮ್ಯಾನ್’ ಸಿನಿಮಾವನ್ನು ಲೈಕ್​ 6 ಸಾವಿರ ಜನರು ಮಾತ್ರ ಲೈಕ್​ ಮಾಡಿದ್ದಾರೆ. ಹಾಗಂತ ಬುಕಿಂಗ್​ ವಿಚಾರದಲ್ಲಿ ‘ಲಕ್ಕಿ ಮ್ಯಾನ್​’ ಸಿನಿಮಾ ಹಿಂದೆ ಬಿದ್ದಿಲ್ಲ. ಇಂದು (ಸೆ.8) ಅನೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಈ ಚಿತ್ರದ ಪ್ರೀಮಿಯರ್​ ಪ್ರದರ್ಶನ ನಡೆಯುತ್ತಿದೆ. ಬಹುತೇಕ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ.

‘ಲಕ್ಕಿ ಮ್ಯಾನ್​’ ಚಿತ್ರಕ್ಕೆ ಎಸ್​. ನಾಗೇಂದ್ರ ಪ್ರಸಾದ್​ ನಿರ್ದೇಶನ ಮಾಡಿದ್ದಾರೆ. ಡಾರ್ಲಿಂಗ್​ ಕೃಷ್ಣ, ಸಂಗೀತಾ ಶೃಂಗೇರಿ, ರೋಷಿನಿ ಪ್ರಕಾಶ್, ಪ್ರಭುದೇವ ಅವರಿಂದಾಗಿ ಈ ಚಿತ್ರ ಹೆಚ್ಚು ನಿರೀಕ್ಷೆ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ